ಒಬ್ಬೊಬ್ಬ ಉಗ್ರನನ್ನೂ ಹುಡುಕಿ ಹೊಡೆಯಲಿದ್ದೇವೆ, ತಕ್ಕ ಶಾಸ್ತಿ ಮಾಡಿಯೇ ಸಿದ್ಧ: ಬಿಹಾರದಲ್ಲಿ ಮೋದಿ ಖಡಕ್ ಸಂದೇಶ
PM Modi on Pahalgam Attack:ಒಬ್ಬೊಬ್ಬ ಉಗ್ರನನ್ನೂ ಹುಡುಕಿ ಹೊಡೆಯಲಿದ್ದೇವೆ, ಅವರಿಗೆ ತಕ್ಕ ಶಾಸ್ತಿ ಮಾಡಿಯೇ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ.. ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ನೆನೆದ ಪ್ರಧಾನಿ ಮೋದಿ, ನಿರೀಕ್ಷೆಯೇ ಮಾಡಿರದ ಸಾವು ಆ ಉಗ್ರರಿಗೆ ಬರಲಿದೆ ಎಂದು ಹೇಳಿದ್ದಾರೆ. ಬಿಹಾರದಲ್ಲಿ ಮಾತನಾಡಿದ ಅವರು, ಕೇವಲ ಜನರ ಮೇಲೆ ಮಾಡಿದ ದಾಳಿ ಅದಲ್ಲ ಆ ದಾಳಿ ಭಾರತ ಆತ್ಮದ ಮೇಲಾಗಿದೆ, ಯಾರು ಈ ದುಸ್ಸಾಹಸ ಮಾಡಿದ್ದಾರೋ, ಯಾರು ಈ ದಾಳಿಯ ಹಿಂದಿದ್ದಾರೋ, ಅವರಿ ಕಲ್ಪನೆಗೂ ಮೀರಿದ ಶಿಕ್ಷೆಯನ್ನು ಅವರಿಗೆ ಕೊಡುತ್ತೇವೆ ಎಂದು ಹೇಳಿದ್ದಾರೆ.

ಪಾಟ್ನಾ, ಏಪ್ರಿಲ್ 24: ಒಬ್ಬೊಬ್ಬ ಉಗ್ರನನ್ನೂ ಹುಡುಕಿ ಹೊಡೆಯಲಿದ್ದೇವೆ, ಅವರಿಗೆ ತಕ್ಕ ಶಾಸ್ತಿ ಮಾಡಿಯೇ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಖಡಕ್ ಎಚ್ಚರಿಕೆ ನೀಡಿದ್ದಾರೆ.. ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ನೆನೆದ ಪ್ರಧಾನಿ ಮೋದಿ, ನಿರೀಕ್ಷೆಯೇ ಮಾಡಿರದ ಸಾವು ಆ ಉಗ್ರರಿಗೆ ಬರಲಿದೆ ಎಂದು ಹೇಳಿದ್ದಾರೆ.
ಬಿಹಾರದಲ್ಲಿ ಮಾತನಾಡಿದ ಅವರು, ಕೇವಲ ಜನರ ಮೇಲೆ ಮಾಡಿದ ದಾಳಿ ಅದಲ್ಲ ಆ ದಾಳಿ ಭಾರತ ಆತ್ಮದ ಮೇಲಾಗಿದೆ, ಯಾರು ಈ ದುಸ್ಸಾಹಸ ಮಾಡಿದ್ದಾರೋ, ಯಾರು ಈ ದಾಳಿಯ ಹಿಂದಿದ್ದಾರೋ, ಅವರಿ ಕಲ್ಪನೆಗೂ ಮೀರಿದ ಶಿಕ್ಷೆಯನ್ನು ಅವರಿಗೆ ಕೊಡುತ್ತೇವೆ ಎಂದು ಹೇಳಿದ್ದಾರೆ.
ಉಗ್ರರನ್ನು ಹೆಡೆಮುರಿ ಕಟ್ಟಿ ನಮ್ಮ ದೇಶದಿಂದ ಹೊರ ಹಾಕುವ ಸಮಯ ಬಂದಿದೆ. ಭಾರತೀಯರೆಲ್ಲರೂ ಒಗ್ಗಟ್ಟಿನಲ್ಲಿದ್ದರೆ ಉಗ್ರರ ಸೊಂಟ ಮುರುಯುವುದೇನೂ ಕಷ್ಟವಲ್ಲ. ಈ ಭೂಮಿಯಿಂದಲೇ ಅವರನ್ನು ಹೊರಗಟ್ಟುತ್ತೇವೆ. ಯಾರು ಮಾನವೀಯತೆ ನಂಬಿದ್ದಾರೋ ಅವರು ನಮ್ಮ ಜತೆಗಿದ್ದಾರೆ.
ಮತ್ತಷ್ಟು ಒದಿ: ಪಹಲ್ಗಾಮ್ ಉಗ್ರ ದಾಳಿಯನ್ನು ಕೇಕ್ ತಿಂದು ಸಂಭ್ರಮಿಸಿತೇ ಭಾರತದಲ್ಲಿರುವ ಪಾಕ್ ಹೈಕಮಿಷನ್?
ಪಹಲ್ಗಾಮ್‌ನಲ್ಲಿ ಮೃತಪಟ್ಟವರಲ್ಲಿ ಕೆಲವರು ಕನ್ನಡ ಮಾತನಾಡುವವರಿದ್ದರೆ, ಇನ್ನೂ ಕೆಲವರು ಹಿಂದಿ, ಮರಾಠಿ, ಗುಜರಾತಿ, ಒಡಿಯಾಮ ಬಾಂಗ್ಲಾ ಹೀಗೆ ಒಬ್ಬೊಬ್ಬರು ಒಂದು ಭಾಷೆಯನ್ನು ಮಾತನಾಡುವವರಾಗಿದ್ದಾರೆ. ಆದರೆ ಅವರ ಸಾವಿಗೆ ಆಕ್ರೋಶ ಮಾತ್ರ ಕಾರ್ಗಿಲ್ನಿಂದ ಕನ್ಯಾಕುಮಾರಿವರೆಗೂ ಒಂದೇ ರೀತಿ ಆಗಿದೆ ಎಂದರು.
ಪ್ರಧಾನಿ ಮೋದಿ ಭಷಣ
ಭಯೋತ್ಪಾದನೆ ಎದುರು ಭಾರತ ಎಂದೂ ತಲೆ ಬಾಗುವುದಿಲ್ಲ, ಭಾರತದಿಂದ ಭಯೋತ್ಪಾದನೆ ತೊಲಗಿಸುವವರೆಗೂ ಬಿಡುವುದಿಲ್ಲ. ಈ ದಾಳಿ ಕೇವಲ ನಿರಾಯುಧ ಪ್ರವಾಸಿಗರ ಮೇಲೆ ನಡೆದಿಲ್ಲ, ದೇಶದ ಶತ್ರುಗಳು ಭಾರತದ ಆತ್ಮದ ಮೇಲೆ ದಾಳಿ ಮಾಡಲು ಧೈರ್ಯ ಮಾಡಿದ್ದಾರೆ. ಈ ದಾಳಿಯನ್ನು ನಡೆಸಿದ ಭಯೋತ್ಪಾದಕರು ಮತ್ತು ಈ ದಾಳಿಗೆ ಸಂಚು ರೂಪಿಸಿದವರಿಗೆ ಅವರು ಊಹಿಸಲಾಗದಷ್ಟು ದೊಡ್ಡ ಶಿಕ್ಷೆಯನ್ನು ನೀಡಲಾಗುವುದು ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. 140 ಕೋಟಿ ಭಾರತೀಯರ ಇಚ್ಛಾಶಕ್ತಿ ಈಗ ಭಯೋತ್ಪಾದಕರ ಬೆನ್ನು ಮುರಿಯಲಿದೆ.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಅಮಾಯಕ ನಾಗರಿಕರನ್ನು ಕೊಂದ ಕ್ರೌರ್ಯದಿಂದ ಇಡೀ ರಾಷ್ಟ್ರವು ದುಃಖಿತವಾಗಿದೆ. ಇಡೀ ರಾಷ್ಟ್ರವು ಎಲ್ಲಾ ಸಂತ್ರಸ್ತ ಕುಟುಂಬಗಳ ದುಃಖದಲ್ಲಿ ಜೊತೆಗಿದೆ. ಈ ಕುಟುಂಬ ಸದಸ್ಯರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗ ಗುಣಮುಖರಾಗುವಂತೆ ನೋಡಿಕೊಳ್ಳಲು ಸರ್ಕಾರವೂ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ.
ಈ ಭಯೋತ್ಪಾದಕ ದಾಳಿಯಲ್ಲಿ, ಯಾರೋ ಒಬ್ಬರು ತಮ್ಮ ಮಗನನ್ನು ಕಳೆದುಕೊಂಡರು, ಯಾರೋ ಒಬ್ಬರು ತಮ್ಮ ಸಹೋದರನನ್ನು ಕಳೆದುಕೊಂಡರು, ಯಾರೋ ಒಬ್ಬರು ತಮ್ಮ ಸಂಗಾತಿಯನ್ನು ಕಳೆದುಕೊಂಡಿದ್ದಾರೆ. ಆ ಎಲ್ಲ ಜನರ ಸಾವಿನ ಬಗ್ಗೆ ನಮ್ಮ ಮನಸ್ಸಿನಲ್ಲಿರುವ ದುಃಖ ಮತ್ತು ಕೋಪ ಒಂದೇ ಆಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:13 pm, Thu, 24 April 25