AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದ ಪಲ್ನಾಡು ಬಳಿ ಭೀಕರ ರಸ್ತೆ ಅಪಘಾತ: ಆಟೋಗೆ ಡಿಕ್ಕಿ ಹೊಡೆದ ಖಾಸಗಿ ಬಸ್ , 7 ಮಂದಿ ದಾರುಣ ಸಾವು

ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಚಿಲಕಲೂರಿಪೇಟೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ನಾಲ್ವರು ಮಕ್ಕಳು ಸೇರಿದಂತೆ ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರಿದ್ದು, ಬಸ್ ಅತಿಯಾದ ವೇಗದಲ್ಲಿ ಬಂದಿದ್ದೇ ಈ ದುರಂತಕ್ಕೆ ಮುಖ್ಯ ಕಾರಣ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸರಣಿ ಅಪಘಾತಗಳು ಹೆಚ್ಚುತ್ತಿರುವುದು ಪ್ರಯಾಣಿಕರ ಸುರಕ್ಷತೆ ಬಗ್ಗೆ ಗಂಭೀರ ಕಳವಳ ಮೂಡಿಸಿದೆ.

ಆಂಧ್ರಪ್ರದೇಶದ ಪಲ್ನಾಡು ಬಳಿ ಭೀಕರ ರಸ್ತೆ ಅಪಘಾತ: ಆಟೋಗೆ ಡಿಕ್ಕಿ ಹೊಡೆದ ಖಾಸಗಿ ಬಸ್ , 7 ಮಂದಿ ದಾರುಣ ಸಾವು
ಅಪಘಾತ
ನಯನಾ ರಾಜೀವ್
|

Updated on: Aug 27, 2026 | 7:39 AM

Share

ಪಲ್ನಾಡು, ಆಗಸ್ಟ್​ 27: ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಚಿಲಕಲೂರಿಪೇಟೆ ಅಡ್ಡರೋಡ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತ(Road Accident)ದಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಖಾಸಗಿ ಟ್ರಾವೆಲ್ಸ್ ಬಸ್ ಹಾಗೂ ಆಟೋರಿಕ್ಷಾ ಮುಖಾಮುಖಿ ಡಿಕ್ಕಿಯಾಗಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಮಕ್ಕಳು ಸೇರಿದಂತೆ ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ವೇಲೂರು ಗ್ರಾಮದ ನಿವಾಸಿಗಳಾದ ಬೊಂತಾ ಮಂಗಮ್ಮ, ಬೊಂತಾ ಗಂಗಮ್ಮ, ಬೊಂತಾ ಸಂಪೂರ್ಣಮ್ಮ, ಬೊಂತಾ ಮರಿಯಮ್ಮ, ಲಕ್ಷ್ಮಮ್ಮ, ಸುವಾರ್ತಾ ಮತ್ತು ಬೊಂತಾ ಬಾಬುರಾವ್ ಎಂದು ಗುರುತಿಸಲಾಗಿದೆ. ಬಾಪಟ್ಲ ಜಿಲ್ಲೆಯ ಕೊಂಡಮಂಜುಲೂರಿನಲ್ಲಿ ಕುಟುಂಬದ ಸದಸ್ಯರೊಬ್ಬರ ಹುಟ್ಟುಹಬ್ಬ ಆಚರಣೆ ಮುಗಿಸಿಕೊಂಡು ನಾಲ್ವರು ಮಕ್ಕಳು ಸೇರಿದಂತೆ ಒಟ್ಟು 15 ಮಂದಿ ಒಂದೇ ಆಟೋದಲ್ಲಿ ತಮ್ಮ ಸ್ವಗ್ರಾಮ ವೇಲೂರಿಗೆ ವಾಪಸಾಗುತ್ತಿದ್ದರು.

ವಿಜಯವಾಡದಿಂದ ತಿರುಪತಿಗೆ ಅತಿವೇಗವಾಗಿ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಆಟೋಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಆಟೋ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ತಕ್ಷಣವೇ ಚಿಲಕಲೂರಿಪೇಟೆ ಹಾಗೂ ಗುಂಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತಷ್ಟು ಓದಿ: Madhya Pradesh Accident: ಗ್ವಾಲಿಯರ್‌ನಲ್ಲಿ ಭೀಕರ ಅಪಘಾತ, ಕಾರ್ಮಿಕರಿದ್ದ ವಾಹನಕ್ಕೆ ಟ್ರಕ್ ಡಿಕ್ಕಿಯಾಗಿ 8 ಮಂದಿ ಸಾವು

ತೆಲಂಗಾಣದ ಸೂರ್ಯಪೇಟೆಯಲ್ಲಿ ಖಾಸಗಿ ಬಸ್ ಕಂಟೇನರ್‌ಗೆ ಡಿಕ್ಕಿಯಾಗಿ ಐವರು ಮೃತಪಟ್ಟ ಬೆನ್ನಲ್ಲೇ ಈ ಘಟನೆ ಸಂಭವಿಸಿದ್ದು, ತೆಲುಗು ರಾಜ್ಯಗಳ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸರಣಿ ಅಪಘಾತಗಳು ಆತಂಕ ಸೃಷ್ಟಿಸಿವೆ. ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಆಟೋಗಳಲ್ಲಿ ತುಂಬುವುದು ಮತ್ತು ಹೆದ್ದಾರಿಗಳಲ್ಲಿ ಖಾಸಗಿ ಬಸ್‌ಗಳ ಅತಿಯಾದ ವೇಗ, ಅಜಾಗರೂಕ ಓವರ್‌ಟೇಕಿಂಗ್ ನಿಯಂತ್ರಿಸಲು ಕಟ್ಟುನಿಟ್ಟಿನ ಪೊಲೀಸ್ ಪೆಟ್ರೋಲಿಂಗ್ ಜಾರಿಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ