AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉರಿ ಸೆಕ್ಟರ್​​ನಲ್ಲಿ ಒಳನುಸುಳುವಿಕೆ: ಸೇನಾಪಡೆಯಿಂದ ಓರ್ವ ಪಾಕ್ ಉಗ್ರನ ಹತ್ಯೆ, ಮತ್ತೊಬ್ಬ ಸೆರೆ

ನುಸುಳುಕೋರರನ್ನು ಸೈನಿಕರು ತಡೆದಾಗ ಗುಂಡಿನ ಕಾಳಗ ನಡೆದಿದೆ. ಎರಡು ಕಡೆಯವರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಪ್ರಗತಿಯಲ್ಲಿದೆ

ಉರಿ ಸೆಕ್ಟರ್​​ನಲ್ಲಿ ಒಳನುಸುಳುವಿಕೆ: ಸೇನಾಪಡೆಯಿಂದ ಓರ್ವ ಪಾಕ್ ಉಗ್ರನ ಹತ್ಯೆ, ಮತ್ತೊಬ್ಬ ಸೆರೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 28, 2021 | 12:31 PM

Share

ಶ್ರೀನಗರ: ಸೋಮವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿನ (Uri sector) ಗಡಿ ನಿಯಂತ್ರಣ ರೇಖೆಯಲ್ಲಿ (Line of Control) ಸೇನೆಯು ನುಸುಳುವ ಪ್ರಯತ್ನವನ್ನು ವಿಫಲಗೊಳಿಸುವ ವೇಳೆ ಮೂವರು ಸೈನಿಕರು ಗಾಯಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಉಗ್ರನನ್ನು ಸೇನಾಪಡೆ ಹತ್ಯೆ ಮಾಡಿದ್ದು ಇನ್ನೊಬ್ಬನನ್ನು ಸೆರೆಹಿಡಿಯಲಾಗಿದೆ ಎಂದು ವರದಿಯಾಗಿದೆ. ಅನುಮಾನಾಸ್ಪದ ಚಲನೆಯನ್ನು ಗಮನಿಸಿದ ನಂತರ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನೆಯು ಒಳನುಸುಳುವಿಕೆ ನಿಗ್ರಹ ಕಾರ್ಯಾಚರಣೆಯನ್ನು ಶನಿವಾರ ಆರಂಭಿಸಿತ್ತು ಎಂದು ಸೇನೆಯ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ. ನುಸುಳುಕೋರರನ್ನು ಸೈನಿಕರು ತಡೆದಾಗ ಗುಂಡಿನ ಕಾಳಗ ನಡೆದಿದೆ. ಎರಡು ಕಡೆಯವರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಒಂದು ವಾರದಲ್ಲಿ ಉರಿ ವಲಯದ ನಿಯಂತ್ರಣ ರೇಖೆಯಲ್ಲಿ ಸೇನೆಯು ವಿಫಲಗೊಳಿಸಿದ ಮೂರನೇ ಒಳನುಸುಳುವಿಕೆ ಪ್ರಯತ್ನ ಇದು.

ಉತ್ತರ ಕಾಶ್ಮೀರದ ಉರಿ ವಲಯದ ಜನರಲ್ ಅಧಿಕಾರಿಯಾದ 15 ಕಾರ್ಪ್ಸ್, ಲೆಫ್ಟಿನೆಂಟ್ ಜನರಲ್ ಡಿಪಿ ಪಾಂಡೆ, ಎಲ್‌ಒಸಿಯಾದ್ಯಂತ ನಡೆದ ಈ ಪ್ರಯತ್ನಗಳನ್ನು “ಸ್ವಲ್ಪ ಕಿಡಿಗೇಡಿತನ” ಎಂದು ಕರೆದರು.

ಕಳೆದ ವಾರ ಉರಿಯಲ್ಲಿನ ನಿಯಂತ್ರಣ ರೇಖೆಯಲ್ಲಿರುವ ಹತ್ಲಾಂಗ ಗ್ರಾಮದಲ್ಲಿ ಸೇನೆಯು ಮೂವರು ನುಸುಳುಕೋರರನ್ನು ಹತ್ಯೆ ಮಾಡಿದೆ. ಐವರು ನುಸುಳುಕೋರರು ಒಳನುಸುಳಲು ಯತ್ನಿಸಿದ್ದು, ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು 69 ಗ್ರೆನೇಡ್ ಸೇರಿದಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆ ಹೇಳಿದೆ.

ಇದಕ್ಕೂ ಮುನ್ನ ಸೈನಿಕರು ಒಳನುಗ್ಗುವವರನ್ನು ಗುರುತಿಸಿದ ನಂತರ ಅದೇ ವಲಯದ ಗವ್ಹಾಲೋನ್ ಗ್ರಾಮದಲ್ಲಿ ಸೇನೆ ನುಸುಳುಕೋರರೊಂದಿಗೆ ಗುಂಡಿನ ದಾಳಿ ನಡೆಸಿತು.

ಉರಿಯಲ್ಲಿನ ಬೋನಿಯಾರ್‌ನಲ್ಲಿ ನಡೆದ ಸಮಾರಂಭದಲ್ಲಿ ಲೆಫ್ಟಿನೆಂಟ್ ಜನರಲ್ ಪಾಂಡೆ ಸುದ್ದಿಗಾರರಿಗೆ ಈ ಒಳನುಸುಳುವಿಕೆ ಪ್ರಯತ್ನಗಳಿಂದ ಅಥವಾ ನಮ್ಮ ಸೈನ್ಯವು ಎಚ್ಚರವಾಗಿರುವುದರಿಂದ ಮತ್ತು ಅಂತಹ ಸನ್ನಿವೇಶಗಳನ್ನು ಎದುರಿಸಲು ಸನ್ನದ್ಧವಾಗಿರುವುದರಿಂದ ಜನರು ಆತಂಕಪಡಬೇಡಿ ಎಂದು ಹೇಳಿದರು.

ಇದನ್ನೂ ಓದಿ:  ಸಿಎಂ ಆಗಿ ಕಾರ್ಯ ನಿರ್ವಹಿಸಿದ ಏಕೈಕ ಪ್ರಧಾನಿ ನರೇಂದ್ರ ಮೋದಿ ಎಂದ ಸುಶೀಲ್ ಮೋದಿ: ತಪ್ಪು ಸರಿಪಡಿಸಿ ಇತಿಹಾಸದ ಪಾಠ ಹೇಳಿದ ನೆಟ್ಟಿಗರು

ಇದನ್ನೂ ಓದಿ:  ಕಾಂಗ್ರೆಸ್ ಸೇರಲಿದ್ದಾರೆ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ; ದೆಹಲಿ ಕಾಂಗ್ರೆಸ್ ಕಚೇರಿ ಮುಂದೆ ಸ್ವಾಗತ ಫಲಕ

(Pakistani militant killed and another was captured as army foils infiltration bid in Jammu and Kashmir’s Uri sector)

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ