ಯಾವುದೇ ಕಾರಣಕ್ಕೂ ಭಾರತವು ಪಾಕಿಸ್ತಾನದ ಮೇಲೆ ದಾಳಿ ಮಾಡಲು ಬಿಡುವುದಿಲ್ಲ: ಖಲಿಸ್ತಾನಿ ಉಗ್ರ ಪನ್ನು

ಭಾರತವು ಯಾವುದೇ ಕಾರಣಕ್ಕೂ ಪಾಕಿಸ್ತಾನದ ಮೇಲೆ ದಾಳಿ ಮಾಡಲು ನಾವು ಬಿಡುವುದಿಲ್ಲ ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಹೇಳಿದ್ದಾನೆ. ಭಾರತೀಯ ಸೇನೆ ಪಂಜಾಬ್ ಮೂಲಕ ಹಾದುಹೋಗಲು ಮತ್ತು ಪಾಕಿಸ್ತಾನದ ಮೇಲೆ ದಾಳಿ ಮಾಡಲು ನಾವು ಬಿಡುವುದಿಲ್ಲ, ಪಾಕಿಸ್ತಾನದ ವಿರುದ್ಧ ಹೋರಾಡಲು ಭಾರತಕ್ಕೆ ಧೈರ್ಯವಿಲ್ಲ. ನಾವು, 20 ಮಿಲಿಯನ್ ಸಿಖ್ಖರು, ಪಾಕಿಸ್ತಾನದೊಂದಿಗೆ ಬಂಡೆಯಂತೆ ನಿಂತಿದ್ದೇವೆ. ಭಾರತದಲ್ಲಿ ಸಿಖ್ಖರು ಮತ್ತು ಇತರ ಅಲ್ಪಸಂಖ್ಯಾತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ.

ಯಾವುದೇ ಕಾರಣಕ್ಕೂ ಭಾರತವು ಪಾಕಿಸ್ತಾನದ ಮೇಲೆ ದಾಳಿ ಮಾಡಲು ಬಿಡುವುದಿಲ್ಲ: ಖಲಿಸ್ತಾನಿ ಉಗ್ರ ಪನ್ನು
ಪನ್ನು
Image Credit source: Mint

Updated on: Apr 28, 2025 | 12:04 PM

ನವದೆಹಲಿ, ಏಪ್ರಿಲ್ 28: ಪಹಲ್ಗಾಮ್ ಭಯೋತ್ಪಾದಕ ದಾಳಿ(Terror Attack)ಯ ನಂತರ, ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಪಾಕಿಸ್ತಾನಕ್ಕೆ ತನ್ನ ಬೆಂಬಲವನ್ನು ನೀಡಿದ್ದಾನೆ. ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ದಾಳಿ ಮಾಡಲು ಬಿಡುವುದಿಲ್ಲ, ಪಾಕಿಸ್ತಾನದ ವಿರುದ್ಧ ಹೋರಾಡುವ ಧೈರ್ಯ ಭಾರತಕ್ಕೆ ಇಲ್ಲ ಎಂದಿದ್ದಾನೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ತನ್ನ ಮೇಲೆ ದಾಳಿ ಮಾಡಬಹುದು ಎಂದು ಪಾಕಿಸ್ತಾನ ಅನುಮಾನಿಸುತ್ತಿರುವ ಸಮಯದಲ್ಲಿ ಈ ಹೇಳಿಕೆ ಬಂದಿದೆ.

ಭಾರತೀಯ ಸೇನೆ ಪಂಜಾಬ್ ಮೂಲಕ ಹಾದುಹೋಗಲು ಮತ್ತು ಪಾಕಿಸ್ತಾನದ ಮೇಲೆ ದಾಳಿ ಮಾಡಲು ನಾವು ಬಿಡುವುದಿಲ್ಲ, ಪಾಕಿಸ್ತಾನದ ವಿರುದ್ಧ ಹೋರಾಡಲು ಭಾರತಕ್ಕೆ ಧೈರ್ಯವಿಲ್ಲ. ನಾವು, 20 ಮಿಲಿಯನ್ ಸಿಖ್ಖರು, ಪಾಕಿಸ್ತಾನದೊಂದಿಗೆ ಬಂಡೆಯಂತೆ ನಿಂತಿದ್ದೇವೆ. ಭಾರತದಲ್ಲಿ ಸಿಖ್ಖರು ಮತ್ತು ಇತರ ಅಲ್ಪಸಂಖ್ಯಾತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ. ಈಗ ಕಾಲ ಬದಲಾಗಿದೆ, ಇದು 1965 ಅಥವಾ 1971 ಅಲ್ಲ, 2025 ಎಂದಿದ್ದಾನೆ.

ಪಾಕಿಸ್ತಾನ ಎಂದಿಗೂ ಅವರಾಗಿಯೇ ದಾಳಿ ಮಾಡಲು ಬರುವುದಿಲ್ಲ, ಯಾರೇ ದಾಳಿ ಮಾಡಿದರೂ ಅವರಿಗೆ ಕೆಟ್ಟ ಅಂತ್ಯವಿರುತ್ತದೆ. ಅದು ಇಂದಿರಾ ಗಾಂಧಿ, ನರೇಂದ್ರ ಮೋದಿ ಅಥವಾ ಅಮಿತ್ ಶಾ ಆಗಿರಬಹುದು. ರಾಜಕೀಯ ಲಾಭಕ್ಕಾಗಿ ಭಾರತವು ಪಹಲ್ಗಾಮ್‌ನಲ್ಲಿ ಹಿಂದೂಗಳನ್ನು ಕೊಂದಿದೆ ಎಂದು ಪನ್ನು ನಾಲಿಗೆ ಹರಿಬಿಟ್ಟಿದ್ದಾನೆ.

ಇದನ್ನೂ ಓದಿ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೊಬ್ಬ ಕನ್ನಡಿಗ ಬಲಿ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌ ಉಗ್ರರ ದಾಳಿ, ಕನ್ನಡಿಗರ ನೆರವಿಗೆ ಅಧಿಕಾರಿಗಳನ್ನ ಕಳುಹಿಸಿದ ಸಿಎಂ

ಮತ್ತಷ್ಟು ಓದಿ: ಶಸ್ತ್ರಾಸ್ತ್ರಗಳ ಹಿಡಿದು 22 ಗಂಟೆಗಳ ಕಾಲ ನಡೆದು ಕಾಡುಗಳ ಮೂಲಕ ಪಹಲ್ಗಾಮ್ ತಲುಪಿದ್ದ ಉಗ್ರರು

ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯ ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು. 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಮಾರಕ ದಾಳಿ ಇದಾಗಿದೆ.

ಪಾಕಿಸ್ತಾನ ಮೂಲದ ನಿಷೇಧಿತ ಸಂಘಟನೆ ಲಷ್ಕರ್-ಎ-ತೊಯ್ಬಾ (LET) ನ ಒಂದು ಅಂಗವಾದ ರೆಸಿಸ್ಟೆನ್ಸ್ ಫ್ರಂಟ್ (TRF) ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಪಹಲ್ಗಾಮ್‌ನಲ್ಲಿ ಜನರ ಮೇಲೆ ದಾಳಿ ಮಾಡಿದ ಭಯೋತ್ಪಾದಕರಿಗೆ ಸೂಕ್ತ ಉತ್ತರ ನೀಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದರು .

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:03 pm, Mon, 28 April 25