ಪಹಲ್ಗಾಮ್ ದಾಳಿ: ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ, ರಾಹುಲ್​

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಒಗ್ಗಟ್ಟು ಪ್ರದರ್ಶಿಸಲು ಸಂಸತ್ತಿನ ಎರಡೂ ಸದನಗಳಲ್ಲಿ ವಿಶೇಷ ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಈ ಘಟನೆಯ ಬಗ್ಗೆ ಸಾಮೂಹಿಕ ಪ್ರತಿಕ್ರಿಯೆಯನ್ನು ಆಲಿಸಲು ಎರಡೂ ಸದನಗಳ ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಲಾಗಿದೆ. ಇಂತಹ ಅಧಿವೇಶನವು ಸಂಸತ್ತು ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು, ಬೆದರಿಕೆಗಳನ್ನು ಎದುರಿಸಲು, ದೇಶದ ಬಗ್ಗೆ ದೃಢ ಸಂಕಲ್ಪ ಪ್ರದರ್ಶಿಸಲು ನೆರವಾಗುತ್ತದೆ ಎಂದು ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

ಪಹಲ್ಗಾಮ್ ದಾಳಿ: ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ, ರಾಹುಲ್​
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಒಗ್ಗಟ್ಟು ಪ್ರದರ್ಶಿಸಲು ಸಂಸತ್ತಿನ ಎರಡೂ ಸದನಗಳಲ್ಲಿ ವಿಶೇಷ ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಈ ಘಟನೆಯ ಬಗ್ಗೆ ಸಾಮೂಹಿಕ ಪ್ರತಿಕ್ರಿಯೆಯನ್ನು ಆಲಿಸಲು ಎರಡೂ ಸದನಗಳ ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಲಾಗಿದೆ. ಈ ಅಧಿವೇಶನವು ಸಂಸತ್ತು ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು, ಬೆದರಿಕೆಗಳನ್ನು ಎದುರಿಸಲು, ದೇಶದ ಬಗ್ಗೆ ದೃಢ ಸಂಕಲ್ಪ ಪ್ರದರ್ಶಿಸಲು ನೆರವಾಗುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

Updated on: Apr 29, 2025 | 11:01 AM

ನವದೆಹಲಿ, ಏಪ್ರಿಲ್ 29: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್(Pahalgam)​ನಲ್ಲಿ ನಡೆದ ಉಗ್ರ ದಾಳಿಗೆ ಸಂಬಂಧಿಸಿದಂತೆ ವಿಶೇಷ ಅಧಿವೇಶನ ಕರೆಯುವಂತೆ ಕಾಂಗ್ರೆಸ್​ ಪಕ್ಷ ಒತ್ತಾಯಿಸಿದೆ. ಈ ಕುರಿತು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ(Mallikarjun Kharge) ಖರ್ಗೆ ಹಾಗೂ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರದಿದ್ದಾರೆ.

ಈ ಘಟನೆಯ ಬಗ್ಗೆ ಸಾಮೂಹಿಕ ಪ್ರತಿಕ್ರಿಯೆಯನ್ನು ಆಲಿಸಲು ಎರಡೂ ಸದನಗಳ ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಲಾಗಿದೆ. ಇಂತಹ ಅಧಿವೇಶನವು ಸಂಸತ್ತು ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು, ಬೆದರಿಕೆಗಳನ್ನು ಎದುರಿಸಲು, ದೇಶದ ಬಗ್ಗೆ ದೃಢ ಸಂಕಲ್ಪ ಪ್ರದರ್ಶಿಸಲು ನೆರವಾಗುತ್ತದೆ ಎಂದು ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಮಯದಲ್ಲಿ ಏಕತೆ ಮತ್ತುಒಗ್ಗಟ್ಟು ದೇಶಕ್ಕೆ ಬಹಳ ಮುಖ್ಯ ಹಾಗಾಗಿ ಆದಷ್ಟು ಬೇಗ ವಿಶೇಷ ಅಧಿವೇಶನ ಕರೆಯುವಂತೆ ಮನವಿ ಮಾಡಿದ್ದಾರೆ. ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿಯನ್ನು ಹತ್ಯೆಗೈದಿದ್ದರು. ಪುರುಷರ ಪ್ಯಾಂಟ್ ಬಿಚ್ಚಿಸಿ ಹಿಂದೂಗಳೆಂದು ಖಚಿತಪಡಿಸಿಕೊಂಡ ಮೇಲೆ ದಾಳಿ ನಡೆಸಿದ್ದರು.

ಮತ್ತಷ್ಟು ಓದಿ: ಜಮ್ಮು ಮತ್ತು ಕಾಶ್ಮೀರದ 48 ಪ್ರಮುಖ ಪ್ರವಾಸಿ ತಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಸರ್ಕಾರ ನಿರ್ಧಾರ

ಈ ಘಟನೆ ಬಳಿಕ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ರಾಹುಲ್ ಗಾಂಧಿ ತಮ್ಮ ಪತ್ರದಲ್ಲಿ ಪ್ರಧಾನಿಯವರನ್ನು ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನವನ್ನು ಆದಷ್ಟು ಬೇಗ ಕರೆಯುವಂತೆ ಒತ್ತಾಯಿಸಿದ್ದಾರೆ. ಈ ನಿರ್ಣಾಯಕ ಕ್ಷಣದಲ್ಲಿ ಭಾರತವು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ನಿಂತಿದೆ ಎಂಬುದನ್ನು ಪ್ರದರ್ಶಿಸಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕರು ಒತ್ತಿ ಹೇಳಿದ್ದಾರೆ.

ಖರ್ಗೆ ಪತ್ರ

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ. ಈ ನಿರ್ಣಾಯಕ ಸಮಯದಲ್ಲಿ, ಭಯೋತ್ಪಾದನೆಯ ವಿರುದ್ಧ ನಾವು ಯಾವಾಗಲೂ ಒಟ್ಟಾಗಿ ನಿಲ್ಲುತ್ತೇವೆ ಎಂದು ಭಾರತ ತೋರಿಸಬೇಕು. 2019 ರಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ನಡೆದ ಅತಿದೊಡ್ಡ ಭಯೋತ್ಪಾದಕ ದಾಳಿಗಳಲ್ಲಿ ಇದು ಒಂದಾಗಿದೆ.

ರಾಹುಲ್ ಪತ್ರ

ಆದಾಗ್ಯೂ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವುನೋವುಗಳ ಸಂಖ್ಯೆಯನ್ನು ಸರ್ಕಾರ ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ. ಲಷ್ಕರ್​-ಎ-ತೊಯ್ಬಾದ ಟಿಆರ್​ಎಫ್​ ದಾಳಿಯ ಹೊಣೆ ಹೊತ್ತುಕೊಂಡಿದೆ. ಈ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಶಂಕಿತ ಉಗ್ರರ ಮನೆಗಳನ್ನು ಕೆಡವಲಾಗುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ