AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನ್ ಮಸಾಲಾ ಪ್ಯಾಕೆಟ್‌ ಮೇಲೆ ಚಿಲ್ಲರೆ ಮಾರಾಟ ಬೆಲೆ ನಮೂದಿಸುವುದು ಕಡ್ಡಾಯ

ಪಾನ್ ಮಸಾಲಾ ಪ್ಯಾಕೆಟ್‌ಗಳ ಮೇಲೆ ಚಿಲ್ಲರೆ ಮಾರಾಟ ಬೆಲೆಯನ್ನು ನಮೂದಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ಇನ್ಮುಂದೆ ಪಾನ್ ಮಸಾಲಾ ಪ್ಯಾಕ್‌ಗಳ ಮೇಲೆ RSP ಹಾಕುವುದು ಕಡ್ಡಾಯವಾಗಿದೆ. ಕಡ್ಡಾಯವಾಗಿ ಚಿಲ್ಲರೆ ಮಾರಾಟ ಬೆಲೆ ಹಾಕುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 2026ರ ಫೆಬ್ರವರಿ 1ರಿಂದ ಕೇಂದ್ರ ಸರ್ಕಾರದ ಹೊಸ ಆದೇಶ ಅನ್ವಯವಾಗಲಿದೆ. ಗ್ರಾಹಕರಿಗೆ ಪಾರದರ್ಶಕತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಎಲ್ಲಾ ಗಾತ್ರದ ಪಾನ್ ಮಸಾಲಾ ಪ್ಯಾಕ್‌ ಮೇಲೂ ಚಿಲ್ಲರೆ ಮಾರಾಟ ಬೆಲೆ ಹಾಕುವುದು ಕಡ್ಡಾಯವಾಗಿದೆ. ಕಾನೂನು ಮಾಪನಶಾಸ್ತ್ರ ತಿದ್ದುಪಡಿ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಪಾನ್ ಮಸಾಲಾ ಪ್ಯಾಕೆಟ್‌ ಮೇಲೆ ಚಿಲ್ಲರೆ ಮಾರಾಟ ಬೆಲೆ ನಮೂದಿಸುವುದು ಕಡ್ಡಾಯ
Pan Masala
ಸುಷ್ಮಾ ಚಕ್ರೆ
|

Updated on: Dec 03, 2025 | 8:59 PM

Share

ನವದೆಹಲಿ, ಡಿಸೆಂಬರ್ 3: ಇನ್ನುಮುಂದೆ ಪಾನ್ ಮಸಾಲಾ (Pan Masala) ಪ್ಯಾಕೆಟ್​​ಗಳ ಮೇಲೆ ಚಿಲ್ಲರೆ ಬೆಲೆಯನ್ನು ನಮೂದಿಸುವುದು ಕಡ್ಡಾಯವಾಗಿದೆ. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಅಡಿಯಲ್ಲಿರುವ ಗ್ರಾಹಕ ವ್ಯವಹಾರಗಳ ಇಲಾಖೆಯು ಫೆಬ್ರವರಿ 1, 2026ರಿಂದ ಜಾರಿಗೆ ಬರುವಂತೆ ಎಲ್ಲಾ ಪಾನ್ ಮಸಾಲಾ ಪ್ಯಾಕ್‌ಗಳಲ್ಲಿ ಚಿಲ್ಲರೆ ಮಾರಾಟ ಬೆಲೆಯನ್ನು ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಿದೆ.

ತಿದ್ದುಪಡಿ ಮಾಡಿದ ನಿಯಮಗಳು ಫೆಬ್ರವರಿ 1, 2026ರಿಂದ ಜಾರಿಗೆ ಬರಲಿದ್ದು, ಆ ದಿನಾಂಕದಿಂದ ಎಲ್ಲಾ ಪಾನ್ ಮಸಾಲಾ ತಯಾರಕರು, ಪ್ಯಾಕರ್‌ಗಳು ಮತ್ತು ಆಮದುದಾರರು ಈ ನಿಯಮವನ್ನು ಪಾಲಿಸಲೇಬೇಕು. ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ಕಾರ್ಯದರ್ಶಿ ಅನುಪಮ್ ಮಿಶ್ರಾ ಅವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ನಕಲಿ ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆ; ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕಳವಳ

ಸಚಿವಾಲಯದ ಪ್ರಕಾರ, ಹಿಂದೆ ವಿನಾಯಿತಿ ಪಡೆದಿದ್ದ 10 ಗ್ರಾಂ ಅಥವಾ ಅದಕ್ಕಿಂತ ಕಡಿಮೆ ತೂಕದ ಸಣ್ಣ ಪಾನ್ ಮಸಾಲಾ ಪ್ಯಾಕ್‌ಗಳು ಕೂಡ ಈಗ ತಮ್ಮ ಲೇಬಲ್‌ಗಳಲ್ಲಿ ಚಿಲ್ಲರೆ ಮಾರಾಟ ಬೆಲೆಯನ್ನು ಮುದ್ರಿಸಬೇಕು. ಸಚಿವಾಲಯದ ಪ್ರಕಾರ, ಎಲ್ಲಾ ಪ್ಯಾಕೇಜ್‌ಗಳ ಮೇಲೆ ಚಿಲ್ಲರೆ ಮಾರಾಟ ಬೆಲೆಯನ್ನು ಕಡ್ಡಾಯಗೊಳಿಸುವ ಮೂಲಕ, ಈ ತಿದ್ದುಪಡಿಯು ಪಾನ್ ಮಸಾಲಾದ ಮೇಲೆ ಚಿಲ್ಲರೆ ಮಾರಾಟ ಬೆಲೆ ಆಧಾರಿತ ಜಿಎಸ್‌ಟಿ ತೆರಿಗೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುಕೂಲವಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್