ಕರ್ನಾಟಕ ಹಿಜಾಬ್​ ವಿವಾದ: ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಭಾರತದ ಗುಪ್ತಚರ ಸಂಸ್ಥೆಗಳು

ಭಾರತದಲ್ಲಿರುವ ಕೆಲವರು ದೇಶ ವಿರೋಧಿಗಳು ಸಿಖ್​ ಫಾರ್ ಜಸ್ಟೀಸ್​ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುರನ್ನು ಸೇರಿಕೊಂಡು ಇಲ್ಲಿ ಹಿಜಾಬ್​ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಬಹುದು ಎಂದೂ ಗುಪ್ತಚರ ಸಂಸ್ಥೆಗಳು ಹೇಳಿವೆ.

ಕರ್ನಾಟಕ ಹಿಜಾಬ್​ ವಿವಾದ: ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಭಾರತದ ಗುಪ್ತಚರ ಸಂಸ್ಥೆಗಳು
ಹಿಜಾಬ್​ ಧರಿಸಿದ ಯುವತಿಯರು (ಪಿಟಿಐ ಚಿತ್ರ)
Follow us
TV9 Web
| Updated By: Lakshmi Hegde

Updated on:Feb 12, 2022 | 11:48 AM

ಕರ್ನಾಟಕದಲ್ಲಿ ಎದ್ದಿರುವ ಹಿಜಾಬ್​ ವಿವಾದಕ್ಕೆ (Hijab Row) ಪಾಕಿಸ್ತಾನದ ಸಚಿವರಿಬ್ಬರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ರಾಷ್ಟ್ರ ಮಟ್ಟದಲ್ಲೂ ಅನೇಕರು ಈ ಬಗ್ಗೆ ಮಾತನಾಡುತ್ತಿದ್ದಾರೆ. ಹೀಗಿರುವಾಗ ಗುಪ್ತಚರ ಸಂಸ್ಥೆಗಳು ಶಾಕಿಂಗ್​ ಮಾಹಿತಿಯೊಂದನ್ನು ನೀಡಿವೆ. ಭಾರತದ ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್​ ವಿವಾದವನ್ನು ಇನ್ನಷ್ಟು ಹೆಚ್ಚಿಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​ಐ ಪ್ರಯತ್ನ ಮಾಡುತ್ತಿದೆ. ಅದೂ ಕೂಡ ನಿಷೇಧಿತ ಖಲಿಸ್ತಾನಿ ಸಂಘಟನೆಯಾದ ಸಿಖ್​ ಫಾರ್​ ಜಸ್ಟೀಸ್​ ಮೂಲಕ ಜಿಜಾಬ್ ವಿವಾದಕ್ಕೆ ಉತ್ತೇಜನ ನೀಡಲು ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ಮಾಹಿತಿ ನೀಡಿವೆ ಎಂಬುದು ಮೂಲಗಳಿಂದ ತಿಳಿದಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಭಾರತದಲ್ಲಿರುವ ಕೆಲವರು ದೇಶ ವಿರೋಧಿಗಳು ಸಿಖ್​ ಫಾರ್ ಜಸ್ಟೀಸ್​ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುರನ್ನು ಸೇರಿಕೊಂಡು ಇಲ್ಲಿ ಹಿಜಾಬ್​ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಬಹುದು. ಈ ಮೂಲಕ ಇಲ್ಲಿನ ಪರ-ವಿರೋಧ ವಿವಾದವನ್ನು ಇನ್ನಷ್ಟು ಹೆಚ್ಚಿಸಬಹುದು ಎಂದೂ ದೇಶದ ಗುಪ್ತಚರ ಇಲಾಖೆಗಳು ಎಚ್ಚರಿಕೆ ನೀಡಿವೆ. ಭಾರತದ ರಾಜಸ್ಥಾನ, ದೆಹಲಿ, ಉತ್ತರಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಉರ್ದುಸ್ತಾನ್​ ಪರಿಕಲ್ಪನೆಗೆ ಉತ್ತೇಜನ ನೀಡಲು, ಈ ಸಿಖ್ ಫಾರ್ ಜಸ್ಟೀಸ್ ಸಂಘಟನೆ ಹಿಜಾಬ್​ ಜನಾಭಿಪ್ರಾಯ ಚಳವಳಿ ಪ್ರಾರಂಭಿಸಲು ಮುಸ್ಲಿಮರಿಗೆ ಕರೆ ನೀಡಿದೆ ಎಂದೂ ಹೇಳಲಾಗಿದೆ. ಅಷ್ಟೇ ಅಲ್ಲ, ಎಸ್​ಎಫ್​ಜೆ ಮುಖ್ಯಸ್ಥ ಈಗಾಗಲೇ ವಿಡಿಯೋ ಸಂದೇಶದ ಮೂಲಕ ಭಾರತೀಯ ಮುಸ್ಲಿಮರನ್ನು ಪ್ರಚೋದಿಸಿದ್ದಾನೆ ಎಂದೂ ತಿಳಿಸಿಲಾಗಿದೆ.

ಭಾರತದಲ್ಲಿ ಉರ್ದುಸ್ತಾನ್ ರಚಿಸಲು ಎಸ್​ಎಫ್​ಜೆ ಎಲ್ಲ ರೀತಿಯ ಸಹಾಯ ಮಾಡುತ್ತದೆ. ಹಿಜಾಬ್​ ವಿವಾದಕ್ಕೆ ಸಂಬಂಧಪಟ್ಟಂತೆ ಜನಾಭಿಪ್ರಾಯ ಸಂಗ್ರಹಣೆ ಮಾಡಲು, ಜನರನ್ನು ಹೆಚ್ಚೆಚ್ಚು ಸಂಘಟಿಸಲು ಧನಸಹಾಯ ಮಾಡುತ್ತದೆ ಎಂದು ಸಂಘಟನೆಯ ಮುಖ್ಯಸ್ಥರು ಭಾರತದ ಮುಸ್ಲಿಮರಿಗೆ ಅದರಲ್ಲೂ ಈ ಹಿಜಾಬ್​ ಪರ ಹೋರಾಟ ನಡೆಸುತ್ತಿರುವವರಿಗೆ ಭರವಸೆ ನೀಡಿದ್ದಾರೆ. ಹಿಜಾಬ್​ಗೆ ಸಂಬಂಧಪಟ್ಟಂತೆ ಜನಾಭಿಪ್ರಾಯ ಸಂಗ್ರಹಣೆ ಮಾಡಲು ಆನ್​ಲೈನ್​ ನೋಂದಣಿ ವೇದಿಕೆಗಳೂ ಶುರುವಾಗಿದ್ದು, ಅದರ ಸ್ಕ್ರೀನ್​ಶಾಟ್​ ಫೋಟೋಗಳು ಸಿಕ್ಕಿದ್ದಾಗಿಯೂ ಭಾರತೀಯ ಗುಪ್ತಚರ ಇಲಾಖೆಗಳು ಹೇಳಿದ್ದಾಗಿ ರಾಷ್ಟ್ರೀಯ ಮಾಧ್ಯಮ ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ: ಹಿಜಾಬ್ V/S ಕೇಸರಿ ಶಾಲು; ಉಡುಪಿ ಶಾಸಕ ರಘುಪತಿ ಭಟ್​ಗೆ ವಿದೇಶಗಳಿಂದ ಜೀವ ಬೆದರಿಕೆ ಕರೆಗಳು

Published On - 11:41 am, Sat, 12 February 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ