ದೆಹಲಿ ಫೆಬ್ರುವರಿ 17: ಶನಿವಾರ ಮಧ್ಯಾಹ್ನದ ಹೊತ್ತಿಗೆ ದೆಹಲಿಯ (Delhi) ಜವಾಹರಲಾಲ್ ನೆಹರು ಕ್ರೀಡಾಂಗಣ (Jawaharlal Nehru Stadium)ಬಳಿ ಪೆಂಡಾಲ್ (Pandal collapse) ಕುಸಿದು 8 ಮಂದಿಗೆ ಗಾಯಗಳಾಗಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸ್ಟೇಡಿಯಂನ ಗೇಟ್ ನಂ. 2ರಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ದೆಹಲಿ ಅಗ್ನಿಶಾಮಕ ದಳದ ಹಲವಾರು ವಾಹನಗಳು ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳದಲ್ಲಿವೆ. ಹುಲ್ಲುಹಾಸಿನ ಬಳಿ ನಡೆಯುತ್ತಿರುವ ನಿರ್ಮಾಣ ಕಾರ್ಯದ ವೇಳೆ ಈ ಘಟನೆ ನಡೆದಿದೆ. ಕನಿಷ್ಠ ಎಂಟು ಮಂದಿ ಗಾಯಗೊಂಡಿದ್ದಾರೆ. ಅವರನ್ನೆಲ್ ಚಿಕಿತ್ಸೆಗಾಗಿ ಸಫ್ದರ್‌ಜಂಗ್ ಮತ್ತು ಏಮ್ಸ್‌ಗೆ ದಾಖಲಿಸಲಾಗಿದೆ. ಹಲವು ಮಂದಿ ಸಿಲುಕಿರುವ ಶಂಕೆ ಇದ್ದು, ಶೋಧ ನಡೆಸಲಾಗುತ್ತಿದೆ. ಪೆಂಡಾಲ್ ಅವಶೇಷಗಳನ್ನು ತೆಗೆಯಲು ಕ್ರೇನ್ ಕೂಡ ಸ್ಥಳದಲ್ಲಿದೆ
ಅಪಘಾತವನ್ನು ಖಚಿತಪಡಿಸಿರುವ ದಕ್ಷಿಣ ದೆಹಲಿ ಡಿಸಿಪಿ, ಜವಾಹರಲಾಲ್ ನೆಹರು ಕ್ರೀಡಾಂಗಣದ ಗೇಟ್ ನಂ. 2 ಬಳಿ ಹುಲ್ಲುಹಾಸಿನಲ್ಲಿ ಕೆಲಸ ನಡೆಯುತ್ತಿದ್ದು, ಅದರ ಒಂದು ಭಾಗವು ಶನಿವಾರ ಮಧ್ಯಾಹ್ನ ಕುಸಿದಿದೆ ಎಂದು ಹೇಳಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿವೆ. ಅಪಘಾತದಲ್ಲಿ 8 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ, ಘಟನಾ ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.
#WATCH | Police say more than 8 people have been injured after a temporary structure installed near Gate number 2 of Jawaharlal Nehru stadium collapsed pic.twitter.com/Dc5sZTwqyb
— ANI (@ANI) February 17, 2024
ದೆಹಲಿ ಅಗ್ನಿಶಾಮಕ ಇಲಾಖೆಯು ಜೆಎಲ್‌ಎನ್ ಸ್ಟೇಡಿಯಂನಲ್ಲಿ ಪೆಂಡಾಲ್ ಕುಸಿದಿರುವ ಬಗ್ಗೆ ದೂರವಾಣಿ ಮೂಲಕ ಮಾಹಿತಿ ಪಡೆದಿದೆ ಎಂದು ಹೇಳಿಕೆ ನೀಡಿದೆ. ಘಟನೆ ನಡೆದ ಸ್ಥಳದಿಂದ ಇಬ್ಬರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಕೂಲಿ ಕಾರ್ಮಿಕರು ಊಟ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ಜವಾಹರಲಾಲ್ ನೆಹರು ಕ್ರೀಡಾಂಗಣದ ಭದ್ರತಾ ಸಿಬ್ಬಂದಿಯೊಬ್ಬರು ತಿಳಿಸಿದರು.
ಇದನ್ನೂ ಓದಿ: ಇಂದಿನಿಂದ ದೆಹಲಿಯಲ್ಲಿ ಬಿಜೆಪಿ ಬೃಹತ್ ರಾಷ್ಟ್ರೀಯ ಸಮಾವೇಶ: ಲೋಕಸಭೆ ಚುನಾವಣೆಗೆ ಭರ್ಜರಿ ತಾಲೀಮು
ಗೇಟ್ ನಂ.2 ರ ಜವಾಹರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ ಮದುವೆಗೆ ತಯಾರಿ ನಡೆಸುತ್ತಿದ್ದ ಒಂದು ಪೆಂಡಾಲ್ ಬಿದ್ದಿದೆ. ಸುಮಾರು 10-12 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅವರನ್ನು ಹೊರತೆಗೆದು ಚಿಕಿತ್ಸೆಗಾಗಿ ಏಮ್ಸ್ ಟ್ರಾಮಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸದ್ಯಕ್ಕೆ ಯಾವುದೇ ಕಾರಣಗಳ ಬಗ್ಗೆ ವರದಿಯಾಗಿಲ್ಲ. ಇತರ ರಕ್ಷಣಾ ಕಾರ್ಯಗಳಿಗಾಗಿ ಪೊಲೀಸರು, ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ ಸ್ಥಳದಲ್ಲಿದೆ ಎಂದು ದೆಹಲಿ ಪೊಲೀಸರು ಹೇಳಿಕೆ ನೀಡಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:19 pm, Sat, 17 February 24