AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಹಾರಾಷ್ಟ್ರದಲ್ಲಿ ಬುಲೆಟ್ ಪ್ರೂಫ್ ಜಾಕೆಟ್ ಧರಿಸಿ ಆಭರಣದಂಗಡಿ ದರೋಡೆ

ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಬುಲೆಟ್‌ಪ್ರೂಫ್ ಜಾಕೆಟ್ ಧರಿಸಿದ ದರೋಡೆಕೋರರು ಲಕ್ಷ್ಮಿ ಜ್ಯುವೆಲ್ಲರ್ಸ್ ಮಳಿಗೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಬಂದೂಕು ಪ್ರದರ್ಶಿಸಿ, ಗಾಳಿಯಲ್ಲಿ ಗುಂಡು ಹಾರಿಸಿ ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸಿ ಪರಾರಿಯಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದು, ವರ್ತಕರಲ್ಲಿ ಆತಂಕ ಮನೆಮಾಡಿದೆ. ಈ ಘಟನೆಯು ಅಪರಾಧದ ಗಂಭೀರತೆಯನ್ನು ತೋರಿಸುತ್ತದೆ.

Video: ಮಹಾರಾಷ್ಟ್ರದಲ್ಲಿ ಬುಲೆಟ್ ಪ್ರೂಫ್ ಜಾಕೆಟ್ ಧರಿಸಿ ಆಭರಣದಂಗಡಿ ದರೋಡೆ
ದರೋಡೆ
ನಯನಾ ರಾಜೀವ್
|

Updated on:Jul 21, 2026 | 7:22 AM

Share

ಮುಂಬೈ, ಜುಲೈ 21: ಮಹಾರಾಷ್ಟ್ರದ ಪಾಲ್ಗರ್​​ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೂವರು ಬಂದೂಕುಧಾರಿಗಳು ಬುಲೆಟ್​ಪ್ರೂಫ್ ಜಾಕೆಟ್ ಧರಿಸಿ ಬಂದು ಆಭರಣದಂಗಡಿ ದರೋಡೆ(Robbery) ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆಭರಣ ಮಳಿಗೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ದರೋಡೆಕೋರರು ಗುಂಡು ನಿರೋಧಕ ಜಾಕೆಟ್‌ಗಳನ್ನು ಧರಿಸಿಕೊಂಡು, ಸಾರ್ವಜನಿಕರ ಮುಂಭಾಗದಲ್ಲೇ ಬಂದೂಕುಗಳನ್ನು ಝಳಪಿಸುತ್ತಾ ಸಿನಿಮೀಯ ರೀತಿಯಲ್ಲಿ ದರೋಡೆ ನಡೆಸಿದ್ದಾರೆ.

ಬಂದೂಕು ತೋರಿಸಿ ಪ್ಲಾಸ್ಟಿಕ್ ಚೀಲಕ್ಕೆ ಚಿನ್ನ ತುಂಬಿಕೊಂಡ ಕಳ್ಳರು ಸೋಮವಾರ ಸಂಜೆ 4.30 ರ ಸುಮಾರಿಗೆ ಪಾಲ್ಘರ್​ನಲ್ಲಿರುವ ‘ಲಕ್ಷ್ಮಿ ಜ್ಯುವೆಲ್ಲರ್ಸ್’ ಮಳಿಗೆಯಲ್ಲಿ ಈ ದರೋಡೆ ನಡೆದಿದೆ. ಬೈಕ್‌ನಲ್ಲಿ ಬಂದ ಮೂವರು ಮುಸುಕುಧಾರಿಗಳು, ದೇಶೀಯ ನಿರ್ಮಿತ ಪಿಸ್ತೂಲ್‌ಗಳು ಮತ್ತು ಶಾರ್ಟ್‌ಗನ್‌ಗಳೊಂದಿಗೆ ಅಂಗಡಿಯೊಳಗೆ ನುಗ್ಗಿದ್ದಾರೆ.

ಅಲ್ಲಿದ್ದ ಸಿಬ್ಬಂದಿ ಮತ್ತು ಮಾಲೀಕರಿಗೆ ಗನ್ ತೋರಿಸಿ ಹೆದರಿಸಿದ ದರೋಡೆಕೋರರು, ಕೌಂಟರ್‌ನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಪ್ಲಾಸ್ಟಿಕ್ ಚೀಲಗಳಿಗೆ ತುಂಬಿಕೊಂಡಿದ್ದಾರೆ.

ವಿಡಿಯೋ:

ಗಾಳಿಯಲ್ಲಿ ಫೈರಿಂಗ್: ಸಾರ್ವಜನಿಕರಲ್ಲಿ ಭೀತಿ ಘಟನೆಯ ವೇಳೆ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ದರೋಡೆಕೋರರು ಲೂಟಿ ಮಾಡಿದ ಚೀಲಗಳೊಂದಿಗೆ ಧೈರ್ಯವಾಗಿ ಹೊರಗೆ ನಡೆದುಕೊಂಡು ಬಂದಿದ್ದಾರೆ. ಯಾರೂ ತಮ್ಮನ್ನು ಬೆನ್ನಟ್ಟಬಾರದು ಮತ್ತು ಮಧ್ಯಪ್ರವೇಶಿಸಬಾರದು ಎಂಬ ಕಾರಣಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿ ಭೀತಿ ಸೃಷ್ಟಿಸಿದ್ದಾರೆ. ನಂತರ ಸಿದ್ಧವಾಗಿಟ್ಟುಕೊಂಡಿದ್ದ ಬೈಕ್ ಏರಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಮತ್ತಷ್ಟು ಓದಿ: ಬಸ್​​​ನಲ್ಲಿ 90 ಲಕ್ಷಕ್ಕೂ ಅಧಿಕ ಮೌಲ್ಯದ, ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ: ಊಟಕ್ಕೆ ನಿಲ್ಲಿಸಿದಾಗ ಕೃತ್ಯ

ಘಟನೆ ನಡೆದ ತಕ್ಷಣ ಪೊಲೀಸರು ದರೋಡೆಕೋರರನ್ನು ಬೆನ್ನಟ್ಟಲು ಯತ್ನಿಸಿದರಾದರೂ, ಅವರು ವೇಗವಾಗಿ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ಸ್ಥಳೀಯ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈ ಘಟನೆಯು ಪಾಲ್ಘರ್ ವರ್ತಕರಲ್ಲಿ ತೀವ್ರ ಆತಂಕ ಮೂಡಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:22 am, Tue, 21 July 26

Follow Us
ಲಿಫ್ಟ್​ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ?
ಲಿಫ್ಟ್​ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ?
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ