AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೂವರೆ ಗಂಟೆಯಲ್ಲಿ ಭಾರತದ 4 ರಾಜ್ಯ, 24 ನಗರಗಳಲ್ಲಿ ಪಾಕಿಸ್ತಾನದಿಂದ ಡ್ರೋನ್ ದಾಳಿ; ಭಾರತೀಯ ಸೇನೆ ಮಾಹಿತಿ

ಜಮ್ಮು ಕಾಶ್ಮೀರ, ಪಂಜಾಬ್, ರಾಜಸ್ಥಾನ, ಗುಜರಾತ್‌ನ 24 ನಗರಗಳನ್ನು ಗುರಿಯಾಗಿಸಿಕೊಂಡು 500 ಪಾಕಿಸ್ತಾನದ ಡ್ರೋನ್‌ಗಳು ದಾಳಿ ನಡೆಸಿವೆ. ಗುರುವಾರ ರಾತ್ರಿ 8 ಗಂಟೆಯಿಂದ ರಾತ್ರಿ 11.30ರವರೆಗೆ ಪಾಕಿಸ್ತಾನದ 500 ಡ್ರೋನ್​ಗಳಿಂದ ದಾಳಿ ನಡೆಸಲಾಗಿದೆ. ಆ ಡ್ರೋನ್​ಗಳ ಪ್ರಯತ್ನವನ್ನು ಭಾರತೀಯ ಸೇನಾಪಡೆ ವಿಫಲಗೊಳಿಸಿದೆ ಎಂದು ಸೇನಾ ಮೂಲಗಳು ಇಂದು ಮಾಹಿತಿ ನೀಡಿವೆ.

ಮೂರೂವರೆ ಗಂಟೆಯಲ್ಲಿ ಭಾರತದ 4 ರಾಜ್ಯ, 24 ನಗರಗಳಲ್ಲಿ ಪಾಕಿಸ್ತಾನದಿಂದ ಡ್ರೋನ್ ದಾಳಿ; ಭಾರತೀಯ ಸೇನೆ ಮಾಹಿತಿ
Indian Army
ಸುಷ್ಮಾ ಚಕ್ರೆ
|

Updated on: May 09, 2025 | 5:12 PM

Share

ನವದೆಹಲಿ, ಮೇ 9: ಪಾಕಿಸ್ತಾನವು ಮೇ 8ರಂದು ಡ್ರೋನ್​ಗಳನ್ನು ಬಳಸಿ ಭಾರತದ 24 ನಗರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಭಾರತೀಯ ಸಶಸ್ತ್ರ ಪಡೆಗಳು ಈ ದಾಳಿಯ ಪ್ರಯತ್ನಗಳನ್ನು ಯಶಸ್ವಿಯಾಗಿ ವಿಫಲಗೊಳಿಸಿದವು ಮತ್ತು ಡ್ರೋನ್‌ಗಳನ್ನು ತಟಸ್ಥಗೊಳಿಸಿದವು. ಮೇ 8ರ ರಾತ್ರಿ ಪಾಕಿಸ್ತಾನವು 210 ನಿಮಿಷಗಳಲ್ಲಿ 500 ಸಣ್ಣ ಡ್ರೋನ್‌ಗಳನ್ನು ಉಡಾಯಿಸುವ ಮೂಲಕ ಕಾರ್ಯಾಚರಣೆಯನ್ನು ನಡೆಸಿತು. 24 ಭಾರತೀಯ ನಗರಗಳನ್ನು ಟಾರ್ಗೆಟ್ ಮಾಡಿ ಈ ದಾಳಿ ನಡೆಸಲಾಗಿತ್ತು ಎಂದು ರಕ್ಷಣಾ ಮೂಲಗಳು ಬಹಿರಂಗಪಡಿಸಿವೆ. ಏಕಕಾಲಕ್ಕೆ ವಿವಿಧ ನಗರಗಳಲ್ಲಿ ಪಾಕಿಸ್ತಾನ ನಡೆಸಿದ ಡ್ರೋನ್ ದಾಳಿಯನ್ನು (Pakistan Drone Attack) ಭಾರತೀಯ ಸೇನೆ ಮತ್ತು ವಾಯುಪಡೆಯು L70, ZU-23, ಶಿಲ್ಕಾ ಮತ್ತು ಆಕಾಶ್ ಸೇರಿದಂತೆ ಕ್ಷಿಪಣಿ ವಿರೋಧಿ ವ್ಯವಸ್ಥೆಗಳ ಶ್ರೇಣಿಯನ್ನು ಬಳಸಿಕೊಂಡು ಯಶಸ್ವಿಯಾಗಿ ವಿಫಲಗೊಳಿಸಿತು.

ಮೇ 8ರಂದು ರಾತ್ರಿ ಒಂದು ಲಜ್ಜೆಗೆಟ್ಟ ದುಸ್ಸಾಹಸಕ್ಕೆ ಹೊರಟ ಪಾಕಿಸ್ತಾನವು, 24 ಭಾರತೀಯ ನಗರಗಳನ್ನು ಗುರಿಯಾಗಿಸಿಕೊಂಡು 210 ನಿಮಿಷ 500 ಸಣ್ಣ ಡ್ರೋನ್‌ಗಳನ್ನು ಉಡಾಯಿಸಿತು ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಪಾಕಿಸ್ತಾನ ಗುರುವಾರ ರಾತ್ರಿ 8ರಿಂದ 11.30ರ ನಡುವೆ ಡ್ರೋನ್ ದಾಳಿ ನಡೆಸಿತು. ಅದಕ್ಕೆ ಭಾರತೀಯ ಸಶಸ್ತ್ರ ಪಡೆಗಳು ತಕ್ಕ ಉತ್ತರ ನೀಡಿದವು. ರಷ್ಯಾ ನಿರ್ಮಿತ ಎಸ್ -400 ಮತ್ತು ದೇಶೀಯವಾಗಿ ನಿರ್ಮಿತ ಆಕಾಶ್ ನಿಂದ ನಡೆಸಲ್ಪಡುವ ಭಾರತೀಯ ವಾಯು ರಕ್ಷಣಾ ವ್ಯವಸ್ಥೆಯು ಡ್ರೋನ್ ದಾಳಿಯನ್ನು ಎದುರಿಸಿತು. ಪಾಕಿಸ್ತಾನದ 1 ಡ್ರೋನ್ ಕೂಡ ಭಾರತೀಯ ಮಣ್ಣನ್ನು ಮುಟ್ಟಿ ಅವ್ಯವಸ್ಥೆಯನ್ನು ಸೃಷ್ಟಿಸುವ ಮೊದಲೇ ಅವುಗಳನ್ನು ಹೊಡೆದುರುಳಿಸಿತು. ನಿನ್ನೆ ಸಂಜೆ ಜಮ್ಮು ನಾಗರಿಕ ವಿಮಾನ ನಿಲ್ದಾಣವನ್ನು ಅಪ್ಪಳಿಸುವಲ್ಲಿ ಕೇವಲ ಒಂದು ಡ್ರೋನ್ ಮಾತ್ರ ಯಶಸ್ವಿಯಾಯಿತು.

ಇದನ್ನೂ ಓದಿ: ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಸಿಐಎಸ್​ಎಫ್​ಗೆ ಅಮಿತ್ ಶಾ ನೀಡಿದ ನಿರ್ದೇಶನಗಳೇನು?

ಇದನ್ನೂ ಓದಿ
Image
ಸೇನಾ ಕಾರ್ಯಾಚರಣೆಯ ಲೈವ್ ಬೇಡ: ಟಿವಿ ಚಾನೆಲ್​ಗಳಿಗೆ ರಕ್ಷಣಾ ಇಲಾಖೆ ಸೂಚನೆ
Image
ಪಾಕ್​ ಜನ ಪ್ರಧಾನಿ ಶೆಹಬಾಜ್ ವಿರುದ್ಧ ಗರಂ ಆಗಿದ್ದೇಕೆ?
Image
ಭಾರತೀಯ ಸೇನೆ ದಾಳಿ ಮಾಡಿದ ಪಾಕಿಸ್ತಾನದ ನಗರಗಳ ಇತಿಹಾಸವೇನು ಗೊತ್ತೇ?
Image
ಭಾರತದಿಂದ ಎರಡನೇ ಬಾರಿ ದಾಳಿ, ಅಕ್ಷರಶಃ ನಲುಗಿದ ಪಾಕ್, ಏನೇನಾಯ್ತು?

ಪಾಕಿಸ್ತಾನ ನಿನ್ನೆ ಗುರಿಯಾಗಿಸಿಕೊಂಡ ರಾಜ್ಯಗಳಲ್ಲಿ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್ ಸೇರಿವೆ. ಅದಕ್ಕೆ ಭಾರತೀಯ ಸೇನೆಯು ಬಲವಾದ ಬಲದಿಂದ ಪ್ರತೀಕಾರ ತೀರಿಸಿಕೊಂಡಿತು. ಪಾಕಿಸ್ತಾನದ ಹೃದಯಭಾಗಕ್ಕೆ ಅಂದರೆ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಪಂಜಾಬ್ ಪ್ರಾಂತ್ಯದ ಅತಿದೊಡ್ಡ ನಗರ ಲಾಹೋರ್ ಮತ್ತು ಸಿಯಾಲ್ಕೋಟ್ ಮೇಲೆ ಭಾರತ ಡ್ರೋನ್‌ ದಾಳಿ ನಡೆಸಿತು.

ಮೇ 7-8ರ ರಾತ್ರಿ ಉತ್ತರ ಮತ್ತು ಪಶ್ಚಿಮ ಭಾರತದಲ್ಲಿ ಭಾರತೀಯ ಮಿಲಿಟರಿ ಗುರಿಗಳನ್ನು ಎದುರಿಸಲು ಪಾಕಿಸ್ತಾನ ಮಾಡಿದ ಪ್ರಯತ್ನಗಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನದ ಮೇಲೆ ಡ್ರೋನ್ ದಾಳಿ ನಡೆಸಲಾಗಿದೆ ಎಂದು ಭಾರತ ಸರ್ಕಾರ ಸುದ್ದಿಗೋಷ್ಠಿಯಲ್ಲಿ ಹೇಳಿದ ಬೆನ್ನಲ್ಲೇ ನಿನ್ನೆ ಸಂಜೆ ಪಾಕಿಸ್ತಾನದಲ್ಲಿ ಮತ್ತೆ ಡ್ರೋನ್ ದಾಳಿ ನಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ