ಪಬ್​​ಜಿ ಮೂಲಕ ನೋಯ್ಡಾ ವ್ಯಕ್ತಿ ಜತೆ ಸ್ನೇಹ; ನಾಲ್ವರು ಮಕ್ಕಳೊಂದಿಗೆ ಭಾರತಕ್ಕೆ ಬಂದು ಸಿಕ್ಕಿಬಿದ್ದ ಪಾಕಿಸ್ತಾನದ ಮಹಿಳೆ

ಸುಮಾರು 20 ವರ್ಷ ವಯಸ್ಸಿನ ಆಸುಪಾಸಿನಲ್ಲಿರುವ ಪಾಕಿಸ್ತಾನಿ ಮಹಿಳೆ ಮತ್ತು ಸ್ಥಳೀಯ ಪುರುಷ ಆನ್‌ಲೈನ್ ಗೇಮ್ ಪಬ್​ಜಿ ಮೂಲಕ ಸಂಪರ್ಕ ಹೊಂದಿದ್ದರು. ಇದು ಅವರ ನಡುವಿನ ಸ್ನೇಹಕ್ಕೆ ಕಾರಣವಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪಬ್​​ಜಿ ಮೂಲಕ ನೋಯ್ಡಾ ವ್ಯಕ್ತಿ ಜತೆ ಸ್ನೇಹ; ನಾಲ್ವರು ಮಕ್ಕಳೊಂದಿಗೆ ಭಾರತಕ್ಕೆ ಬಂದು ಸಿಕ್ಕಿಬಿದ್ದ ಪಾಕಿಸ್ತಾನದ ಮಹಿಳೆ
ಪಬ್​ಜಿ ಗೇಮ್ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on: Jul 03, 2023 | 9:23 PM

ನೋಯ್ಡಾ: ಗ್ರೇಟರ್ ನೋಯ್ಡಾದಲ್ಲಿ ಅಕ್ರಮವಾಗಿ ತಂಗಿದ್ದ ಪಾಕಿಸ್ತಾನಿ ಮಹಿಳೆ ಮತ್ತು ಆಕೆಯ ನಾಲ್ಕು ಮಕ್ಕಳನ್ನು ಪೊಲೀಸರು ಬಂಧಿಸಿದ್ದಾರೆ. ಆನ್​ಲೈನ್ ಗೇಮ್ ಪಬ್​ಜಿ (PUBG) ಆಡುವಾಗ ನೋಯ್ಡಾದ ವ್ಯಕ್ತಿಯೊಬ್ಬರನ್ನು ಪರಿಚಯವಾಗಿ ಆ ಮಹಿಳೆ ಭಾರತಕ್ಕೆ ಬಂದಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಟ್ಟಿರುವ ಗ್ರೇಟರ್ ನೋಯ್ಡಾ ನಿವಾಸಿಯಾಗಿರುವ ವ್ಯಕ್ತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ವ್ಯಕ್ತಿ ತಮ್ಮ ಬಾಡಿಗೆ ವಸತಿಗೃಹದಲ್ಲಿ ಪಾಕಿಸ್ತಾನದ ಮಹಿಳೆ ಹಾಗೂ ಆಕೆಯ ಮಕ್ಕಳನ್ನು ಇರಿಸಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನಿ ಮಹಿಳೆ ಮತ್ತು ಸ್ಥಳೀಯ ಪುರುಷನನ್ನು ಬಂಧಿಸಲಾಗಿದೆ. ಮಹಿಳೆಯ ನಾಲ್ವರು ಮಕ್ಕಳೂ ಸಹ ಪೊಲೀಸ್ ವಶದಲ್ಲಿದ್ದಾರೆ ಎಂದು ಪೊಲೀಸ್ ಉಪ ಆಯುಕ್ತ (ಗ್ರೇಟರ್ ನೋಯ್ಡಾ) ಸಾದ್ ಮಿಯಾ ಖಾನ್ ‘ಪಿಟಿಐ’ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಸುಮಾರು 20 ವರ್ಷ ವಯಸ್ಸಿನ ಆಸುಪಾಸಿನಲ್ಲಿರುವ ಪಾಕಿಸ್ತಾನಿ ಮಹಿಳೆ ಮತ್ತು ಸ್ಥಳೀಯ ಪುರುಷ ಆನ್‌ಲೈನ್ ಗೇಮ್ ಪಬ್​ಜಿ ಮೂಲಕ ಸಂಪರ್ಕ ಹೊಂದಿದ್ದರು. ಇದು ಅವರ ನಡುವಿನ ಸ್ನೇಹಕ್ಕೆ ಕಾರಣವಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇಬ್ಬರನ್ನೂ ಪ್ರಶ್ನಿಸಲಾಗುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ವಿಚಾರಣೆ ಮುಗಿದ ನಂತರ ಹೆಚ್ಚಿನ ವಿವರಗಳು ಮತ್ತು ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಖಾನ್ ಹೇಳಿದ್ದಾರೆ.

ಇದನ್ನೂ ಓದಿ: Supreme Court: ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಸುಪ್ರೀಂನಲ್ಲಿ ಜುಲೈ 11ರಂದು ವಿಚಾರಣೆ

ಸ್ಥಳೀಯ ಪೊಲೀಸ್ ಅಧಿಕಾರಿಯ ಪ್ರಕಾರ, ಮಹಿಳೆ ಕಳೆದ ತಿಂಗಳು ನೇಪಾಳದ ಮೂಲಕ ತನ್ನ ಮಕ್ಕಳೊಂದಿಗೆ ಭಾರತಕ್ಕೆ ಪ್ರವೇಶಿಸಿದ್ದಳು. ಬಳಿಕ ಉತ್ತರ ಪ್ರದೇಶಕ್ಕೆ ಬಂದು ಮತ್ತು ಬಸ್ ಮೂಲಕ ಗ್ರೇಟರ್ ನೋಯ್ಡಾ ತಲುಪಿದ್ದಳು.

ಮಹಿಳೆ ಮತ್ತು ಆಕೆಯ ಮಕ್ಕಳು ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದಲ್ಲಿ ವಾಸಿಸುವ ವ್ಯಕ್ತಿಯ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು