1971ರ ಯುದ್ಧ ನೆನಪಿಸಿಕೊಳ್ಳಿ; ಕೊಲ್ಕತ್ತಾ ಮೇಲೆ ದಾಳಿಯ ಬೆದರಿಕೆ ಹಾಕಿದ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

ಕೊಲ್ಕತ್ತಾದ ಮೇಲೆ ದಾಳಿ ನಡೆಸಲಾಗುವುದು ಎಂಬ ಪಾಕಿಸ್ತಾನದ ಸಚಿವ ಖವಾಜಾ ಆಸಿಫ್​ ಬೆದರಿಕೆಗೆ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿರುಗೇಟು ನೀಡಿದ್ದಾರೆ. ಪಶ್ಚಿಮ ಬಂಗಾಳದ ಕೊಲ್ಕತ್ತಾ ಮೇಲೆ ದಾಳಿ ಮಾಡುವ ಪಾಕಿಸ್ತಾನದ ರಕ್ಷಣಾ ಸಚಿವರ ಬೆದರಿಕೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ 55 ವರ್ಷಗಳ ಹಿಂದೆ ಏನಾಗಿತ್ತು ಎಂಬುದನ್ನು ನೆನಪಿಸಿದ್ದಾರೆ. ಪಾಕಿಸ್ತಾನವು ಭಾರತದ ಪೂರ್ವ ಮಹಾನಗರವಾದ ಕೊಲ್ಕತ್ತಾದ ಮೇಲೆ ದಾಳಿ ನಡೆಸುತ್ತದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಬೆದರಿಕೆ ಹಾಕಿದ್ದರು.

1971ರ ಯುದ್ಧ ನೆನಪಿಸಿಕೊಳ್ಳಿ; ಕೊಲ್ಕತ್ತಾ ಮೇಲೆ ದಾಳಿಯ ಬೆದರಿಕೆ ಹಾಕಿದ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ
Rajnath Singh
Image Credit source: PTI

Updated on: Apr 07, 2026 | 5:31 PM

ನವದೆಹಲಿ, ಏಪ್ರಿಲ್ 7: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಭಾರತದಿಂದ ಮುಂದಿನ ದಿನಗಳಲ್ಲಿ ಯಾವುದೇ ತೊಂದರೆ ಎದುರಾದರೆ ಕೊಲ್ಕತ್ತಾವನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದರು. ಆ ಹೇಳಿಕೆಗೆ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಪ್ರತಿಕ್ರಿಯೆ ನೀಡಿದ್ದು, ನೀವೇನಾದರೂ ಭಾರತದ ಮೇಲೆ ದಾಳಿ ನಡೆಸಿದರೆ ಏನಾಗುತ್ತದೆ ಎಂಬುದನ್ನು ಇನ್ನೊಮ್ಮೆ ಪ್ರಯತ್ನಿಸಿ ನೋಡಿ. 1971ರಲ್ಲಿ ಏನಾಗಿತ್ತೆಂಬುದನ್ನು ನೆನಪಿಸಿಕೊಳ್ಳಿ ಎಂದಿದ್ದಾರೆ.

ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, 1971ರ ಯುದ್ಧದಲ್ಲಿ ಪಾಕಿಸ್ತಾನವನ್ನು ಎರಡು ಭಾಗಗಳಾಗಿ ವಿಭಜಿಸಿದ ಪರಿಣಾಮಗಳನ್ನು ನೆನಪಿಸಿಕೊಳ್ಳಿ. ಕೊಲ್ಕತ್ತಾದ ಮೇಲೆ ದಾಳಿ ನಡೆಸಲು ಬಂದರೆ ಪಾಕಿಸ್ತಾನ ಎಷ್ಟು ಭಾಗವಾಗುತ್ತದೋ ದೇವರಿಗೇ ಗೊತ್ತು ಎಂದು ಎಚ್ಚರಿಕೆ ನೀಡಿದ್ದಾರೆ. 1971ರ ಭಾರತ-ಪಾಕಿಸ್ತಾನ ಯುದ್ಧವು ಬಾಂಗ್ಲಾದೇಶದ ರಚನೆಗೆ ಕಾರಣವಾದ ದೇಶಗಳ ನಡುವಿನ ಪ್ರಮುಖ ಮಿಲಿಟರಿ ಸಂಘರ್ಷವಾಗಿತ್ತು.

ಇದನ್ನೂ ಓದಿ: 16 ವರ್ಷಗಳಿಂದ ಭಾರತದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಪಾಕಿಸ್ತಾನದ ಎಲ್​ಇಟಿ ಉಗ್ರ ಸೆರೆ


“ಪಾಕಿಸ್ತಾನದ ರಕ್ಷಣಾ ಸಚಿವರು ಈ ರೀತಿಯ ಪ್ರಚೋದನಕಾರಿ ಹೇಳಿಕೆಯನ್ನು ನೀಡಬಾರದಿತ್ತು. 55 ವರ್ಷಗಳ ಹಿಂದೆ ಪಾಕಿಸ್ತಾನವನ್ನು 2 ಭಾಗಗಳಾಗಿ ವಿಂಗಡಿಸಿದಾಗ ಪಾಕಿಸ್ತಾನ ಅದರ ಪರಿಣಾಮಗಳನ್ನು ಅನುಭವಿಸಿತ್ತು. ಅವರು ಬಂಗಾಳದ ಮೇಲೆ ಕಣ್ಣಿಡಲು ಪ್ರಯತ್ನಿಸಿದರೆ ಈ ಬಾರಿ ಪಾಕಿಸ್ತಾನ ಎಷ್ಟು ಭಾಗಗಳಾಗಿ ವಿಂಗಡಿಸಲ್ಪಡುತ್ತದೆಯೋ ದೇವರಿಗೇ ಗೊತ್ತು” ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us