ಯುದ್ಧಕ್ಕೆ ಪ್ರಚೋದನೆ: ಪಾಕ್​ನಿಂದ ಗಡಿಯಲ್ಲಿ ಗುಂಡಿನ ದಾಳಿ, ಭಾರತೀಯ ಸೇನೆಯಿಂದ ಪ್ರತಿದಾಳಿ

ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ನಲ್ಲಿರುವ ಪಹಲ್ಗಾಮ್​(Pahalgam)ನಲ್ಲಿ ಉಗ್ರರ ದಾಳಿ ನಡೆದ ಬಳಿಕ ಪಾಕಿಸ್ತಾನವು ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಭಾರತೀಯ ಸೇನೆಗೆ ಯುದ್ಧಕ್ಕೆ ಪ್ರಚೋದನೆ ನೀಡುತ್ತಿದೆ. ಸತತ ಆರನೇ ದಿನವೂ ರಾತ್ರಿ ಗಡಿಯಲ್ಲಿ ಪಾಕ್​ ಸೇನೆ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿದ ಪಾಕಿಸ್ತಾನಿ ಪಡೆಗಳಿಗೆ ಸೂಕ್ತ ಉತ್ತರ ನೀಡಿದೆ.

ಯುದ್ಧಕ್ಕೆ ಪ್ರಚೋದನೆ: ಪಾಕ್​ನಿಂದ ಗಡಿಯಲ್ಲಿ ಗುಂಡಿನ ದಾಳಿ, ಭಾರತೀಯ ಸೇನೆಯಿಂದ ಪ್ರತಿದಾಳಿ
ಭಾರತೀಯ ಸೇನೆ
Image Credit source: Deccan Herald

Updated on: Apr 30, 2025 | 9:04 AM

ನವದೆಹಲಿ, ಏಪ್ರಿಲ್ 30: ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ನಲ್ಲಿರುವ ಪಹಲ್ಗಾಮ್​(Pahalgam)ನಲ್ಲಿ ಉಗ್ರರ ದಾಳಿ ನಡೆದ ಬಳಿಕ ಪಾಕಿಸ್ತಾನವು ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಭಾರತೀಯ ಸೇನೆಗೆ ಯುದ್ಧಕ್ಕೆ ಪ್ರಚೋದನೆ ನೀಡುತ್ತಿದೆ. ಸತತ ಆರನೇ ದಿನವೂ ರಾತ್ರಿ ಗಡಿಯಲ್ಲಿ ಪಾಕ್​ ಸೇನೆ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿದ ಪಾಕಿಸ್ತಾನಿ ಪಡೆಗಳಿಗೆ ಸೂಕ್ತ ಉತ್ತರ ನೀಡಿದೆ.

ಪಾಕ್ ಸೇನೆಯು ಏಪ್ರಿಲ್ 29-30ರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ನೌಶೇರಾ, ಸುಂದರ್‌ಬಾನಿ ಮತ್ತು ಅಖ್ನೂರ್ ಸೆಕ್ಟರ್‌ಗಳ ಎದುರು ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿದ್ದವು. ಭಾರತೀಯ ಸೇನಾ ಪಡೆಗಳು ತ್ವರಿತವಾಗಿ ಮತ್ತು ಪ್ರಮಾಣಾನುಗುಣವಾಗಿ ಪ್ರತಿಕ್ರಿಯಿಸಿದೆ.

ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಓರ್ವ ಸ್ಥಳೀಯ, 25 ಪ್ರವಾಸಿಗರು ಸೇರಿ 26 ಮಂದಿಸಾವನ್ನಪ್ಪಿದ್ದರು. ಇದಾದ ನಂತರ , ನಂತರ ಎರಡೂ ನೆರೆಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ ಇತ್ತೀಚಿನ ಬೆಳವಣಿಗೆ ಸಂಭವಿಸಿದೆ.

ಇದನ್ನೂ ಓದಿ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೊಬ್ಬ ಕನ್ನಡಿಗ ಬಲಿ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌ ಉಗ್ರರ ದಾಳಿ, ಕನ್ನಡಿಗರ ನೆರವಿಗೆ ಅಧಿಕಾರಿಗಳನ್ನ ಕಳುಹಿಸಿದ ಸಿಎಂ

ಮಂಗಳವಾರ, ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ವಲಯದ ಜೊತೆಗೆ ಕುಪ್ವಾರಾ ಮತ್ತು ಬಾರಾಮುಲ್ಲಾ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ಪಾಕಿಸ್ತಾನಿ ಪಡೆಗಳು ಕದನ ವಿರಾಮವನ್ನು ಉಲ್ಲಂಘಿಸಿವೆ. ಈ ಪ್ರಚೋದನೆಗಳಿಗೆ ಭಾರತೀಯ ಸೇನೆಯು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ಓದಿ: ಮಾಡೋದೆಲ್ಲಾ ಮಾಡಿ ಈಗ ಹೆದರಿ ಕುಳಿತ ಪಾಕ್: 24-36 ಗಂಟೆಯಲ್ಲಿ ಭಾರತದಿಂದ ದಾಳಿ ನಡೆಯಬಹುದು ಎಂದ ಪಾಕ್ ಸಚಿವ

ಭಾರತ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿತು ಮತ್ತು ಅಟ್ಟಾರಿ ಗಡಿಯನ್ನು ಸಂಚಾರಕ್ಕೆ ಮುಚ್ಚಿತು, ಆದರೆ ಪಾಕಿಸ್ತಾನವು 1972 ರ ಪಾಕ್-ಸಿಮ್ಲಾ ಒಪ್ಪಂದವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿತು. 24-36 ಗಂಟೆಯೊಳಗೆ ಭಾರತ ನಮ್ಮ ಮೇಲೆ ದಾಳಿ ನಡೆಸಬಹುದು ಎಂದು ಪಾಕಿಸ್ತಾನ ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ. ಭಾರತ ಮಿಲಿಟರಿ ದಾಳಿಯನ್ನು ಯೋಜಿಸುತ್ತಿದೆ ಎಂದು ಸೂಚಿಸುವ ವಿಶ್ವಾಸಾರ್ಹ ಗುಪ್ತಚರ ಮಾಹಿತಿಯನ್ನು ನಾವು ಹೊಂದಿದ್ದೇವೆ ಎಂದು ಪಾಕ್ ಸಚಿವ ಅತ್ತಾವುಲ್ಲಾ ತರಾರ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿಯಲ್ಲಿ 26 ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಲಷ್ಕರ್​-ಎ-ತೊಯ್ಬಾದ ಟಿಆರ್​ಎಫ್​ ಈ ದಾಳಿ ಹೊಣೆಯನ್ನು ಹೊತ್ತುಕೊಂಡಿತ್ತು. ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ನಮ್ಮ ಡೆಬ್​ಸೈಟ್​ ಯಾರೋ ಹ್ಯಾಕ್ ಮಾಡಿದ್ದಾರೆ, ನಾವು ಈ ದಾಳಿ ನಡೆಸಿಲ್ಲ ಎಂದು ಹೇಳಿಕೆ ನೀಡಿತ್ತು.

ಇದೀಗ ಭಾರತ ಏನು ಮಾಡಬಹುದು ಎನ್ನುವ ಭಯದಲ್ಲಿ ಪಾಕಿಸ್ತಾನವಿದ್ದು, ಮುಂದಿನ 36 ಗಂಟೆಯೊಳಗೆ ದಾಳಿ ನಡೆಸಬಹುದು ಎಂದು ಹೆದರಿ ಕುಳಿತಿದೆ. ಭಾರತೀಯ ಸೇನಾ ದಾಳಿಯ ಬೆದರಿಕೆ ಪಾಕಿಸ್ತಾನ ಸೇನೆಯೊಳಗೆ ಅವ್ಯವಸ್ಥೆಯನ್ನು ಹುಟ್ಟುಹಾಕಿದೆ ಎಂದು ವರದಿಯಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:03 am, Wed, 30 April 25

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us