ಕುಲ್ಗಾಮ್: ಜಮ್ಮು ಕಾಶ್ಮೀರದ ಕುಲ್ಗಾಮ್ನಲ್ಲಿ (Jammu Kashmir) ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಷ್-ಎ-ಮೊಹಮ್ಮದ್ (Jaish-e-Mohammed) ಜೊತೆ ಸಂಪರ್ಕ ಹೊಂದಿದ್ದ ಪಾಕಿಸ್ತಾನಿ ಭಯೋತ್ಪಾದಕನನ್ನು (Pakistani Terrorist) ಹತ್ಯೆ ಮಾಡಲಾಗಿದೆ. ಮೃತ ಉಗ್ರನನ್ನು ಅಬು ಹುರಾರಾ ಎಂದು ಗುರುತಿಸಲಾಗಿದೆ.
ಪೊಲೀಸರು ಆತನಿಂದ ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಎನ್‌ಕೌಂಟರ್ ಆದ ಭಯೋತ್ಪಾದಕನನ್ನು ಅಬು ಹುರಾರಾ ಎಂದು ಗುರುತಿಸಲಾಗಿದೆ. ಆತ ನಿಷೇಧಿತ ಭಯೋತ್ಪಾದಕ ಸಂಘಟನೆ ಜೆಇಎಂ ಜೊತೆ ನಂಟು ಹೊಂದಿದ್ದ ಪಾಕಿಸ್ತಾನಿ ಉಗ್ರನಾಗಿದ್ದ ಎಂದು ಕಾಶ್ಮೀರ ವಲಯ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಇದನ್ನೂ ಓದಿ:Jaish-e-Mohammed terrorists: ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರ ಎನ್‌ಕೌಂಟರ್ ಮಾಡಿದ ಭದ್ರತಾ ಪಡೆ
ಇದಕ್ಕೂ ಮುನ್ನ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಸೇನಾ ಯೋಧ ಹಾಗೂ ಇಬ್ಬರು ನಾಗರಿಕರು ಗಾಯಗೊಂಡಿದ್ದರು. ಗಾಯಗೊಂಡ ಮೂವರೂ ನಾಗರಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಿಂದಿನ ದಿನ ಕುಲ್ಗಾಮ್‌ನ ಬೀಟ್‌ಪೋರ್ಟ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿತ್ತು. ಭದ್ರತಾ ಪಡೆಗಳೊಂದಿಗೆ ಪೊಲೀಸರು ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.