AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗೇಪಲ್ಲಿಯಲ್ಲಿ ಅಕ್ರಮವಾಗಿ ನೆಲಸಿದ್ದ ಪಾಕಿಸ್ತಾನೀ ನಾಗರಿಕರು; ಒಬ್ಬ ಮಹಿಳೆ ಸೇರಿ ಇಬ್ಬರ ಬಂಧನ

Karnataka Police arrest 2 Pakistani nationals living illegally in Chikkaballapura district: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಅಕ್ರಮವಾಗಿ ನೆಲಸಿದ್ದ ಇಬ್ಬರು ಪಾಕಿಸ್ತಾನೀ ನಾಗರಿಕರನ್ನು ಪೊಲೀಸರು ಬಂಧಿಸಿದ್ದಾರೆ. ಭಾರತೀಯ ಪೌರತ್ವ ಪಡೆಯದೆಯೇ ವೋಟರ್ ಐಡಿ, ರೇಷನ್ ಕಾರ್ಡ್ ಸವಲತ್ತು ಪಡೆದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಬಾಗೇಪಲ್ಲಿ ನಿವಾಸಿಯೊಬ್ಬರನ್ನು ವಿವಾಹವಾಗಿದ್ದ ಪಾಕಿಸ್ತಾನದ ಮಹಿಳೆ ಹಾಗು ಆಕೆಯ ಮಗ ಆ ಇಬ್ಬರು ಬಂಧಿತರು.

ಬಾಗೇಪಲ್ಲಿಯಲ್ಲಿ ಅಕ್ರಮವಾಗಿ ನೆಲಸಿದ್ದ ಪಾಕಿಸ್ತಾನೀ ನಾಗರಿಕರು; ಒಬ್ಬ ಮಹಿಳೆ ಸೇರಿ ಇಬ್ಬರ ಬಂಧನ
ಭಾರತ, ಪಾಕಿಸ್ತಾನದ ಬಾವುಟಗಳುImage Credit source: Tuomas A. Lehtinen/Moment/Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 12, 2026 | 6:31 PM

Share

ಚಿಕ್ಕಬಳ್ಳಾಪುರ, ಜುಲೈ 12: ಬಾಗೇಪಲ್ಲಿ ತಾಲೂಕಿನಲ್ಲಿ ಕಾನೂನುಬಾಹಿರವಾಗಿ ವಾಸಿಸುತ್ತಿದ್ದ ಹಾಗೂ ಭಾರತೀಯ ಗುರುತಿನ ಚೀಟಿಗಳನ್ನು ಹೊಂದಿದ್ದ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಾಕಿಸ್ತಾನ ಮೂಲದ ಮಹಿಳೆ ಫರ್ಹಾನಾಜ್ ಮತ್ತು ಆಕೆಯ ಮಗ ಮೊಹಮ್ಮದ್ ಫರ್ದಿನ್ ಖಾನ್ ಎಂದು ಗುರುತಿಸಲಾಗಿದೆ. ಇವರು ಬಾಗೇಪಲ್ಲಿಯ ಸ್ಥಳೀಯ ನಿವಾಸಿ ಅಯೂಬ್ ಖಾನ್ ಎಂಬಾತನನ್ನು ವಿವಾಹವಾಗಿದ್ದರು. ಅಯೂಬ್ ಖಾನ್ ಪ್ರಸ್ತುತ ಗಲ್ಫ್ (ಅರಬ್) ದೇಶವೊಂದರಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ಈ ದಂಪತಿಗೆ ನಾಲ್ಕು ಮಕ್ಕಳಿದ್ದು, ಅವರಲ್ಲಿ ಮೂವರು ಮಕ್ಕಳು ಮತ್ತು ಅಯೂಬ್ ಖಾನ್ ಭಾರತೀಯ ನಾಗರಿಕರಾಗಿದ್ದಾರೆ. ಆದರೆ ಫರ್ಹಾನಾಜ್ ಮತ್ತು ಆಕೆಯ ಒಬ್ಬ ಮಗ ಪಾಕಿಸ್ತಾನಿ ಪ್ರಜೆಗಳಾಗಿದ್ದಾರೆ.

ತಾಯಿ ಮತ್ತು ಮಗನ ಬಂಧನಕ್ಕೆ ಕಾರಣವೇನು?

ಫರ್ಹಾನಾಜ್ (Farhanaz) ಮತ್ತು ಮೊಹಮ್ಮದ್ ಫರ್ದೀನ್ ಖಾನ್ (Mohammed Fardeen  Khan), ಈ ಇಬ್ಬರೂ ಪಾಕಿಸ್ತಾನಿ ಪ್ರಜೆಗಳು ತಮ್ಮ ವೀಸಾ ಅವಧಿ ಮುಗಿದಿದ್ದರೂ ಭಾರತದಲ್ಲೇ ಅಕ್ರಮವಾಗಿ ನೆಲೆಸಿದ್ದರು. ಅದಕ್ಕಿಂತ ಮುಖ್ಯವಾಗಿ, ತಾವು ಪಾಕಿಸ್ತಾನಿ ಪ್ರಜೆಗಳು ಎಂಬ ನೈಜ ಸಂಗತಿಯನ್ನು ಮರೆಮಾಚಿ ಭಾರತದ ಮತದಾರರ ಗುರುತಿನ ಚೀಟಿ (Voter ID) ಮತ್ತು ರೇಷನ್ ಕಾರ್ಡ್ (Ration Card) ನಂತಹ ಅಧಿಕೃತ ದಾಖಲೆಗಳನ್ನು ಪಡೆದುಕೊಂಡಿದ್ದರು. ಈ ರೀತಿ ಅಕ್ರಮವಾಗಿ ನಾಗರಿಕ ದಾಖಲೆಗಳನ್ನು ಪಡೆದಿರುವ ಆರೋಪದ ಮೇಲೆ ಪೊಲೀಸರು ಈ ಇಬ್ಬರನ್ನು ಬಂಧಿಸಿದ್ದಾರೆ. ನಾಗರಿಕ ದಾಖಲೆಗಳನ್ನು ಪಡೆಯುವ ಮೊದಲು ಪೌರತ್ವ ಪಡೆಯುವುದು ಕಾನೂನಿನಲ್ಲಿರುವ ನಿಯಮ.

ಇದನ್ನೂ ಓದಿ: ರಾಮ ಮಂದಿರ ದೇಣಿಗೆ ಹಗರಣ:ಬೆಳಗ್ಗೆ ಫೋನ್ ಕಾಲ್, ಮಧ್ಯಾಹ್ನ ಕೋಟಿ ಕಳ್ಳತನ, ಏನೇನೆಲ್ಲಾ ನಡೀತು?

ತಹಸೀಲ್ದಾರ್ ದೂರಿನ ಮೇರೆಗೆ ಪೊಲೀಸರ ಕ್ರಮ

ಬಾಗೇಪಲ್ಲಿ ತಹಶೀಲ್ದಾರ್ ಮನಿಷಾ ಎನ್. ಪತ್ರಿ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಜಿಲ್ಲಾಧಿಕಾರಿಗಳು ತಕ್ಷಣವೇ ಜಾರಿಗೆ ಬರುವಂತೆ ಅವರ ಅಕ್ರಮ ರೇಷನ್ ಕಾರ್ಡ್ ಅನ್ನು ರದ್ದುಗೊಳಿಸಿದ್ದಾರೆ. ಸಂಬಂಧಪಟ್ಟ ಚುನಾವಣಾ ಅಧಿಕಾರಿಯು ಅವರ ವೋಟರ್ ಐಡಿಯನ್ನು ಕೂಡ ರದ್ದುಗೊಳಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕುಶಾಲ್ ಚೌಕ್ಸೆ ಅವರ ಮಾರ್ಗದರ್ಶನದಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS), ವಿದೇಶಿಯರ ಕಾಯ್ದೆ (Foreigners Act) ಮತ್ತು ಜನಪ್ರತಿನಿಧಿ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಬಂಧಿಸಲಾಗಿದೆ.

ಇದನ್ನೂ ಓದಿ: ರೈಲ್ವೆ ಟಿಕೆಟ್ ನಿಯಮಗಳ ಪರಿಷ್ಕರಣೆ; ಟಿಕೆಟ್​ನ ವಾಟ್ಸಾಪ್ ಸ್ಕ್ರೀನ್​ಶಾಟ್, ಫೋಟೋ, ಪಿಡಿಎಫ್ ಕಾಪಿಗಳು ಮಾನ್ಯವಾ?

ಈ ಪಾಕಿಸ್ತಾನಿ ಪ್ರಜೆಗಳಿಗೆ ಭಾರತೀಯ ಗುರುತಿನ ಚೀಟಿಗಳನ್ನು ನೀಡಲು ಯಾರು ಸಹಾಯ ಮಾಡಿದರು ಮತ್ತು ಇವರು ಯಾವ ವ್ಯವಸ್ಥೆಯ ಮೂಲಕ ಈ ದಾಖಲೆಗಳನ್ನು ಪಡೆದುಕೊಂಡರು ಎಂಬ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ