ಕಾಶ್ಮೀರ ಗಡಿಯಲ್ಲಿ ಪಾಕ್ ಸೇನೆಯಿಂದ ಗುಂಡಿನ ದಾಳಿ; ಬಿಎಸ್ಎಫ್ ಯೋಧರು ಸೇರಿ ಐವರಿಗೆ ಗಾಯ
ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಭಾರತೀಯ ಪೋಸ್ಟ್‌ಗಳ ಮೇಲೆ ಪಾಕಿಸ್ತಾನಿ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಪಡೆಗಳು ಕೂಡ ಅದಕ್ಕೆ ಪ್ರತಿದಾಳಿ ನಡೆಸಿವೆ.
ಶ್ರೀನಗರ: ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ಸೇನೆಯಿಂದ ಫೈರಿಂಗ್ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಓರ್ವ ಬಿಎಸ್ಎಫ್ ಯೋಧ, ನಾಲ್ವರು ನಾಗರಿಕರಿಗೆ ಗಾಯವಾಗಿದೆ. ಜಮ್ಮು- ಕಾಶ್ಮೀರ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನದ ಸೇನೆ ಗುಂಡಿನ ದಾಳಿ ನಡೆಸಿದೆ. ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ ನಡೆದಿದೆ.
ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಭಾರತೀಯ ಪೋಸ್ಟ್‌ಗಳ ಮೇಲೆ ಪಾಕಿಸ್ತಾನಿ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಪಡೆಗಳು ಕೂಡ ಅದಕ್ಕೆ ಪ್ರತಿದಾಳಿ ನಡೆಸಿವೆ ಎಂದು ಬಿಎಸ್‌ಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕುಪ್ವಾರಾ ಜಿಲ್ಲೆಯ ಎಲ್‌ಒಸಿಯಾದ್ಯಂತ ನುಸುಳಲು ಯತ್ನಿಸಿದ ಐವರು ಎಲ್‌ಇಟಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
#WATCH | “A lot of firing was done by Pakistan overnight. No person has been injured in this but a house building has been damaged. After 6 years, there was firing from the Pakistan side last night. Our security forces retaliated to the firing,” says Dev Raj Chowdhary, Sarpanch,… pic.twitter.com/5mLAjo9J7G
— ANI (@ANI) October 27, 2023
#WATCH | Houses damaged in Arnia of RS Pura sector due to unprovoked firing by Pakistan along Jammu border pic.twitter.com/fpsVXiam8K
— ANI (@ANI) October 27, 2023
ಇದನ್ನೂ ಓದಿ: ಹಮಾಸ್ ಉಗ್ರರು ಇಸ್ರೇಲ್ನಲ್ಲಿ ಮನೆಗಳಿಗೆ ನುಗ್ಗಿ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ವಿಡಿಯೋ ವೈರಲ್
ಕುಪ್ವಾರದ ಮಚಿಲ್ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆಯಲ್ಲಿ ಪೊಲೀಸರು ಮತ್ತು ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯ ಕೆಲವೇ ಗಂಟೆಗಳ ನಂತರ ಅರ್ನಿಯಾ ಸೆಕ್ಟರ್‌ನಲ್ಲಿ ಕದನ ವಿರಾಮ ಉಲ್ಲಂಘನೆಯಾಗಿದೆ. ಅರ್ನಿಯಾ ಮತ್ತು ಆರ್‌ಎಸ್ ಪುರ ಸೆಕ್ಟರ್‌ಗಳಲ್ಲಿ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಭಾರತೀಯ ಪೋಸ್ಟ್‌ಗಳ ಮೇಲೆ ಪಾಕಿಸ್ತಾನ ರೇಂಜರ್‌ಗಳು ರಾತ್ರಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದರಿಂದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧರು ಮತ್ತು ಒಬ್ಬರು ನಾಗರಿಕ ಗಾಯಗೊಂಡಿದ್ದಾರೆ. ಗುಂಡಿನ ದಾಳಿಯ ನಂತರ, ಆರ್‌ಎಸ್ ಪುರದ ಅರ್ನಿಯಾದಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿದೆ.
#WATCH | Jammu and Kashmir: “…The firing started at 8 p.m. There was heavy firing. This happened after almost 4-5 years…Everyone is inside their homes…,” says a local in Jammu’s Arnia. (26.10) https://t.co/83CUPotu5R pic.twitter.com/R8rJxvZcqq
— ANI (@ANI) October 27, 2023
ಇದನ್ನೂ ಓದಿ: ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ, 22 ಮಂದಿ ಸಾವು
ಕದನ ವಿರಾಮ ಉಲ್ಲಂಘನೆ ಮತ್ತು ಅರ್ನಿಯಾ ಪ್ರದೇಶದಲ್ಲಿನ ಅವರ ಪೋಸ್ಟ್‌ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿಗೆ ಪಾಕಿಸ್ತಾನ ರೇಂಜರ್‌ಗಳಿಗೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಜಮ್ಮುವಿನಲ್ಲಿರುವ ಬಿಎಸ್‌ಎಫ್ ಮಾಹಿತಿ ನೀಡಿದೆ. ಪಾಕಿಸ್ತಾನದ ಕಡೆಯಿಂದ ರಾತ್ರಿ 8 ಗಂಟೆ ಸುಮಾರಿಗೆ ಕದನ ವಿರಾಮ ಉಲ್ಲಂಘನೆ ಆರಂಭವಾಗಿದೆ ಎಂದು ಬಿಎಸ್ಎಫ್ ಮಾಹಿತಿ ನೀಡಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:26 am, Fri, 27 October 23