ದ್ವೇಷ ಬೇಡ, ಭರವಸೆ ಇರಲಿ; ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ ನವಾಜ್ ಷರೀಫ್

ಶೆಹಬಾಜ್ ಷರೀಫ್ ಅವರ ಸಂದೇಶಕ್ಕೆ ಮೋದಿ ಅವರು X ನಲ್ಲಿ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿದ್ದು "ನಿಮ್ಮ ಶುಭ ಹಾರೈಕೆಗಳಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ. 2014 ರಲ್ಲಿ ಮೋದಿಯವರ ಮೊದಲ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿತ ದೇಶಗಳಲ್ಲಿ ಪಾಕಿಸ್ತಾನವೂ ಸೇರಿತ್ತು. ಆದರೆ 2019 ರ ಪುಲ್ವಾಮಾ ಆತ್ಮಾಹುತಿ ಬಾಂಬ್ ದಾಳಿ ನಂತರ ದ್ವಿಪಕ್ಷೀಯ ಸಂಬಂಧಗಳು ಹದಗೆಟ್ಟವು.

ದ್ವೇಷ ಬೇಡ, ಭರವಸೆ ಇರಲಿ; ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ ನವಾಜ್ ಷರೀಫ್
ನರೇಂದ್ರ ಮೋದಿ- ನವಾಜ್ ಷರೀಫ್
Follow us
|

Updated on: Jun 10, 2024 | 7:37 PM

ದೆಹಲಿ ಜೂನ್ 10: ಭಾರತದಲ್ಲಿ ಹೊಸ ಸರ್ಕಾರ ರಚನೆಗೆ ಪಾಕಿಸ್ತಾನದಿಂದ ಮೊದಲ ಔಪಚಾರಿಕ ಪ್ರತಿಕ್ರಿಯೆಯಾಗಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಮತ್ತು ಮಾಜಿ ಪ್ರಧಾನಿ ನವಾಜ್ ಷರೀಫ್ (Nawaz Sharif) ಸೋಮವಾರ ಅಭಿನಂದಿಸಿದ್ದಾರೆ. ಮೋದಿಯವರಿಗೆ ಚುನಾವಣಾ ಗೆಲುವಿನ ಸಂದೇಶವನ್ನು ಕಳುಹಿಸುವುದನ್ನು ಪಾಕಿಸ್ತಾನವು ಇಲ್ಲಿಯವರೆಗೆ ತಡೆಹಿಡಿದಿತ್ತು. ಕಳೆದ ಶುಕ್ರವಾರ ವಿದೇಶಾಂಗ ಕಚೇರಿಯ ವಕ್ತಾರರು ಸರ್ಕಾರ ರಚಿಸುವ ಪ್ರಕ್ರಿಯೆ ನಡೆಯುತ್ತಿರುವುದರಿಂದ ಇಂತಹ ಸಂದೇಶವನ್ನು ಕಳುಹಿಸುವ ಬಗ್ಗೆ ಮಾತನಾಡುವುದು “ಅಕಾಲಿಕ” ಎಂದು ಹೇಳಿದ್ದರು. ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು” ಎಂದು ಷರೀಫ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಷರೀಫ್ ಅವರ ಹಿರಿಯ ಸಹೋದರ ನವಾಜ್ ಷರೀಫ್, ಮೂರು ಬಾರಿ ಮಾಜಿ ಪ್ರಧಾನಿ ಮತ್ತು ಆಡಳಿತಾರೂಢ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಮುಖ್ಯಸ್ಥರೂ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ,

“ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ಮೋದಿ ಜಿ ಅವರಿಗೆ ನನ್ನ ಹಾರ್ದಿಕ ಶುಭಾಶಯಗಳು. ಇತ್ತೀಚಿನ ಚುನಾವಣೆಗಳಲ್ಲಿ ನಿಮ್ಮ ಪಕ್ಷದ ಯಶಸ್ಸು ನಿಮ್ಮ ನಾಯಕತ್ವದಲ್ಲಿ ಜನರ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ” ಎಂದು ನವಾಜ್ ಷರೀಫ್ ಹೇಳಿದ್ದಾರೆ. 2014 ರಲ್ಲಿ ಮೋದಿಯವರ ಮೊದಲ ಪ್ರಮಾಣ ವಚನ ಸಮಾರಂಭದಲ್ಲಿ ಪಾಕಿಸ್ತಾನದ ಪ್ರಧಾನಿಯಾಗಿ ಭಾಗವಹಿಸಿದ್ದರು. “ನಾವು ದ್ವೇಷವನ್ನು ಭರವಸೆಯಿಂದ ಬದಲಾಯಿಸೋಣ ಮತ್ತು ದಕ್ಷಿಣ ಏಷ್ಯಾದ ಎರಡು ಶತಕೋಟಿ ಜನರ ಭವಿಷ್ಯವನ್ನು ರೂಪಿಸುವ ಅವಕಾಶವನ್ನು ಬಳಸಿಕೊಳ್ಳೋಣ ಎಂದು ಅವರು ಹೇಳಿದ್ದಾರೆ.

ಮೋದಿ ಟ್ವೀಟ್

ಶೆಹಬಾಜ್ ಷರೀಫ್ ಅವರ ಸಂದೇಶಕ್ಕೆ ಮೋದಿ ಅವರು X ನಲ್ಲಿ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿದ್ದು “ನಿಮ್ಮ ಶುಭ ಹಾರೈಕೆಗಳಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ. 2014 ರಲ್ಲಿ ಮೋದಿಯವರ ಮೊದಲ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿತ ದೇಶಗಳಲ್ಲಿ ಪಾಕಿಸ್ತಾನವೂ ಸೇರಿತ್ತು. ಆದರೆ 2019 ರ ಪುಲ್ವಾಮಾ ಆತ್ಮಾಹುತಿ ಬಾಂಬ್ ದಾಳಿ ನಂತರ ದ್ವಿಪಕ್ಷೀಯ ಸಂಬಂಧಗಳು ಹದಗೆಟ್ಟವು.

ಇದನ್ನೂ ಓದಿ: Modi 3.0 Cabinet: ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ತೆಗೆದುಕೊಂಡ ಮೊದಲ ನಿರ್ಧಾರ ಇದು

ಅಧ್ಯಕ್ಷ ಷಿ ಜಿನ್‌ಪಿಂಗ್ ಸೇರಿದಂತೆ ಚೀನಾದ ಉನ್ನತ ನಾಯಕತ್ವದಿಂದ ಭಾರತವು ಯಾವುದೇ ಸಂದೇಶವನ್ನು ಸ್ವೀಕರಿಸಿಲ್ಲ. ಶನಿವಾರ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ತಮ್ಮ ಚೀನೀ ಸಹೋದ್ಯೋಗಿಯಿಂದ ಅಭಿನಂದನಾ ಸಂದೇಶಕ್ಕೆ ಪ್ರತಿಕ್ರಿಯಿಸಿ, “ಪರಸ್ಪರ ಗೌರವ, ಪರಸ್ಪರ ಹಿತಾಸಕ್ತಿ ಮತ್ತು ಪರಸ್ಪರ ಸಂವೇದನೆ” ಆಧಾರದ ಮೇಲೆ ಚೀನಾದೊಂದಿಗಿನ ಸಂಬಂಧವನ್ನು ಸಾಮಾನ್ಯಗೊಳಿಸಲು ಭಾರತವು ಪ್ರಯತ್ನಿಸುತ್ತದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು