AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಾಕಿಸ್ತಾನದಿಂದ ಒಐಸಿ ದುರುಪಯೋಗ’; ಜಮ್ಮು ಕಾಶ್ಮೀರದ ಕುರಿತ ದುರುದ್ದೇಶಪೂರಿತ ಹೇಳಿಕೆಗೆ ಭಾರತ ಆಕ್ರೋಶ

ಅಕ್ಟೋಬರ್ 17-18ರಂದು ಇರಾಕ್‌ನ ಬಾಗ್ದಾದ್‌ನಲ್ಲಿ ನಡೆದ ಇಸ್ಲಾಮಿಕ್ ಸಹಕಾರ ಸಂಸ್ಥೆಯ (ಒಐಸಿ) ವಿದೇಶಾಂಗ ಸಚಿವರ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಅಂಗೀಕರಿಸಲಾದ ನಿರ್ಣಯಗಳನ್ನು ಭಾರತ ಸರ್ಕಾರ ತಿರಸ್ಕರಿಸಿದೆ. ಈ ನಿರ್ಣಯಗಳು ದುರುದ್ದೇಶಪೂರ್ವಕ, ಪಕ್ಷಪಾತದಿಂದ ಕೂಡಿದ ಹಾಗೂ ಸುಳ್ಳು ಮಾಹಿತಿಗಳಿಂದ ಕೂಡಿದ್ದು, ಇವುಗಳನ್ನು ಪಾಕಿಸ್ತಾನವೇ ಹೆಣೆದಿದೆ ಎಂದು ಭಾರತ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷಪಾತ ಧೋರಣೆ ಮತ್ತು ಸ್ವಾರ್ಥ ಹಿತಾಸಕ್ತಿಗಳಿಗೆ ಬಾಗುವ ಮೂಲಕ ಒಐಸಿಯು ತನ್ನ ಸ್ವಂತ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತಿದೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಎಚ್ಚರಿಸಿದೆ. 

'ಪಾಕಿಸ್ತಾನದಿಂದ ಒಐಸಿ ದುರುಪಯೋಗ'; ಜಮ್ಮು ಕಾಶ್ಮೀರದ ಕುರಿತ ದುರುದ್ದೇಶಪೂರಿತ ಹೇಳಿಕೆಗೆ ಭಾರತ ಆಕ್ರೋಶ
Randhir Jaiswal Image Credit source: PTI
ಸುಷ್ಮಾ ಚಕ್ರೆ
|

Updated on: Oct 19, 2026 | 6:46 PM

Share

ನವದೆಹಲಿ, ಅಕ್ಟೋಬರ್ 19: ಒಐಸಿ (ಇಸ್ಲಾಮಿಕ್ ಸಹಕಾರ ಸಂಸ್ಥೆ) ವೇದಿಕೆಯನ್ನು ಪಾಕಿಸ್ತಾನವು ತನ್ನ ಸ್ವಾರ್ಥ ರಾಜಕೀಯಕ್ಕಾಗಿ ಮತ್ತು ಭಾರತದ ವಿರುದ್ಧ ಅಪಪ್ರಚಾರ ಮಾಡಲು ನಿರಂತರವಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಭಾರತ ತೀವ್ರವಾಗಿ ಆಕ್ಷೇಪಿಸಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಒಐಸಿ ನೀಡಿರುವ ಆಧಾರರಹಿತ ಮತ್ತು ದುರುದ್ದೇಶಪೂರ್ವಕ ಹೇಳಿಕೆಗಳನ್ನು ಭಾರತ ಸರ್ಕಾರ ಸಂಪೂರ್ಣವಾಗಿ ತಿರಸ್ಕರಿಸಿದೆ. ಪಾಕಿಸ್ತಾನವು ತನ್ನ ಸಂಕುಚಿತ ಅಜೆಂಡಾವನ್ನು ಈಡೇರಿಸಿಕೊಳ್ಳಲು ಒಐಸಿಯಂತಹ ಅಂತಾರಾಷ್ಟ್ರೀಯ ವೇದಿಕೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಭಾರತ ಕಟುವಾಗಿ ಟೀಕಿಸಿದೆ. ಜಮ್ಮು-ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದ್ದು, ಈ ಆಂತರಿಕ ವಿಷಯದ ಬಗ್ಗೆ ಮಾತನಾಡುವ ಯಾವುದೇ ನೈತಿಕ ಹಕ್ಕು ಒಐಸಿಗೆ ಇಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

ಪಕ್ಷಪಾತ ಧೋರಣೆ ಮತ್ತು ಸ್ವಾರ್ಥ ಹಿತಾಸಕ್ತಿಗಳಿಗೆ ಬಾಗುವ ಮೂಲಕ ಒಐಸಿಯು ತನ್ನ ಸ್ವಂತ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತಿದೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಎಚ್ಚರಿಸಿದೆ. ಜಾಗತಿಕವಾಗಿ ಗಂಭೀರವಾದ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಭಯೋತ್ಪಾದನೆಯನ್ನು ಪೋಷಿಸುತ್ತಿರುವ ಪಾಕಿಸ್ತಾನದಂತಹ ದೇಶಗಳ ಕೈಗೊಂಬೆಯಾಗಿ ಒಐಸಿ ವರ್ತಿಸುತ್ತಿರುವುದು ಖಂಡನೀಯ ಎಂದು ಭಾರತ ಕಿಡಿಕಾರಿದೆ.

ಇದನ್ನೂ ಓದಿ: ‘ಪಾಕಿಸ್ತಾನದಿಂದ ಮತ್ತೆ ಭಯೋತ್ಪಾದಕ ಕೃತ್ಯ ನಡೆದರೆ ಭಾರತ ಸುಮ್ಮನಿರುವುದಿಲ್ಲ’; ಸಚಿವ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ

ಭಾರತದ ಸ್ಪಷ್ಟ ನಿಲುವು:

ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರ ಆಡಳಿತ ಪ್ರದೇಶಗಳು ಭಾರತದ ಅಭಿಭಾಜ್ಯ ಅಂಗಗಳಾಗಿದ್ದು, ಇಲ್ಲಿನ ಅಭಿವೃದ್ಧಿ ಮತ್ತು ಜನಪರ ಕಾರ್ಯಗಳ ಬಗ್ಗೆ ಬೇರೆ ಯಾವುದೇ ಹೊರಗಿನ ಸಂಸ್ಥೆಗಳು ಅಥವಾ ದೇಶಗಳು ಅನಗತ್ಯ ಟೀಕೆ ಮಾಡುವುದು ಅಥವಾ ಹಸ್ತಕ್ಷೇಪ ಮಾಡುವುದನ್ನು ಭಾರತ ಎಂದಿಗೂ ಸಹಿಸುವುದಿಲ್ಲ ಎಂದು ಭಾರತ ಸರ್ಕಾರ ಪುನರುಚ್ಚರಿಸಿದೆ.

ಆರ್ಟಿಕಲ್ 370 ರದ್ದತಿಯ ನಂತರ ಜಮ್ಮು-ಕಾಶ್ಮೀರದಲ್ಲಿ ಮೂಲಸೌಕರ್ಯ, ಪ್ರವಾಸೋದ್ಯಮ ಮತ್ತು ಸಂಪರ್ಕದ ಕ್ಷೇತ್ರದಲ್ಲಿ ಭಾರಿ ಅಭಿವೃದ್ಧಿಯಾಗಿದ್ದು, ಇದರ ನೇರ ಪ್ರಯೋಜನ ಜನರಿಗೆ ತಲುಪುತ್ತಿದೆ ಎಂದು ಸಚಿವಾಲಯ ಹೇಳಿದೆ. ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಪ್ರತಿಭಟನೆ ನಡೆಸುತ್ತಿರುವ ನಾಗರಿಕರು, ಮಹಿಳೆಯರು ಹಾಗೂ ಮಕ್ಕಳ ಮೇಲೆ ಇಸ್ಲಾಮಾಬಾದ್ ಸರ್ಕಾರ ತೀವ್ರ ಹಿಂಸಾಚಾರ ಮತ್ತು ಭೀಕರ ದೌರ್ಜನ್ಯವೆಸಗಿದೆ. ಎಷ್ಟೇ ಮಾಧ್ಯಮ ನಿರ್ಬಂಧಗಳನ್ನು ಹೇರಿದರೂ ಅಲ್ಲಿ ನಡೆಯುತ್ತಿರುವ ಈ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಭಾರತ ತಿರುಗೇಟು ನೀಡಿದೆ.

ಇದನ್ನೂ ಓದಿ: ಅಮೆರಿಕ ವಿರುದ್ಧ ಯುದ್ಧವಾದರೆ ಪಾಕಿಸ್ತಾನ ಬೆಂಬಲಿಸುತ್ತೇವೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋಡ್ ಹೇಳಿಕೆಗೆ ತೀವ್ರ ಆಕ್ರೋಶ

ಇಸ್ಲಾಮೋಫೋಬಿಯಾ ಕುರಿತಾದ ದುರುದ್ದೇಶಪೂರ್ವಕ ಆರೋಪಗಳು ಪಾಕಿಸ್ತಾನದ ತಂತ್ರವಾಗಿದೆ. ತನ್ನದೇ ದೇಶದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತರ ಶೋಷಣೆ, ಕೋಮು ಹಿಂಸಾಚಾರ, ಆಡಳಿತ ವೈಫಲ್ಯ ಹಾಗೂ ರಾಜಕೀಯ ಆಸ್ಥಿರತೆಯಿಂದ ಜಾಗತಿಕ ಗಮನವನ್ನು ಬೇರೆಡೆ ಸೆಳೆಯಲು ಪಾಕಿಸ್ತಾನ ಮಾಡುತ್ತಿರುವ ಹತಾಶ ಪ್ರಯತ್ನ ಇದಾಗಿದೆ ಎಂದು ವಿದೇಶಾಂಗ ಸಚಿವಾಲಯ ತರಾಟೆಗೆ ತೆಗೆದುಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಗಾನವಿ ಬುಸ್ ಅಂದ್ರೆ ಭಯ ಬೀಳ್ತಾರಾ ತಾಂಡವ್ ರಾಮ್?
ಗಾನವಿ ಬುಸ್ ಅಂದ್ರೆ ಭಯ ಬೀಳ್ತಾರಾ ತಾಂಡವ್ ರಾಮ್?
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಮುಂಬೈನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ; 16 ವರ್ಷದ ಬಾಲಕ ಸಾವು
ಮುಂಬೈನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ; 16 ವರ್ಷದ ಬಾಲಕ ಸಾವು
7 ಮಂದಿ ಕೊಲೆ ಪ್ರಕರಣ: ಆರೋಪಿ ಇಂದುಶೇಖರ್​​ ವಿಚಾರಣೆ ಮತ್ತಷ್ಟು ತೀವ್ರ
7 ಮಂದಿ ಕೊಲೆ ಪ್ರಕರಣ: ಆರೋಪಿ ಇಂದುಶೇಖರ್​​ ವಿಚಾರಣೆ ಮತ್ತಷ್ಟು ತೀವ್ರ