ಮುಲಾಯಂ ಸಿಂಗ್ ಯಾದವ್​​ಗೆ ಪದ್ಮವಿಭೂಷಣ ಅಲ್ಲ, ಭಾರತ ರತ್ನ ನೀಡಬೇಕಿತ್ತು: ಸಮಾಜವಾದಿ ಪಕ್ಷದ ನಾಯಕರ ಒತ್ತಾಯ

ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ಹೊರತುಪಡಿಸಿದರೆ, ಮಣ್ಣಿನ ಮಗ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರಿಗೆ ಬೇರೆ ಯಾವುದೂ ಗೌರವವಲ್ಲ ಎಂದು ಸಮಾಜವಾದಿ ಪಕ್ಷದ ನಾಯಕರು ಹೇಳಿದ್ದಾರೆ.

ಮುಲಾಯಂ ಸಿಂಗ್ ಯಾದವ್​​ಗೆ ಪದ್ಮವಿಭೂಷಣ ಅಲ್ಲ, ಭಾರತ ರತ್ನ ನೀಡಬೇಕಿತ್ತು: ಸಮಾಜವಾದಿ ಪಕ್ಷದ ನಾಯಕರ ಒತ್ತಾಯ
ಮುಲಾಯಂ ಸಿಂಗ್ ಯಾದವ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jan 26, 2023 | 4:56 PM

ಲಖನೌ: ಮುಲಾಯಂ ಸಿಂಗ್ ಯಾದವ್ (Mulayam Singh Yadav) ಅವರಿಗೆ ಪದ್ಮವಿಭೂಷಣ ಪ್ರಶಸ್ತಿ (Padma Vibhushan) ನೀಡುವ ಮೂಲಕ ಸರ್ಕಾರವು ಅವರ ಸ್ಥಾನಮಾನ ಮತ್ತು ದೇಶಕ್ಕೆ ನೀಡಿದ ಕೊಡುಗೆಯನ್ನು ಅಪಹಾಸ್ಯ ಮಾಡಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya) ಹೇಳಿದ್ದಾರೆ. ಮೌರ್ಯ ಮತ್ತು ಪಕ್ಷದ ಇತರ ನಾಯಕರು ಸಮಾಜವಾದಿ ಪಕ್ಷದ ಸಂಸ್ಥಾಪಕರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ. ಯಾದವ್ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣವನ್ನು (ಮರಣೋತ್ತರ) ನೀಡಲಾಯಿತು.

ಪ್ರಶಸ್ತಿಗೆ ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷದ ಶಾಸಕ ಎಸ್‌ಪಿ ಮೌರ್ಯ, ನೇತಾಜಿ ಶ್ರೀ ಮುಲಾಯಂ ಸಿಂಗ್ ಯಾದವ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ನೀಡುವ ಮೂಲಕ ಭಾರತ ಸರ್ಕಾರವು ನೇತಾಜಿಯವರ ಘನತೆ, ಕೆಲಸ ಮತ್ತು ರಾಷ್ಟ್ರಕ್ಕೆ ನೀಡಿದ ಕೊಡುಗೆಗಳನ್ನು ಅಪಹಾಸ್ಯ ಮಾಡಿದೆ. ಗೌರವಿಸಿದರೆ ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕಿತ್ತು ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಪಕ್ಷದ ವಕ್ತಾರ ಐಪಿ ಸಿಂಗ್ ಕೂಡ ಇದೇ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:iNCOVACC: ಭಾರತ್ ಬಯೋಟೆಕ್‌ ತಯಾರಿಸಿದ ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಬಿಡುಗಡೆ

ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ಹೊರತುಪಡಿಸಿದರೆ, ಮಣ್ಣಿನ ಮಗ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರಿಗೆ ಬೇರೆ ಯಾವುದೂ ಗೌರವವಲ್ಲ. ಯಾವುದೇ ವಿಳಂಬವಿಲ್ಲದೆ ನಮ್ಮ ಗೌರವಾನ್ವಿತ ನೇತಾಜಿಗೆ ಭಾರತ ರತ್ನ ನೀಡುವ ಘೋಷಣೆಯನ್ನು ಮಾಡಬೇಕು ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ.

ಸಮಾಜವಾದಿ ಪಕ್ಷದ ಸಂಸ್ಥಾಪಕ ಮತ್ತು ಮೂರು ಬಾರಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದ ಮುಲಾಯಂ ಸಿಂಗ್ ಯಾದವ್ ಕಳೆದ ವರ್ಷ ಅಕ್ಟೋಬರ್ 10 ರಂದು ನಿಧನರಾದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ