
ನವದೆಹಲಿ, ಸೆಪ್ಟೆಂಬರ್ 11: ರಾಜಕೀಯ ಉದ್ದೇಶಗಳ ಕಾರಣದಿಂದ ಎಥೆನಾಲ್ ಮಿಶ್ರಿತ ಇಂಧನ (E20) ಮಿಶ್ರಣದ ವಿರುದ್ಧ “ಪೇಯ್ಡ್ ಸಾಮಾಜಿಕ ಮಾಧ್ಯಮ ಅಭಿಯಾನ”ವನ್ನು ನಿತಿನ್ ಗಡ್ಕರಿ ಟೀಕಿಸಿದ್ದಾರೆ. ತಪ್ಪು ಮಾಹಿತಿಗೆ ಗಮನ ಕೊಡಬಾರದು ಎಂದು ಅವರು ಜನರನ್ನು ಒತ್ತಾಯಿಸಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಇಂದು ಸರ್ಕಾರದ ಎಥೆನಾಲ್ ಮಿಶ್ರಿತ ಇಂಧನ ಬಿಡುಗಡೆಯ ವಿರುದ್ಧ ತೀವ್ರ ವಿರೋಧದ ನಡುವೆ ಸಾಮಾಜಿಕ ಮಾಧ್ಯಮದಲ್ಲಿ “ಪೇಯ್ಡ್ ರಾಜಕೀಯ ಅಭಿಯಾನ”ಕ್ಕೆ ಬಲಿಯಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ದೆಹಲಿಯಲ್ಲಿ ಇಂದು ನಡೆದ ಭಾರತೀಯ ಆಟೋಮೊಬೈಲ್ ತಯಾರಕರ ಸಂಘದ (SIAM) 65ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಸಾಂಪ್ರದಾಯಿಕ ಇಂಧನದೊಂದಿಗೆ ಶೇ. 20ರಷ್ಟು ಎಥೆನಾಲ್ ಅನ್ನು ಬೆರೆಸುವ E20 ಪೆಟ್ರೋಲ್ ಬಗ್ಗೆ ಆನ್‌ಲೈನ್‌ನಲ್ಲಿ ಟೀಕಿಸಲಾಗುತ್ತಿದೆ. ಆ ಇಂಧನ ಸುರಕ್ಷಿತವಾಗಿದೆ, ನಿಯಂತ್ರಕರು ಮತ್ತು ವಾಹನ ತಯಾರಕರು ಇಬ್ಬರೂ ಅದನ್ನು ಬೆಂಬಲಿಸುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಇದನ್ನೂ ಓದಿ: 2025 ರ ವೇಳೆಗೆ ದೇಶಾದ್ಯಂತ 20% ಎಥೆನಾಲ್ ಮಿಶ್ರಿತ ಪೆಟ್ರೋಲ್, E20 ಲಭ್ಯವಾಗಲಿದೆ -ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ
“ARAI ಮತ್ತು ಸುಪ್ರೀಂ ಕೋರ್ಟ್ E20 ಕಾರ್ಯಕ್ರಮದ ಬಗ್ಗೆ ಸ್ಪಷ್ಟನೆ ನೀಡಿವೆ. ರಾಜಕೀಯವಾಗಿ ನನ್ನನ್ನು ಟಾರ್ಗೆಟ್ ಮಾಡಲು ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ನಡೆಸಲಾಗಿದೆ. ಇದು ಪೇಯ್ಡ್ ಅಭಿಯಾನವಾಗಿತ್ತು. ಆದ್ದರಿಂದ ಅದರ ಬಗ್ಗೆ ಗಮನ ಹರಿಸಬೇಡಿ” ಎಂದು ಅವರು ಹೇಳಿದ್ದಾರೆ.
ಇತ್ತೀಚಿನ ವಾರಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಎಥನಾಲ್ ಮಿಶ್ರಣ ಮತ್ತು E20 ಪೆಟ್ರೋಲ್ ಮಾರಾಟದ ಬಗ್ಗೆ ಸಚಿವ ನಿತಿನ್ ಗಡ್ಕರಿ ತೀವ್ರ ಟೀಕೆಗಳನ್ನು ಎದುರಿಸುತ್ತಿದ್ದಾರೆ. ವಾಹನಗಳ ಮಾಲೀಕರು ಇಂಧನವು ಮೈಲೇಜ್ ಅನ್ನು ಕಡಿಮೆ ಮಾಡುತ್ತದೆ.
ಇದನ್ನೂ ಓದಿ: ಕರ್ನಾಟಕದಲ್ಲಿ 2305 ಕಿ.ಮೀ.ಹೈವೇ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ: ನಿತಿನ್ ಗಡ್ಕರಿ
ಸುಪ್ರೀಂ ಕೋರ್ಟ್ ಈ ತಿಂಗಳ ಆರಂಭದಲ್ಲಿ E20 ಬಿಡುಗಡೆಯನ್ನು ನಿಲ್ಲಿಸಲು ಮತ್ತು ಪಂಪ್‌ಗಳಲ್ಲಿ ಎಥನಾಲ್-ಮುಕ್ತ ಪೆಟ್ರೋಲ್ ಅನ್ನು ಕಡ್ಡಾಯಗೊಳಿಸಲು ಪ್ರಯತ್ನಿಸಿದ್ದ ಅರ್ಜಿಯನ್ನು ವಜಾಗೊಳಿಸುವ ಮೂಲಕ ಆ ನಿಲುವನ್ನು ಬಲಪಡಿಸಿತು. ಎಥನಾಲ್ ಮಿಶ್ರಣವು ತೈಲ ಆಮದುಗಳನ್ನು ಕಡಿಮೆ ಮಾಡುತ್ತದೆ ಎಂದ ನಿತಿನ್ ಗಡ್ಕರಿ ರೈತರಿಗೆ ಹೊಸ ಆದಾಯದ ಅವಕಾಶಗಳ ಪ್ರತಿಪಾದನೆಯನ್ನು ಪುನರುಚ್ಚರಿಸಿದರು.
“ನಾವು ಮೆಕ್ಕೆಜೋಳದಿಂದ ಎಥೆನಾಲ್ ಉತ್ಪಾದಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಇದರ ಪರಿಣಾಮವಾಗಿ, ಉತ್ತರ ಪ್ರದೇಶ, ಬಿಹಾರ ಮತ್ತು ದೇಶಾದ್ಯಂತ ಮೆಕ್ಕೆಜೋಳದ ಕೃಷಿ 3 ಪಟ್ಟು ಹೆಚ್ಚಾಗಿದೆ” ಎಂದು ಅವರು ಹೇಳಿದರು. “ಭಾರತದ ಕೃಷಿ ಬೆಳವಣಿಗೆಯ ದರ ಸಾಂಪ್ರದಾಯಿಕವಾಗಿ ಕಡಿಮೆಯಾಗಿದೆ. ಇಂಧನ ಮತ್ತು ವಿದ್ಯುತ್ ವಲಯಕ್ಕೆ ಕೃಷಿಯ ಈ ವೈವಿಧ್ಯೀಕರಣವು ರೈತರಿಗೆ ನೇರವಾಗಿ ಪ್ರಯೋಜನವನ್ನು ನೀಡುತ್ತದೆ ಮತ್ತು ಆರ್ಥಿಕತೆಯನ್ನು ಬಲಪಡಿಸುತ್ತದೆ, ಅದರಲ್ಲಿ ಯಾವುದೇ ತಪ್ಪಿಲ್ಲ” ಎಂದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ