AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಜವಾಹರಲಾಲ್ ನೆಹರು ಸ್ಟೇಡಿಯಂ ಬಳಿ ಕುಸಿದ ಪೆಂಡಾಲ್; 8 ಮಂದಿಗೆ ಗಾಯ

ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಹುಲ್ಲುಹಾಸಿನ ಬಳಿ ನಡೆಯುತ್ತಿರುವ ನಿರ್ಮಾಣ ಕಾರ್ಯದ ವೇಳೆ  ಪೆಂಡಾಲ್ ಕುಸಿದು 8 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ದೆಹಲಿ ಅಗ್ನಿಶಾಮಕ ದಳದ ಹಲವಾರು ವಾಹನಗಳು ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳದಲ್ಲಿವೆ.

ದೆಹಲಿಯ ಜವಾಹರಲಾಲ್ ನೆಹರು ಸ್ಟೇಡಿಯಂ ಬಳಿ ಕುಸಿದ ಪೆಂಡಾಲ್; 8 ಮಂದಿಗೆ ಗಾಯ
ಕುಸಿದ ಪೆಂಡಾಲ್
ರಶ್ಮಿ ಕಲ್ಲಕಟ್ಟ
|

Updated on:Feb 17, 2024 | 12:44 PM

Share

ದೆಹಲಿ ಫೆಬ್ರುವರಿ 17: ಶನಿವಾರ ಮಧ್ಯಾಹ್ನದ ಹೊತ್ತಿಗೆ ದೆಹಲಿಯ (Delhi) ಜವಾಹರಲಾಲ್ ನೆಹರು ಕ್ರೀಡಾಂಗಣ (Jawaharlal Nehru Stadium)ಬಳಿ ಪೆಂಡಾಲ್ (Pandal collapse) ಕುಸಿದು 8 ಮಂದಿಗೆ ಗಾಯಗಳಾಗಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸ್ಟೇಡಿಯಂನ ಗೇಟ್ ನಂ. 2ರಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ದೆಹಲಿ ಅಗ್ನಿಶಾಮಕ ದಳದ ಹಲವಾರು ವಾಹನಗಳು ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳದಲ್ಲಿವೆ. ಹುಲ್ಲುಹಾಸಿನ ಬಳಿ ನಡೆಯುತ್ತಿರುವ ನಿರ್ಮಾಣ ಕಾರ್ಯದ ವೇಳೆ ಈ ಘಟನೆ ನಡೆದಿದೆ. ಕನಿಷ್ಠ ಎಂಟು ಮಂದಿ ಗಾಯಗೊಂಡಿದ್ದಾರೆ. ಅವರನ್ನೆಲ್ ಚಿಕಿತ್ಸೆಗಾಗಿ ಸಫ್ದರ್‌ಜಂಗ್ ಮತ್ತು ಏಮ್ಸ್‌ಗೆ ದಾಖಲಿಸಲಾಗಿದೆ. ಹಲವು ಮಂದಿ ಸಿಲುಕಿರುವ ಶಂಕೆ ಇದ್ದು, ಶೋಧ ನಡೆಸಲಾಗುತ್ತಿದೆ. ಪೆಂಡಾಲ್ ಅವಶೇಷಗಳನ್ನು ತೆಗೆಯಲು ಕ್ರೇನ್ ಕೂಡ ಸ್ಥಳದಲ್ಲಿದೆ

ಅಪಘಾತವನ್ನು ಖಚಿತಪಡಿಸಿರುವ ದಕ್ಷಿಣ ದೆಹಲಿ ಡಿಸಿಪಿ, ಜವಾಹರಲಾಲ್ ನೆಹರು ಕ್ರೀಡಾಂಗಣದ ಗೇಟ್ ನಂ. 2 ಬಳಿ ಹುಲ್ಲುಹಾಸಿನಲ್ಲಿ ಕೆಲಸ ನಡೆಯುತ್ತಿದ್ದು, ಅದರ ಒಂದು ಭಾಗವು ಶನಿವಾರ ಮಧ್ಯಾಹ್ನ ಕುಸಿದಿದೆ ಎಂದು ಹೇಳಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿವೆ. ಅಪಘಾತದಲ್ಲಿ 8 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ, ಘಟನಾ ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.

ಘಟನಾ ಸ್ಥಳದ ವಿಡಿಯೊ

ದೆಹಲಿ ಅಗ್ನಿಶಾಮಕ ಇಲಾಖೆಯು ಜೆಎಲ್‌ಎನ್ ಸ್ಟೇಡಿಯಂನಲ್ಲಿ ಪೆಂಡಾಲ್ ಕುಸಿದಿರುವ ಬಗ್ಗೆ ದೂರವಾಣಿ ಮೂಲಕ ಮಾಹಿತಿ ಪಡೆದಿದೆ ಎಂದು ಹೇಳಿಕೆ ನೀಡಿದೆ. ಘಟನೆ ನಡೆದ ಸ್ಥಳದಿಂದ ಇಬ್ಬರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಕೂಲಿ ಕಾರ್ಮಿಕರು ಊಟ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ಜವಾಹರಲಾಲ್ ನೆಹರು ಕ್ರೀಡಾಂಗಣದ ಭದ್ರತಾ ಸಿಬ್ಬಂದಿಯೊಬ್ಬರು ತಿಳಿಸಿದರು.

ಇದನ್ನೂ ಓದಿ: ಇಂದಿನಿಂದ ದೆಹಲಿಯಲ್ಲಿ ಬಿಜೆಪಿ ಬೃಹತ್ ರಾಷ್ಟ್ರೀಯ ಸಮಾವೇಶ: ಲೋಕಸಭೆ ಚುನಾವಣೆಗೆ ಭರ್ಜರಿ ತಾಲೀಮು

ಗೇಟ್ ನಂ.2 ರ ಜವಾಹರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ ಮದುವೆಗೆ ತಯಾರಿ ನಡೆಸುತ್ತಿದ್ದ ಒಂದು ಪೆಂಡಾಲ್ ಬಿದ್ದಿದೆ. ಸುಮಾರು 10-12 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅವರನ್ನು ಹೊರತೆಗೆದು ಚಿಕಿತ್ಸೆಗಾಗಿ ಏಮ್ಸ್ ಟ್ರಾಮಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸದ್ಯಕ್ಕೆ ಯಾವುದೇ ಕಾರಣಗಳ ಬಗ್ಗೆ ವರದಿಯಾಗಿಲ್ಲ. ಇತರ ರಕ್ಷಣಾ ಕಾರ್ಯಗಳಿಗಾಗಿ ಪೊಲೀಸರು, ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ ಸ್ಥಳದಲ್ಲಿದೆ ಎಂದು ದೆಹಲಿ ಪೊಲೀಸರು ಹೇಳಿಕೆ ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Sat, 17 February 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ