ಪಹಲ್ಗಾಮ್ ಉಗ್ರ ದಾಳಿಯನ್ನು ಕೇಕ್ ತಿಂದು ಸಂಭ್ರಮಿಸಿತೇ ಭಾರತದಲ್ಲಿರುವ ಪಾಕ್ ಹೈಕಮಿಷನ್?
ಪಹಲ್ಗಾಮ್‌ನಲ್ಲಿ ದಾಳಿ ನಡೆಯುತ್ತಿದ್ದಂತೆ, ಭಾರತದಲ್ಲಿರುವ ಹೈಕಮಿಷನ್ ಬಂದ್ ಮಾಡುವಂತೆ ಸೂಚನೆ ನೀಡಲಾಯಿತು. ಈ ದಾಳಿಯ ನಡುವೆ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿ ನಿಯೋಜಿತರಾಗಿದ್ದ ಉದ್ಯೋಗಿಯೊಬ್ಬರು ಕೇಕ್ ತೆಗೆದುಕೊಂಡು ಒಳಗೆ ಹೋಗುತ್ತಿದ್ದರು.ದಾಳಿಯ ಗಂಭೀರತೆಯನ್ನು ಪರಿಗಣಿಸಿ, ಸಿಸಿಎಸ್ ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಿತು ಮತ್ತು ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವನ್ನು ನೀಡಿತು

ನವದೆಹಲಿ, ಏಪ್ರಿಲ್ 24: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್(Pahalgam)ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯನ್ನು ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಕೇಕ್ ತಿಂದು ಸಂಭ್ರಮಿಸಿತೇ ಎನ್ನುವ ಅನುಮಾನ ಎಲ್ಲರನ್ನು ಕಾಡಿದೆ. ಅದಕ್ಕೆ ಪುಷ್ಟಿ ನೀಡುವಂತೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪಹಲ್ಗಾಮ್‌ನಲ್ಲಿ ದಾಳಿ ನಡೆಯುತ್ತಿದ್ದಂತೆ, ಭಾರತದಲ್ಲಿರುವ ಹೈಕಮಿಷನ್ ಬಂದ್ ಮಾಡುವಂತೆ ಸೂಚನೆ ನೀಡಲಾಯಿತು. ಈ ದಾಳಿಯ ನಡುವೆ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿ ನಿಯೋಜಿತರಾಗಿದ್ದ ಉದ್ಯೋಗಿಯೊಬ್ಬರು ಕೇಕ್ ತೆಗೆದುಕೊಂಡು ಒಳಗೆ ಹೋಗುತ್ತಿದ್ದರು.
ಅದನ್ನು ಮಾಧ್ಯಮದವರು ಪ್ರಶ್ನಿಸಿದ್ದಕ್ಕೆ ಯಾವುದೇ ಉತ್ತರವನ್ನು ಕೂಡ ಅವರು ನೀಡಲಿಲ್ಲ. ಪಹಲ್ಗಾಮ್ ದಾಳಿಯ ಬಗ್ಗೆ ಪಾಕಿಸ್ತಾನ ಸಂತೋಷಗೊಂಡಿದ್ದು, ಅದನ್ನು ಸಂಭ್ರಮಿಸಲು ಭಾರತದಲ್ಲೇ ಕೇಕ್ ಕತ್ತರಿಸುತ್ತಿದೆಯೇ ಎನ್ನುವ ಊಹಾಪೋಹಗಳು ಎದ್ದಿವೆ. ಸತ್ಯ ಏನೇ ಇರಲಿ, ಪಾಕಿಸ್ತಾನಿ ಉದ್ಯೋಗಿ ಪ್ರತಿಕ್ರಿಯಿಸಲು ವಿಫಲರಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಪಾಕಿಸ್ತಾನ ಹೈಕಮಿಷನ್ ಹೊರಗಿನ ಭದ್ರತೆ ವಾಪಸ್ ಭಾರತ-ಪಾಕಿಸ್ತಾನ ನಡುವೆ ಉಧ್ವಿಗ್ನತೆ ಹೆಚ್ಚಿದೆ. ದೆಹಲಿಯಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿಯ ಭದ್ರತೆಯನ್ನು ಸಹ ಕಡಿತಗೊಳಿಸಲಾಗಿದೆ. ಇದೀಗ ಪಾಕಿಸ್ತಾನಿ ರಾಯಭಾರ ಕಚೇರಿಯ ಹೊರಗೆ ಮೌನ ಆವರಿಸಿದೆ.
ಮತ್ತಷ್ಟು ಓದಿ: Indus Waters Treaty: ಭಾರತದಿಂದ ಸಿಂಧೂ ನದಿ ನೀರು ಒಪ್ಪಂದ ಸ್ಥಗಿತ, ಪಾಕಿಸ್ತಾನಕ್ಕಾಗುವ ನಷ್ಟವೇನು?
ಬುಧವಾರ ಸಂಜೆ ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯಲ್ಲಿ ಕ್ಯಾಬಿನೆಟ್ ಭದ್ರತಾ ಸಮಿತಿ (ಸಿಸಿಎಸ್) ತುರ್ತು ಸಭೆ ಕರೆಯಲಾಗಿತ್ತು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಕುರಿತು ವಿವರವಾದ ಮಾಹಿತಿಯನ್ನು ನೀಡಲಾಯಿತು. ಈ ದಾಳಿಯ ಹಿಂದೆ ಗಡಿಯಾಚೆಗಿನ ಪಿತೂರಿಗಳಿವೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆಗಳು ಯಶಸ್ವಿಯಾಗಿ ನಡೆದು, ಆ ಪ್ರದೇಶವು ಆರ್ಥಿಕ ಅಭಿವೃದ್ಧಿಯತ್ತ ಸಾಗುತ್ತಿರುವ ಸಮಯದಲ್ಲಿ ಈ ದಾಳಿ ನಡೆದಿದೆ.
ದಾಳಿಯ ಗಂಭೀರತೆಯನ್ನು ಪರಿಗಣಿಸಿ, ಸಿಸಿಎಸ್ ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಿತು ಮತ್ತು ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವನ್ನು ನೀಡಿತು. ಸಾರ್ಕ್ ವೀಸಾ ವಿನಾಯಿತಿ ಯೋಜನೆ (SVES) ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳಿಗೆ ಭಾರತಕ್ಕೆ ಪ್ರಯಾಣಿಸಲು ಅವಕಾಶವಿಲ್ಲ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಪಾಕಿಸ್ತಾನಿ ಪ್ರಜೆಗಳಿಗೆ ಈ ಹಿಂದೆ ನೀಡಲಾದ ಯಾವುದೇ SVES ವೀಸಾಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ಪರಿಗಣಿಸಲಾಗುತ್ತದೆ.
The Pakistanis are celebrating the Hindu massacre in Pahalgam with a cake!!
Few minutes ago, a cake was being delivered to the Pakistan High Commission today in New Delhi.
Never Forget! Never Forgive!#PahalgamTerrorAttack pic.twitter.com/OxmyV3Muj8
— Priti Gandhi (@MrsGandhi) April 24, 2025
SVES ವೀಸಾದಡಿಯಲ್ಲಿ ಭಾರತದಲ್ಲಿ ಇರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳ ಒಳಗೆ ಭಾರತವನ್ನು ತೊರೆಯಬೇಕು. ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನ ರಕ್ಷಣಾ, ನೌಕಾಪಡೆ ಮತ್ತು ವಾಯುಪಡೆಯ ಸಲಹೆಗಾರರು ಒಂದು ವಾರದೊಳಗೆ ಭಾರತವನ್ನು ತೊರೆಯಬೇಕಾಗುತ್ತದೆ.
ಅದೇ ರೀತಿ, ಭಾರತವು ಇಸ್ಲಾಮಾಬಾದ್‌ನಲ್ಲಿರುವ ತನ್ನ ಮಿಲಿಟರಿ ಸಲಹೆಗಾರರು ಮತ್ತು ಐದು ಸಹಾಯಕ ಸಿಬ್ಬಂದಿಯನ್ನು ಸಹ ಹಿಂತೆಗೆದುಕೊಳ್ಳಲಿದೆ. ಎರಡೂ ದೇಶಗಳ ಹೈಕಮಿಷನ್‌ಗಳ ಒಟ್ಟು ಸಿಬ್ಬಂದಿ ಬಲವನ್ನು 55 ರಿಂದ 30 ಕ್ಕೆ ಇಳಿಸಲಾಗುವುದು, ಇದು ಮೇ 1 ರಿಂದ ಜಾರಿಗೆ ಬರಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:03 pm, Thu, 24 April 25