ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ; ಶಿವಮೊಗ್ಗದ ಪ್ರವಾಸಿಗ ಸಾವು

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಪತ್ತೆಹಚ್ಚಲು ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಪಹಲ್ಗಾಮ್‌ನಲ್ಲಿ ಇಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಓರ್ವ ಪ್ರವಾಸಿಗ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಮತ್ತು ವೈದ್ಯಕೀಯ ತಂಡಗಳು ಪ್ರದೇಶಕ್ಕೆ ಧಾವಿಸಿವೆ.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ; ಶಿವಮೊಗ್ಗದ ಪ್ರವಾಸಿಗ ಸಾವು
Security Force In Pahalgam

Updated on: Apr 22, 2025 | 6:08 PM

ಶ್ರೀನಗರ, ಏಪ್ರಿಲ್ 22: ಜಮ್ಮು ಕಾಶ್ಮೀರದ ಪಹಲ್ಗಾಮ್‌ನ (Pahalgam Terror Attack)
ಬೈಸರನ್ ಕಣಿವೆಯ ಮೇಲಿನ ಹುಲ್ಲುಗಾವಲುಗಳಲ್ಲಿ ಇಂದು ಗುಂಡಿನ ದಾಳಿ ನಡೆದಿದೆ. ಈ ಪ್ರದೇಶವನ್ನು ಕಾಲ್ನಡಿಗೆಯಲ್ಲಿ ಅಥವಾ ಕುದುರೆಯ ಮೇಲೆ ಮಾತ್ರ ತಲುಪಲು ಸಾಧ್ಯ. ಉಗ್ರರು ಬಚ್ಚಿಟ್ಟುಕೊಂಡು ಗುಂಡು ಹಾರಿಸಿದ್ದಾರೆ. ಕಾಡುಗಳು, ಸ್ಫಟಿಕದಂತಹ ಸ್ಪಷ್ಟ ಸರೋವರಗಳು ಮತ್ತು ವಿಸ್ತಾರವಾದ ಹುಲ್ಲುಗಾವಲುಗಳಿಗೆ ಹೆಸರುವಾಸಿಯಾದ ಪಹಲ್ಗಾಮ್ ಜನಪ್ರಿಯ ಪ್ರವಾಸಿ ತಾಣವಾಗಿದೆ. ಈ ಪ್ರವಾಸಿ ತಾಣದಲ್ಲಿಯೇ ಉಗ್ರರಿಂದ ಗುಂಡಿನ ದಾಳಿ ನಡೆದಿದೆ. ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗ ನಿವಾಸಿ ಸಾವನ್ನಪ್ಪಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರಿಂದ ಕೃತ್ಯ ನಡೆದಿದೆ. ಉಗ್ರರ ದಾಳಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು. ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ.

ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅಲ್ಲಿ ಅವರು ಜಮ್ಮು ವಿಭಾಗದ ಮೇಲೆ ವಿಶೇಷ ಗಮನ ಹರಿಸಿ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಆದೇಶಗಳನ್ನು ನೀಡಿದ್ದರು ಎಂಬುದು ಗಮನಾರ್ಹ ಸಂಗತಿ.

ಇದನ್ನೂ ಓದಿ
ರಾಜ್ಯಸಭೆಯಲ್ಲಿ ಅಸಂಸದೀಯ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆ
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು


ಪಹಲ್ಗಾಮ್​ನ ಉಗ್ರರ ದಾಳಿಗೆ ಜಮ್ಮು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಈ ಘಟನೆ ಕೇಳಿ ತೀವ್ರ ಆಘಾತವಾಗಿದೆ. ನಮ್ಮ ಪ್ರವಾಸಿಗರ ಮೇಲಿನ ದಾಳಿ ಅಮಾನವೀಯ. ಈ ದಾಳಿ ನಡೆಸಿದವರು ಮನುಷ್ಯರೇ ಅಲ್ಲ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳನ್ನು ಸೂಚಿಸುತ್ತಿದ್ದೇನೆ. ನನ್ನ ಸಂಪುಟದ ಸಚಿವರ ಜೊತೆ ಮಾತನಾಡಿದ್ದೇನೆ. ಅವರು ಈ ದಾಳಿಯಲ್ಲಿ ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಸೌಲಭ್ಯ ಒದಗಿಸುವುದಾಗಿ ತಿಳಿಸಿದ್ದಾರೆ ಎಂದಿದ್ದಾರೆ.


ಇದನ್ನೂ ಓದಿ: ಪಾಕಿಸ್ತಾನದಲ್ಲಿ ಗುಂಡಿನ ಚಕಮಕಿ, ಸೇನಾ ನಾಯಕ ಸಾವು ಹಾಗೂ 10 ಉಗ್ರರ ಹತ್ಯೆ

ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕೂಡ
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಆ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡುವಂತೆ ಕೇಂದ್ರ ಗೃಹ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:46 pm, Tue, 22 April 25