AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pahalgam Terrorist Attack: ಪಹಲ್ಗಾಮ್ ಉಗ್ರ ದಾಳಿ, ಸರ್ವಪಕ್ಷ ಸಭೆ ಕರೆದ ಪ್ರಧಾನಿ ಮೋದಿ

ಪಹಲ್ಗಾಮ್​ನಲ್ಲಿ ನಡೆದ ದಾಳಿ ಹಾಗೂ ಮುಮದಿನ ನಿರ್ಧಾರಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರವು ಸರ್ವಪಕ್ಷ ಸಭೆ ಕರೆದಿದೆ. ಮಂಗಳವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯಿಂದ ಇಡೀ ದೇಶ ದುಃಖಿತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಭಯೋತ್ಪಾದನೆಯನ್ನು ಹತ್ತಿಕ್ಕಲು ಮತ್ತು ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ನಿರಂತರವಾಗಿ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ.

Pahalgam Terrorist Attack: ಪಹಲ್ಗಾಮ್ ಉಗ್ರ ದಾಳಿ, ಸರ್ವಪಕ್ಷ ಸಭೆ ಕರೆದ ಪ್ರಧಾನಿ ಮೋದಿ
ನರೇಂದ್ರ ಮೋದಿ Image Credit source: Millannium Post
Follow us
ನಯನಾ ರಾಜೀವ್
|

Updated on:Apr 24, 2025 | 10:29 AM

ನವದೆಹಲಿ, ಏಪ್ರಿಲ್ 24: ಜಮ್ಮು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿರುವ ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿ(Terror Attack)ಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು  ಇಂದು ಸರ್ವಪಕ್ಷ ಸಭೆ ಕರೆದಿದೆ. ಸಂಜೆ ವೇಳೆಗೆ ಸಭೆ ನಡೆಯುವ ಸಾಧ್ಯತೆ ಇದ್ದು, ಈ ಮಹತ್ವದ ಸಭೆಯ ಅಧ್ಯಕ್ಷತೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸುವ ಸಾಧ್ಯತೆ ಇದೆ. ಪಹಲ್ಗಾಮ್ ದಾಳಿಗೆ ಸಂಬಂಧಿಸಿದ ಪ್ರಮುಖ ವಿಷಯಗಳು, ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಈ ಸಭೆಯಲ್ಲಿ ಚರ್ಚಿಸಬಹುದು ಎಂದು ಹೇಳಲಾಗುತ್ತಿದೆ.

ಮಂಗಳವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯಿಂದ ಇಡೀ ದೇಶ ದುಃಖಿತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಭಯೋತ್ಪಾದನೆಯನ್ನು ಹತ್ತಿಕ್ಕಲು ಮತ್ತು ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ನಿರಂತರವಾಗಿ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ.

ಭಯೋತ್ಪಾದಕ ದಾಳಿಯ ವಿರುದ್ಧ ಕ್ರಮ ಕೈಗೊಳ್ಳಲು ಬುಧವಾರ ಪ್ರಧಾನಿಯವರ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ಸೇರಿತು. ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ದಾಳಿಯಲ್ಲಿ ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸಾವನ್ನಪ್ಪಿದ್ದಾರೆ. ಇತರ ಹಲವರು ಗಾಯಗೊಂಡರು.

ಇದನ್ನೂ ಓದಿ
Image
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Image
ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋ ಬಹಿರಂಗ
Image
ಪ್ಯಾಂಟ್​ ಬಿಚ್ಚಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರ ದಾಳಿ
Image
ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ ಖಾಲಿದ್ ಯಾರು?

ಗುರುವಾರ ಸಂಜೆ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಕೇಂದ್ರವು ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಮಾಹಿತಿ ನೀಡಲಿದ್ದು, ಅವರ ಅಭಿಪ್ರಾಯಗಳನ್ನು ಕೇಳಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಯಕರಿಗೆ ಮಾಹಿತಿ ನೀಡುವ ನಿರೀಕ್ಷೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: ಭಾರತದ ನಿರ್ಧಾರಕ್ಕೆ ಪಾಕ್ ತತ್ತರ, ತುರ್ತಾಗಿ ಉನ್ನತ ಮಟ್ಟದ ಸಭೆ ಕರೆದ ಪಾಕಿಸ್ತಾನ

2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಅಥವಾ 2020 ರ ಭಾರತ-ಚೀನಾ ಬಿಕ್ಕಟ್ಟಿನ ಸಮಯದಲ್ಲಿ ಕಂಡುಬಂದಂತೆ, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸಮಸ್ಯೆ ಎದುರಾಗಿದೆ, ಹೀಗಾಗಿ ಸರ್ವಪಕ್ಷ ಸಭೆ ಕರೆಯಲಾಗಿದೆ.

1960 ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು ಮತ್ತು ಅಟ್ಟಾರಿ ಭೂ-ಸಾರಿಗೆ ಪೋಸ್ಟ್ ಅನ್ನು ತಕ್ಷಣವೇ ಮುಚ್ಚುವುದು ಸೇರಿದಂತೆ ಹಲವಾರು ಕ್ರಮಗಳನ್ನು ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:09 am, Thu, 24 April 25