AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಾಗಿ ವೀಸಾ ಇಲ್ಲದೆ ಭಾರತಕ್ಕೆ ಬಂದಿದ್ದ ಸೀಮಾ ಹೈದರ್ 48 ಗಂಟೆಗಳಲ್ಲಿ ಪಾಕ್​ಗೆ ಹಿಂದಿರುಗುತ್ತಾರಾ?

'ಮಾನ್ಯ' ವೀಸಾ ಇಲ್ಲದ ಪಾಕಿಸ್ತಾನಿ ಪ್ರಜೆಗಳು ಎರಡು ದಿನಗಳ ಒಳಗೆ ದೇಶವನ್ನು ತೊರೆಯಬೇಕು ಎಂಬ ಭಾರತ ಸರ್ಕಾರದ ಇತ್ತೀಚಿನ ನಿರ್ಧಾರದೊಂದಿಗೆ, ಸೀಮಾ ಹೈದರ್ ಪಾಕ್​ಗೆ ಹೋಗುವ ಬಗ್ಗೆ ಊಹಾಪೋಹಗಳು ಎದ್ದಿವೆ. ನಾಲ್ಕು ಮಕ್ಕಳ ತಾಯಿಯಾಗಿರುವ ಸೀಮಾ ಹೈದರ್, ಭಾರತೀಯ ಮೂಲದ ತನ್ನ ಪ್ರೇಮಿ ಸಚಿನ್ ಜೊತೆ ವಾಸಿಸಲು ಪಾಕಿಸ್ತಾನದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ ಸುದ್ದಿಯಾಗಿದ್ದರು. ಈಗ ಮತ್ತೊಮ್ಮೆ ಅವರು ಕೂಡ ಪಾಕಿಸ್ತಾನಕ್ಕೆ ಹಿಂತಿರುಗಬೇಕೇ ಎಂಬ ಚರ್ಚೆ ಆರಂಭವಾಗಿದೆ.

ಪ್ರೇಮಿಗಾಗಿ ವೀಸಾ ಇಲ್ಲದೆ ಭಾರತಕ್ಕೆ ಬಂದಿದ್ದ ಸೀಮಾ ಹೈದರ್  48 ಗಂಟೆಗಳಲ್ಲಿ ಪಾಕ್​ಗೆ ಹಿಂದಿರುಗುತ್ತಾರಾ?
ಸೀಮಾ ಹೈದರ್
ನಯನಾ ರಾಜೀವ್
|

Updated on:Apr 24, 2025 | 2:34 PM

Share

ನವದೆಹಲಿ, ಏಪ್ರಿಲ್ 24: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌(Pahalgam)ನಲ್ಲಿ ಕನಿಷ್ಠ 26 ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಭೀಕರ ಭಯೋತ್ಪಾದಕ ದಾಳಿಯ ನಂತರ, ಭಾರತ ಸರ್ಕಾರವು ಪಾಕಿಸ್ತಾನದ ವಿರುದ್ಧ ಹಲವಾರು ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಂಡಿದೆ. ಸರ್ಕಾರದ ಈ ನಿರ್ಧಾರಗಳ ನಂತರ, ಸೀಮಾ ಹೈದರ್ ಸೇರಿದಂತೆ ಭಾರತದಲ್ಲಿ ವಾಸಿಸುವ ಪಾಕಿಸ್ತಾನಿ ನಾಗರಿಕರ ಬಗ್ಗೆ ಪ್ರಶ್ನೆಗಳು ಎದ್ದಿವೆ.

ನಾಲ್ಕು ಮಕ್ಕಳ ತಾಯಿಯಾಗಿರುವ ಸೀಮಾ ಹೈದರ್, ಭಾರತೀಯ ಮೂಲದ ತನ್ನ ಪ್ರೇಮಿ ಸಚಿನ್ ಜೊತೆ ವಾಸಿಸಲು ಪಾಕಿಸ್ತಾನದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ ಸುದ್ದಿಯಾಗಿದ್ದರು. ಈಗ ಮತ್ತೊಮ್ಮೆ ಅವರು ಕೂಡ ಪಾಕಿಸ್ತಾನಕ್ಕೆ ಹಿಂತಿರುಗಬೇಕೇ ಎಂಬ ಚರ್ಚೆ ಆರಂಭವಾಗಿದೆ.

ಭಾರತವು ತನ್ನ ಅಟ್ಟಾರಿ ಗಡಿಯನ್ನು ಮುಚ್ಚಿದೆ, ಪಾಕಿಸ್ತಾನಿ ರಾಜತಾಂತ್ರಿಕರನ್ನು ಹೊರಹಾಕಿದೆ ಮತ್ತು ದಶಕಗಳಷ್ಟು ಹಳೆಯದಾದ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿದೆ. ಇದು 1960 ರಿಂದ ಎರಡೂ ದೇಶಗಳ ನಡುವೆ ನೀರು ಹಂಚಿಕೆಯನ್ನು ನಿಯಂತ್ರಿಸುವ ಪ್ರಮುಖ ಒಪ್ಪಂದವಾಗಿದೆ. ಈ ನಿರ್ಧಾರಗಳ ಹೊರತಾಗಿ, ದೆಹಲಿಯು ಪಾಕಿಸ್ತಾನಿ ಪ್ರಜೆಗಳಿಗೆ ಈ ಹಿಂದೆ ಲಭ್ಯವಿದ್ದ ವೀಸಾ ವಿನಾಯಿತಿ ಯೋಜನೆಯನ್ನು ಸಹ ರದ್ದುಗೊಳಿಸಿದೆ.

ಇದನ್ನೂ ಓದಿ
Image
ಅಕ್ರಮವಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್​ಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸೋ ಚಾನ್ಸ್​
Image
ಸೀಮಾ ಹೈದರ್ ಹಿಂತಿರುಗದಿದ್ದರೆ ಭಾರತದ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಕರೆ; ಸುದ್ದಿಯಲ್ಲಿರುವ ಈ ಮಹಿಳೆ ಯಾರು?
Image
ಸೀಮಾ ಹೈದರ್ ಮರಳಿ ಬರದಿದ್ದರೆ ’26/11 ರೀತಿಯಲ್ಲೇ ಉಗ್ರ ದಾಳಿ’; ಮುಂಬೈ ಪೊಲೀಸರಿಗೆ ಬೆದರಿಕೆ ಕರೆ
Image
ಪಬ್​​ಜಿ ಮೂಲಕ ನೋಯ್ಡಾ ವ್ಯಕ್ತಿ ಜತೆ ಸ್ನೇಹ; ನಾಲ್ವರು ಮಕ್ಕಳೊಂದಿಗೆ ಭಾರತಕ್ಕೆ ಬಂದು ಸಿಕ್ಕಿಬಿದ್ದ ಪಾಕಿಸ್ತಾನದ ಮಹಿಳೆ

ಅಲ್ಲದೆ, ಈ ಯೋಜನೆಯಡಿಯಲ್ಲಿ, ಭಾರತದಲ್ಲಿ ವಾಸಿಸುವ ಜನರು 48 ಗಂಟೆಗಳ ಒಳಗೆ ದೇಶವನ್ನು ತೊರೆಯುವಂತೆ ಆದೇಶಿಸಲಾಗಿದೆ. ಈ ನೀತಿ ಬದಲಾವಣೆಗಳು ಸೀಮಾ ಹೈದರ್ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿವೆ, ಅವರು ಭಾರತದ ಯುವ ಪ್ರೇಮಿ ಸಚಿನ್ ಮೀನಾ ಅವರೊಂದಿಗಿನ ಗಡಿಯಾಚೆಗಿನ ಪ್ರೇಮಕಥೆಯಿಂದ ವೈರಲ್ ಆಗಿದ್ದರು.

ಮತ್ತಷ್ಟು ಓದಿ: ಪ್ರೀತಿಸಿದವನಿಗಾಗಿ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದ ಸೀಮಾ ಹೈದರ್​ಗೆ ಹೆಣ್ಣು ಮಗು ಜನನ

2023 ರಲ್ಲಿ, ಪಾಕಿಸ್ತಾನದ ಸಿಂಧ್ ಪ್ರಾಂತ್ಯದ 32 ವರ್ಷದ ಮಹಿಳೆಯೊಬ್ಬರು ತಮ್ಮ ನಾಲ್ವರು ಮಕ್ಕಳೊಂದಿಗೆ ನೇಪಾಳ ಮೂಲಕ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದರು. ಪಾಕಿಸ್ತಾನಿ ವ್ಯಕ್ತಿಯನ್ನು ವಿವಾಹವಾಗಿದ್ದ ಸೀಮಾ, 2019 ರಲ್ಲಿ ಮೊಬೈಲ್ ಗೇಮ್ ಆಡುವಾಗ ಆನ್‌ಲೈನ್‌ನಲ್ಲಿ ಪರಿಚಯವಾದ ಸಚಿನ್ ಅವರನ್ನು ಭೇಟಿಯಾಗಲು ಮತ್ತು ಅವರನ್ನು ಮದುವೆಯಾಗಲು ತನ್ನ ಪತಿ ಮತ್ತು ಮನೆಯನ್ನು ತೊರೆದಿದ್ದರು.

ಅಕ್ರಮ ಪ್ರವೇಶಕ್ಕಾಗಿ ಈ ಜೋಡಿಯನ್ನು ಬಂಧಿಸಲಾಯಿತು ಆದರೆ ನಂತರ ಬಿಡುಗಡೆ ಮಾಡಲಾಯಿತು. ಅವರು ಪರಸ್ಪರ ಮದುವೆಯಾಗಿರುವುದಾಗಿ ಹೇಳಿಕೊಂಡಿದ್ದರು. ಕಳೆದ ತಿಂಗಳು ಅವರಿಗೆ ಒಂದು ಹೆಣ್ಣು ಮಗುವೂ ಜನಿಸಿದೆ. ಆದಾಗ್ಯೂ, ‘ಮಾನ್ಯ’ ವೀಸಾ ಇಲ್ಲದ ಪಾಕಿಸ್ತಾನಿ ಪ್ರಜೆಗಳು ಎರಡು ದಿನಗಳ ಒಳಗೆ ದೇಶವನ್ನು ತೊರೆಯಬೇಕು ಎಂಬ ಭಾರತ ಸರ್ಕಾರದ ಇತ್ತೀಚಿನ ನಿರ್ಧಾರದೊಂದಿಗೆ, ಸೀಮಾ ಹೈದರ್ ಪಾಕ್​ಗೆ ಹೋಗುವ ಬಗ್ಗೆ ಊಹಾಪೋಹಗಳು ಎದ್ದಿವೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:23 pm, Thu, 24 April 25

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ