ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ನಂದಾ ಪ್ರಸ್ಟಿ ನಿಧನ; ಪ್ರಧಾನಿ ಮೋದಿಯವರಿಂದ ಸಂತಾಪ

ನಂದಾ ಮಾಸ್ಟರ್​ ಎಂದೇ ಖ್ಯಾತರಾಗಿದ್ದ ಇವರು ಈ ಬಾರಿಯ ನವೆಂಬರ್​​ ತಿಂಗಳ 9ರಂದು ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್​ ಕೈಯಿಂದ ಸ್ವೀಕರಿಸಿದ್ದರು. ಅಂದು ರಾಮನಾಥ ಕೋವಿಂದ್ ತಲೆ ಮೇಲೆ ಕೈಯಿಟ್ಟು ಆಶೀರ್ವಾದ ಮಾಡಿ ಪ್ರಶಸ್ತಿ ಸ್ವೀಕರಿಸಿದ್ದರು.

ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ನಂದಾ ಪ್ರಸ್ಟಿ ನಿಧನ; ಪ್ರಧಾನಿ ಮೋದಿಯವರಿಂದ ಸಂತಾಪ
ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಕೈಯಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದ ನಂದಾ ಪ್ರಸ್ಟಿ
Follow us
| Updated By: Lakshmi Hegde

Updated on: Dec 07, 2021 | 5:25 PM

ಒಡಿಶಾದ ಅಕ್ಷರ ಸಂತ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ನಂದಾ ಪ್ರಸ್ಟಿ ಅವರು ಇಂದು ನಿಧನರಾದರು. 102 ವರ್ಷದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ವಾರ ಒಡಿಶಾದ ಜೈಪುರ ಜಿಲ್ಲೆಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪ್ರಸ್ಟಿ ಅವರು ಕಳೆದ ಒಂದು ತಿಂಗಳಿಂದಲೂ ಜ್ವರ, ಕೆಮ್ಮು ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ನಂದಾ ಮಾಸ್ಟರ್​ ಎಂದೇ ಖ್ಯಾತರಾಗಿದ್ದ ಇವರು ಈ ಬಾರಿಯ ನವೆಂಬರ್​​ ತಿಂಗಳ 9ರಂದು ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್​ ಕೈಯಿಂದ ಸ್ವೀಕರಿಸಿದ್ದರು. ಅಂದು ರಾಮನಾಥ ಕೋವಿಂದ್ ತಲೆ ಮೇಲೆ ಕೈಯಿಟ್ಟು ಆಶೀರ್ವಾದ ಮಾಡಿ ಪ್ರಶಸ್ತಿ ಸ್ವೀಕರಿಸಿದ್ದರು. ನಂದಾ ಪ್ರಸ್ಟಿ ಹಲವು ದಶಕಗಳಿಂದಲೂ ಒಡಿಶಾದ ಜೈಪುರ ಜಿಲ್ಲೆಯಲ್ಲಿ ಅನೇಕ ಮಕ್ಕಳು ಮತ್ತು ದೊಡ್ಡವರಿಗೆ ಉಚಿತ ಶಿಕ್ಷಣ ನೀಡುತ್ತಿದ್ದರು. ಹಣಕಾಸಿನ ಸಮಸ್ಯೆಯಿಂದಾಗಿ ಏಳನೇ ತರಗತಿಗೇ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದ ಇವರು ತಮ್ಮ ಹಳ್ಳಿಯಲ್ಲಿ ಅನಕ್ಷರತೆ ಹೋಗಲಾಡಿಸಲು ಪಣತೊಟ್ಟಿದ್ದರು. ಸ್ವಾತಂತ್ರ್ಯ ಬಂದಾಗಿನಿಂದಲೂ ಮುಕ್ತ ಮನಸಿನಿಂದ ಉಚಿತವಾಗಿ ಶಿಕ್ಷಣ ನೀಡುತ್ತಿದ್ದರು.

ಪ್ರಧಾನಿ ಮೋದಿ ಸಂತಾಪ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ನಂದ ಪ್ರಸ್ಟಿ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಒಡಿಶಾದಲ್ಲಿ ಶಿಕ್ಷಣ ಎಂಬ ಸಂತೋಷವನ್ನು ಹಬ್ಬಿಸಿದ ನಂದಾ ಸರ್​ ಸದಾ ಕಾಲಕ್ಕೂ ಸ್ಮರಣೀಯರು. ಪದ್ಮಶ್ರೀ ಪ್ರಶಸ್ತಿ ಸಮಾರಂಭದಲ್ಲಿ ಎಲ್ಲರ ಗಮನಸೆಳೆದಿದ್ದರು ಎಂದು ಟ್ವೀಟ್ ಮಾಡಿ, ಫೋಟೋ ಶೇರ್​ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Beijing Olympics: ಬೀಜಿಂಗ್ ಒಲಿಂಪಿಕ್ಸ್​ಗೆ ಅಮೆರಿಕ ಬಹಿಷ್ಕಾರ: ಬಹಿರಂಗ ಎಚ್ಚರಿಕೆ ನೀಡಿದ ಚೀನಾ

ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ