ಲಖನೌ: ಮುಲಾಯಂ ಸಿಂಗ್ ಯಾದವ್ (Mulayam Singh Yadav) ಅವರಿಗೆ ಪದ್ಮವಿಭೂಷಣ ಪ್ರಶಸ್ತಿ (Padma Vibhushan) ನೀಡುವ ಮೂಲಕ ಸರ್ಕಾರವು ಅವರ ಸ್ಥಾನಮಾನ ಮತ್ತು ದೇಶಕ್ಕೆ ನೀಡಿದ ಕೊಡುಗೆಯನ್ನು ಅಪಹಾಸ್ಯ ಮಾಡಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya) ಹೇಳಿದ್ದಾರೆ. ಮೌರ್ಯ ಮತ್ತು ಪಕ್ಷದ ಇತರ ನಾಯಕರು ಸಮಾಜವಾದಿ ಪಕ್ಷದ ಸಂಸ್ಥಾಪಕರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ. ಯಾದವ್ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣವನ್ನು (ಮರಣೋತ್ತರ) ನೀಡಲಾಯಿತು.
ಪ್ರಶಸ್ತಿಗೆ ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷದ ಶಾಸಕ ಎಸ್‌ಪಿ ಮೌರ್ಯ, ನೇತಾಜಿ ಶ್ರೀ ಮುಲಾಯಂ ಸಿಂಗ್ ಯಾದವ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ನೀಡುವ ಮೂಲಕ ಭಾರತ ಸರ್ಕಾರವು ನೇತಾಜಿಯವರ ಘನತೆ, ಕೆಲಸ ಮತ್ತು ರಾಷ್ಟ್ರಕ್ಕೆ ನೀಡಿದ ಕೊಡುಗೆಗಳನ್ನು ಅಪಹಾಸ್ಯ ಮಾಡಿದೆ. ಗೌರವಿಸಿದರೆ ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕಿತ್ತು ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಪಕ್ಷದ ವಕ್ತಾರ ಐಪಿ ಸಿಂಗ್ ಕೂಡ ಇದೇ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:iNCOVACC: ಭಾರತ್ ಬಯೋಟೆಕ್ ತಯಾರಿಸಿದ ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಬಿಡುಗಡೆ
ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ಹೊರತುಪಡಿಸಿದರೆ, ಮಣ್ಣಿನ ಮಗ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರಿಗೆ ಬೇರೆ ಯಾವುದೂ ಗೌರವವಲ್ಲ. ಯಾವುದೇ ವಿಳಂಬವಿಲ್ಲದೆ ನಮ್ಮ ಗೌರವಾನ್ವಿತ ನೇತಾಜಿಗೆ ಭಾರತ ರತ್ನ ನೀಡುವ ಘೋಷಣೆಯನ್ನು ಮಾಡಬೇಕು ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ.
ಸಮಾಜವಾದಿ ಪಕ್ಷದ ಸಂಸ್ಥಾಪಕ ಮತ್ತು ಮೂರು ಬಾರಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದ ಮುಲಾಯಂ ಸಿಂಗ್ ಯಾದವ್ ಕಳೆದ ವರ್ಷ ಅಕ್ಟೋಬರ್ 10 ರಂದು ನಿಧನರಾದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ