
ಶ್ರೀನಗರ, ಜನವರಿ 30: ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಭಾರತೀಯ ಪ್ರದೇಶದೊಳಗೆ ನುಸುಳಲು ಯತ್ನಿಸಿದ ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ಭಾರತೀಯ ಸೇನೆ (Indian Army) ಇಂದು ಹಿಮ್ಮೆಟ್ಟಿಸಿದೆ ಎಂದು ಮೂಲಗಳು ತಿಳಿಸಿವೆ. ಕೇರನ್ ಸೆಕ್ಟರ್‌ನ ಜೋಧಾ ಮಕಾನ್-ಬಿರಂಡೋರಿ ಪ್ರದೇಶದ ಬಳಿ ಸುಮಾರು 15 ಡ್ರೋನ್‌ಗಳು ಹಾರುತ್ತಿರುವುದು ಕಂಡುಬಂದಿದ್ದು, ಸೇನಾ ಪಡೆಗಳು ತಕ್ಷಣ ಕ್ರಮ ಕೈಗೊಂಡವು.
ಈ ಘಟನೆಯಲ್ಲಿ ಯಾವುದೇ ಸಾವುನೋವು ಅಥವಾ ಹಾನಿ ಸಂಭವಿಸಿಲ್ಲ. ಈ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ರಕ್ಷಣಾ ಸಚಿವಾಲಯವು ಇಲ್ಲಿಯವರೆಗೆ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.
ಇದನ್ನೂ ಓದಿ: Video: ಜಮ್ಮು-ಕಾಶ್ಮೀರದ ಗಡಿಯಲ್ಲಿ ಐದು ಪಾಕಿಸ್ತಾನಿ ಡ್ರೋನ್‌ಗಳು ಪತ್ತೆ, ಹೈ ಅಲರ್ಟ್
ಭಾರತೀಯ ಸೇನೆಯ 6ನೇ ರಾಷ್ಟ್ರೀಯ ರೈಫಲ್ಸ್‌ನ ಸಿಬ್ಬಂದಿ ವಾಯುಪ್ರದೇಶದಲ್ಲಿ ಡ್ರೋನ್‌ಗಳನ್ನು ಗಮನಿಸಿ ಗುಂಡು ಹಾರಿಸಿದರು ಎಂದು ಮೂಲಗಳು ತಿಳಿಸಿವೆ. ಸೇನೆಯ ಪ್ರತಿಕ್ರಿಯೆಯ ನಂತರ ಎಲ್ಲಾ ಡ್ರೋನ್‌ಗಳು ಹಿಂದೆ ಸರಿದವು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ