ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಆರ್ಎಸ್ಎಸ್: ಸೂಕ್ತ ಕ್ರಮಕ್ಕೆ ಆಗ್ರಹ
Pahalgam Terrorist Attack: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಆರ್ಎಸ್ಎಸ್ ತೀವ್ರವಾಗಿ ಖಂಡಿಸಿದೆ. ಮೃತರ ಕುಟುಂಬಗಳಿಗೆ ಸರ್ಕಾರ ಸಹಾಯ ಮಾಡಬೇಕು ಮತ್ತು ದಾಳಿ ನಡೆಸಿದವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದೆ. ದೇಶದ ಏಕತೆ ಮತ್ತು ಸಮಗ್ರತೆಗೆ ಈ ದಾಳಿ ಬೆದರಿಕೆಯಾಗಿದೆ ಎಂದು ಆರ್ಎಸ್ಎಸ್ ಹೇಳಿದೆ. ಎಲ್ಲಾ ರಾಜಕೀಯ ಪಕ್ಷಗಳು ಈ ದಾಳಿಯನ್ನು ಖಂಡಿಸಬೇಕೆಂದು ಅದು ಮನವಿ ಮಾಡಿದೆ.

ನವದೆಹಲಿ, ಏಪ್ರಿಲ್ 22: ಜಮ್ಮು ಮತ್ತು ಕಾಶ್ಮೀರದ (Jammu Kashmir) ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು (Pahalgam Terrorists attack) ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಖಂಡಿಸಿದೆ. ದಾಳಿಯಲ್ಲಿ ಪ್ರವಾಸಿಗರು ಮೃತರಾಗಿರುವುದಕ್ಕೆ ಆರ್ಎಸ್ಎಸ್ ಸಂತಾಪ ಸೂಚಿಸಿದೆ. ಇನ್ನು, ಮೃತ ಕುಟುಂಬಗಳಿಗೆ ಸರ್ಕಾರ ಅಗತ್ಯ ಸಹಾಯ ಮಾಡಬೇಕೆಂದು ಹೇಳಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ಚೀಟ್ ಮಾಡಿದ ಆರ್ಎಸ್ಎಸ್, ” ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ಭಯೋತ್ಪಾದಕ ದಾಳಿ ಅತ್ಯಂತ ಖಂಡನೀಯ ಮತ್ತು ದುಃಖಕರ. ಘಟನೆಯಲ್ಲಿ ಮಡಿದ ಎಲ್ಲರಿಗೂ ನಾವು ಗೌರವ ಸಲ್ಲಿಸುತ್ತೇವೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪಾರ್ಥಿಸುತ್ತೇವೆ.”
जम्मू कश्मीर के पहलगाम में पर्यटकों पर हुआ नृशंस आतंकी हमला अत्यंत निंदनीय एवं संतापजनक है। हम घटना में मृत हुए सभी के प्रति श्रद्धांजलि अर्पित करते हैं तथा घायलों के शीघ्र स्वास्थ्य लाभ की कामना करते हैं। यह हमला देश की एकता व अखंडता पर प्रहार करने का दुःसाहस है। सभी राजनीतिक दल…
— RSS (@RSSorg) April 22, 2025
“ಈ ದಾಳಿಯು ದೇಶದ ಏಕತೆ ಮತ್ತು ಸಮಗ್ರತೆಯ ಮೇಲೆ ದಾಳಿ ಮಾಡುವ ಪ್ರಯತ್ನವಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಈ ದಾಳಿಯನ್ನು ಖಂಡಿಸಬೇಕು. ಮೃತ ಕುಟುಂಬಗಳಿಗೆ ಸರ್ಕಾರ ಅಗತ್ಯ ಸಹಾಯ ಮಾಡಬೇಕು. ಮತ್ತು ಈ ದಾಳಿಗೆ ಕಾರಣರಾದವರನ್ನು ಶಿಕ್ಷಿಸಲು ಸರ್ಕಾರ ಶೀಘ್ರದಲ್ಲೇ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದೆ.
ರಾಷ್ಟ್ರಪತಿ ಮುರ್ಮು ಸಂತಾಪ
“ಪ್ರವಾಸಿಗರ ಮೇಲಿನ ಉಗ್ರರ ಗುಂಡಿನ ದಾಳಿ ಆಘಾತ, ನೋವು ತಂದಿದೆ. ಇದು ಒಂದು ಹೇಯ ಮತ್ತು ಅಮಾನವೀಯ ಕೃತ್ಯವಾಗಿದ್ದು, ಇದನ್ನು ನಿಸ್ಸಂದೇಹವಾಗಿ ಖಂಡಿಸಬೇಕು. ಪ್ರವಾಸಿಗರ ಮೇಲಿನ ಉಗ್ರ ದಾಳಿ ಕ್ಷಮಿಸಲಾಗದ ಕೃತ್ಯ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸ್ತೇನೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.
ಹೇಡಿತನದ ದಾಳಿಯನ್ನು ನಾನು ಖಂಡಿಸುತ್ತೇನೆ: ಖರ್ಗೆ
ಪ್ರವಾಸಿಗರ ಮೇಲೆ ಹೇಡಿತನದ ದಾಳಿಯನ್ನು ನಾನು ಖಂಡಿಸುತ್ತೇನೆ. ಭಯೋತ್ಪಾದನೆಯ ಎದುರಿಸಲು ಇಡೀ ರಾಷ್ಟ್ರ ಒಗ್ಗಟ್ಟಿನಿಂದ ನಿಂತಿದೆ. ಉಗ್ರರ ದಾಳಿಗಳು ಮಾನವೀಯತೆಗೆ ಕಳಂಕವಾಗಿವೆ. ಉನ್ನತ ಮೂಲಗಳ ಪ್ರಕಾರ ಅಮೂಲ್ಯ ಜೀವಗಳು ಕಳೆದುಹೋಗಿವೆ. ನೊಂದವರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ಹೃದಯಪೂರ್ವಕ ಸಂತಾಪ ಸೂಚಿಸುತ್ತೇನೆ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಭಾರತದ ರಾಷ್ಟ್ರೀಯ ಭದ್ರತೆಯು ಪ್ರಮುಖ ವಿಷಯವಾಗಿದೆ. ಭದ್ರತೆ ಖಾತ್ರಿಪಡಿಸಲು ಕೇಂದ್ರಸರ್ಕಾರ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸುವೆ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಭೂಲೋಕದ ಸ್ವರ್ಗ ಕಾಶ್ಮೀರದಲ್ಲಿ ರಕ್ತದೋಕುಳಿ; ಇಂದು ಉಗ್ರರ ದಾಳಿ ವೇಳೆ ಆಗಿದ್ದೇನು?
ಡಿಕೆ ಶಿವಕುಮಾರ್ ಸಂತಾಪ
“ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮನ ಬಂದಂತೆ ಗುಂಡಿನ ದಾಳಿ ನಡೆಸಿರುವ ವಿಚಾರ ತಿಳಿದು ಆಘಾತವಾಯಿತು. ಪ್ರವಾಸಿಗರ ಪೈಕಿ ಶಿವಮೊಗ್ಗ ಮೂಲದ ಓರ್ವ ಕನ್ನಡಿಗ ಮೃತಪಟ್ಟಿದ್ದು, ಅವರ ಮೃತದೇಹವನ್ನು ತರಲು ಸರ್ಕಾರದಿಂದ ಸಕಲ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಕಾಶ್ಮೀರದಲ್ಲಿ ಸಿಲುಕಿರುವ ಪ್ರವಾಸಿ ಕನ್ನಡಿಗರನ್ನು ಸಂಪರ್ಕಿಸಿ, ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಈಗಾಗಲೇ ಪೊಲೀಸ್ ಅಧಿಕಾರಿಗಳ ತಂಡವೊಂದನ್ನು ಕಳುಹಿಸಲಾಗಿದೆ. ಮೃತರ ಕುಟುಂಬಕ್ಕೆ ತೀವ್ರ ಸಂತಾಪಗಳು” ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:32 pm, Tue, 22 April 25