AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pahalgam Terrorist Attack: ಪಹಲ್ಗಾಮ್ ದಾಳಿ: ಅಜಿತ್ ದೋವಲ್, ಜೈಶಂಕರ್ ಭೇಟಿಯಾದ ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು, ಸೌದಿ ಅರೇಬಿಯಾದಿಂದ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಬುಧವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ ನಡೆಸಿದರು.

Pahalgam Terrorist Attack: ಪಹಲ್ಗಾಮ್ ದಾಳಿ:  ಅಜಿತ್ ದೋವಲ್, ಜೈಶಂಕರ್ ಭೇಟಿಯಾದ ಪ್ರಧಾನಿ ಮೋದಿ
ನರೇಂದ್ರ ಮೋದಿ Image Credit source: Business Standard
ನಯನಾ ರಾಜೀವ್
|

Updated on: Apr 23, 2025 | 10:57 AM

Share

ಶ್ರೀನಗರ, ಏಪ್ರಿಲ್ 23: ಜಮ್ಮು-ಕಾಶ್ಮೀರದ ಅನಂತ್​ನಾಗ್​ನ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ(Terrorist Attack)ಯ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು, ಸೌದಿ ಅರೇಬಿಯಾದಿಂದ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಬುಧವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ ನಡೆಸಿದರು.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಣಿವೆಯಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಅತ್ಯಂತ ಭೀಕರ ದಾಳಿಯ ಬಗ್ಗೆ ದೇಶಾದ್ಯಂತ ಆಘಾತ ಮತ್ತು ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಮೋದಿ ಹಿಂದಿರುಗಿದ ತಕ್ಷಣ ಅಧಿಕಾರಿಗಳು ಅವರಿಗೆ ಈ ಕುರಿತು ಮಾಹಿತಿ ನೀಡಿದರು.

ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿರುವ ಪ್ರಮುಖ ಪ್ರವಾಸಿ ತಾಣದ ಮೇಲೆ ಮಂಗಳವಾರ ಭಯೋತ್ಪಾದಕರು ದಾಳಿ ನಡೆಸಿದ್ದು, ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ, ಮೃತರಲ್ಲಿ ಬಹುತೇಕರು ಪ್ರವಾಸಿಗರಾಗಿದ್ದಾರೆ ಮತ್ತು ಹಲವು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ ಯುಎಇ ಮತ್ತು ನೇಪಾಳದ ಇಬ್ಬರು ವಿದೇಶಿಯರು ಮತ್ತು ಇಬ್ಬರು ಸ್ಥಳೀಯರು ಸೇರಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: Pahalgam Terrorist Attack: ಪ್ಯಾಂಟ್​ ಬಿಚ್ಚಿಸಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಮಾತ್ರ ಗುರಿಯಾಗಿಸಿ ಉಗ್ರರ ದಾಳಿ

ಬುಧವಾರ ಬೆಳಗ್ಗೆ ಮೋದಿ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ವಾಪಸ್ ಬಂದಿದ್ದಾರೆ, ಹಾಗೆಯೇ ಗೃಹ ಸಚಿವ ಅಮಿತ್ ಶಾ ಮಂಗಳವಾರ ಸಂಜೆ ಶ್ರೀನಗರಕ್ಕೆ ಧಾವಿಸಿ ಭದ್ರತಾ ಕ್ರಮಗಳನ್ನು ಮುನ್ನಡೆಸಿದರು. ಈ ದಾಳಿಯ ಸಮಯದಲ್ಲಿ ಪುರುಷರ ಪ್ಯಾಂಟ್ ಬಿಚ್ಚಿಸಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಮಾತ್ರ ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ಸಿಒಎಎಸ್ ಅಸಿಮ್ ಮುನೀರ್ ಹಿಂದೂಗಳ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ.

ಘಟನೆಯ ಹೃದಯ ವಿದ್ರಾವಕ ದೃಶ್ಯ ಆನ್​ಲೈನ್​ನಲ್ಲಿ ಹರಿದಾಡುತ್ತಿದೆ. ಹುಲ್ಲುಹಾಸಿನ ಮೇಲೆ ಉದ್ದಕ್ಕೂ ಮೃತದೇಹಗಳು ಬಿದ್ದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ದಾಳಿಯ ಪ್ರತ್ಯಕ್ಷದರ್ಶಿಗಳು ಭಯೋತ್ಪಾದಕರು ಪ್ರವಾಸಿಗರನ್ನು ಹಿಂದೂಗಳೆಂದು ಕನ್ಫರ್ಮ್​ ಮಾಡಿಕೊಂಡ ಬಳಿಕವೇ ಅವರ ಮೇಲೆ ದಾಳಿ ನಡೆಸಿದ್ದಾರೆ ಎಂದು ಹೇಳಿಕೆ ನೀಡಿದ್ದು, ಈ ದಾಳಿ ಧಾರ್ಮಿಕ ಪ್ರೇರಿತವಾಗಿದೆ ಎಂದಿದ್ದಾರೆ.

ವೈರಲ್ ಆದ ಫೋಟೊವೊಂದರಲ್ಲಿ ನವವಿವಾಹಿತ ಮಹಿಳೆಯೊಬ್ಬಳು ತನ್ನ ಪತಿಯ ಶವದ ಬಳಿ ಅಸಹಾಯಕಳಾಗಿ ಕುಳಿತಿರುವುದನ್ನು ಕಾಣಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!