ಪಾಕಿಸ್ತಾನಿ ನಾಗರಿಕರಿಗೆ ವೀಸಾ ಸೇವೆ ರದ್ದು, ಏಪ್ರಿಲ್ 27ರೊಳಗೆ ಭಾರತ ಬಿಟ್ಟು ತೆರಳಲು ಆದೇಶ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತ ಸರ್ಕಾರ ಪಾಕಿಸ್ತಾನಿ ನಾಗರಿಕರಿಗೆ ವೀಸಾ ನೀಡದಂತೆ ಆದೇಶಿಸಿದೆ. ಈಗಾಗಲೇ ವೀಸಾ ಪಡೆದು ಬಂದವರಿಗೆ ಭಾರತ ಬಿಟ್ಟು ಹೋಗಲು ಏಪ್ರಿಲ್ 27ರವರೆಗೆ ಗಡುವು ನೀಡಲಾಗಿದೆ. ಮಂಗಳವಾರ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಜನ ಪ್ರಾಣ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಭಾರತ ಸರ್ಕಾರ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.

ಪಾಕಿಸ್ತಾನಿ ನಾಗರಿಕರಿಗೆ ವೀಸಾ ಸೇವೆ ರದ್ದು, ಏಪ್ರಿಲ್ 27ರೊಳಗೆ ಭಾರತ ಬಿಟ್ಟು ತೆರಳಲು ಆದೇಶ
Wagah Border

Updated on: Apr 24, 2025 | 5:30 PM

ನವದೆಹಲಿ, ಏಪ್ರಿಲ್ 24: ಭಾರತ ಪಾಕಿಸ್ತಾನಿ (Pakistan) ಪ್ರಜೆಗಳಿಗೆ ಎಲ್ಲಾ ವೀಸಾ ಸೇವೆಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ. ಏಪ್ರಿಲ್ 27ರೊಳಗೆ ಭಾರತವನ್ನು ತೊರೆಯುವಂತೆ ಸೂಚಿಸಿದೆ. ನಿನ್ನೆ ನಡೆದ ಭದ್ರತಾ ಸಂಪುಟ ಸಮಿತಿಯ (CCS) ನಿರ್ಣಯದ ನಂತರ, ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ಎಲ್ಲಾ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಈ ನಿರ್ಧಾರದ ಭಾಗವಾಗಿ, ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ಎಲ್ಲಾ ಭಾರತೀಯ ವೀಸಾಗಳನ್ನು ಏಪ್ರಿಲ್ 27 ರಿಂದ ರದ್ದುಗೊಳಿಸಲಾಗುವುದು.

ಪಹಲ್ಗಾಮ್ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪಾಕಿಸ್ತಾನಿ ನಾಗರಿಕರಿಗೆ ಈಗಾಗಲೇ ನೀಡಲಾದ ಎಲ್ಲಾ ವೀಸಾ ಸೇವೆಗಳನ್ನು ತಕ್ಷಣವೇ ಸ್ಥಗಿತಗೊಳಿಸಲಾಗಿದೆ. ಪಾಕ್ ನಾಗರೀಕರಿಗೆ ನೀಡಿದ ವೀಸಾಗಳನ್ನು ಏಪ್ರಿಲ್ 27ರಿಂದ ರದ್ದು ಮಾಡಲಾಗುವುದು. ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ವೈದ್ಯಕೀಯ ವೀಸಾಗಳು ಕೇವಲ ಏಪ್ರಿಲ್ 29ರವರೆಗೆ ಮಾತ್ರ ಮಾನ್ಯವಾಗಿರಲಿದೆ. ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ನಾಗರಿಕರು ತಮ್ಮ ವೀಸಾದ ಮಾನ್ಯತೆಯ ಅವಧಿ ಮುಗಿಯುವ ಮೊದಲು ದೇಶವನ್ನು ತೊರೆಯಬೇಕು.

ಇದನ್ನೂ ಓದಿ
ಕಾಶ್ಮೀರದಲ್ಲಿ ರಕ್ತದೋಕುಳಿ; ಇಂದು ಉಗ್ರರ ದಾಳಿ ವೇಳೆ ಆಗಿದ್ದೇನು?
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು


ಇದನ್ನೂ ಓದಿ: ಭಾರತೀಯ ವಿಮಾನಗಳಿಗೆ ಪಾಕಿಸ್ತಾನದ ವಾಯುಮಾರ್ಗ ಬಂದ್, ಭಾರತದೊಂದಿಗಿನ ವ್ಯಾಪಾರವೂ ಸ್ಥಗಿತ

ಹಾಗೇ, ಭಾರತೀಯ ನಾಗರಿಕರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ಸಲಹೆ ನೀಡಲಾಗಿದೆ. ಪಾಕಿಸ್ತಾನದಲ್ಲಿರುವ ಭಾರತೀಯ ನಾಗರಿಕರು ಆದಷ್ಟು ಬೇಗ ಭಾರತಕ್ಕೆ ಮರಳಲು ಸೂಚನೆ ನೀಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ 26 ಜನರ ಜೀವವನ್ನು ಬಲಿ ಪಡೆದ ಭಯೋತ್ಪಾದಕ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಭಾರತೀಯ ಪ್ರಜೆಗಳು ಪಾಕಿಸ್ತಾನಕ್ಕೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಸೂಚಿಸಲಾಗಿದೆ. ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪಾಕಿಸ್ತಾನಕ್ಕೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಸಚಿವಾಲಯವು ಭಾರತೀಯ ಪ್ರಜೆಗಳನ್ನು ಒತ್ತಾಯಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ