‘ಪೇಪರ್ ಲೀಕ್ ಸರ್ಕಾರ’; ಯುಜಿಸಿ-ನೆಟ್ ಪರೀಕ್ಷೆಗಳ ರದ್ದತಿಗೆ ಕಾಂಗ್ರೆಸ್ ಪ್ರತಿಕ್ರಿಯೆ

ನೀಟ್ ಪರೀಕ್ಷೆಯ ಬಗ್ಗೆ ತೀವ್ರ ಆರೋಪಗಳು ವ್ಯಕ್ತವಾದ ಬೆನ್ನಲ್ಲೇ ಮಂಗಳವಾರ ನಡೆದ ಯುಜಿಸಿ-ನೆಟ್ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್​ಟಿಎ) ರದ್ದುಗೊಳಿಸಿದೆ. ಜೂನ್ 18ರಂದು ನೆಟ್ ಪರೀಕ್ಷೆ ನಡೆದಿತ್ತು. ಅದಾದ ಒಂದೇ ದಿನದಲ್ಲಿ ಈ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

'ಪೇಪರ್ ಲೀಕ್ ಸರ್ಕಾರ'; ಯುಜಿಸಿ-ನೆಟ್ ಪರೀಕ್ಷೆಗಳ ರದ್ದತಿಗೆ ಕಾಂಗ್ರೆಸ್ ಪ್ರತಿಕ್ರಿಯೆ
ಮಲ್ಲಿಕಾರ್ಜುನ ಖರ್ಗೆ
Follow us
ಸುಷ್ಮಾ ಚಕ್ರೆ
|

Updated on: Jun 20, 2024 | 3:15 PM

ನವದೆಹಲಿ: ಯುಜಿಸಿ-ನೆಟ್ ಪರೀಕ್ಷೆಗಳ (UGC-NET Exams) ರದ್ದತಿಗೆ ಸಂಬಂಧಿಸಿದಂತೆ ನರೇಂದ್ರ ಮೋದಿ (Narendra Modi) ನೇತೃತ್ವದ ಎನ್​ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್ ವ್ಯಂಗ್ಯವಾಡಿದೆ. ಮೋದಿ ಸರ್ಕಾರವನ್ನು “ಪೇಪರ್ ಸೋರಿಕೆ ಸರ್ಕಾರ” ಎಂದು ಟೀಕಿಸಿದೆ. ಶಿಕ್ಷಣ ಸಚಿವರು ಈಗ ಇದರ ಜವಾಬ್ದಾರಿ ತೆಗೆದುಕೊಳ್ಳುತ್ತಾರೆಯೇ? ಎಂದು ಕಾಂಗ್ರೆಸ್ ಪಕ್ಷ (Congress Party) ಪ್ರಶ್ನಿಸಿದೆ. ಕೇಂದ್ರ ಸರ್ಕಾರ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

“ಮಂಗಳವಾರ ದೇಶದ ವಿವಿಧ ನಗರಗಳಲ್ಲಿ ಯುಜಿಸಿ-ನೆಟ್ ಪರೀಕ್ಷೆ ನಡೆಸಲಾಗಿತ್ತು. ಅದಾದ ಒಂದೇ ದಿನಕ್ಕೆ ಪೇಪರ್ ಸೋರಿಕೆ ಶಂಕೆಯಿಂದ ಆ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಮೊದಲು ನೀಟ್ ಪೇಪರ್ ಸೋರಿಕೆಯಾಗಿತ್ತು ಮತ್ತು ಇದೀಗ ಯುಜಿಸಿ-ನೆಟ್ ಪೇಪರ್ ಸೋರಿಕೆಯಾಗಿದೆ. ಮೋದಿ ಸರ್ಕಾರ ‘ಪೇಪರ್ ಲೀಕ್ ಸರ್ಕಾರ’ವಾಗಿದೆ” ಎಂದು ಕಾಂಗ್ರೆಸ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದೆ.

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್​ನಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು “ನೀಟ್ ಪರೀಕ್ಷಾ ಪೇ ಚರ್ಚಾ” ಯಾವಾಗ ನಡೆಸುತ್ತಾರೆ ಎಂದು ಅವರು ಪ್ರಧಾನಿಯನ್ನು ಗುರಿಯಾಗಿಸಿಕೊಂಡು ಕೇಳಿದ್ದಾರೆ.

ಇದನ್ನೂ ಓದಿ: NET Exam 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ಪರೀಕ್ಷೆ ರದ್ದುಗೊಳಿಸಿದ ಕೇಂದ್ರ ಶಿಕ್ಷಣ ಸಚಿವಾಲಯ

ಎಕ್ಸ್‌ನಲ್ಲಿ ಹಿಂದಿಯಲ್ಲಿ ಬರೆದಿರುವ ಪೋಸ್ಟ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ, “ನರೇಂದ್ರ ಮೋದಿಯವರೇ, ನೀವು ಪರೀಕ್ಷೆಗಳ ಬಗ್ಗೆ ಸಾಕಷ್ಟು ಚರ್ಚಿಸುತ್ತೀರಿ. ಆದರೆ ನೀವು ಯಾವಾಗ ‘ನೀಟ್ ಪರೀಕ್ಷಾ ಪೇ ಚರ್ಚಾ’ ನಡೆಸುತ್ತೀರಿ? ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಉತ್ಸಾಹಕ್ಕೆ ತಣ್ಣೀರೆರಚಿದ್ದೀರಿ” ಅವರು ಹೇಳಿದ್ದಾರೆ.

“ಇದು ಮೋದಿ ಸರ್ಕಾರದ ದುರಹಂಕಾರದ ಸೋಲು. ಇದರಿಂದಾಗಿ ಅವರು ನಮ್ಮ ಯುವಕರ ಭವಿಷ್ಯವನ್ನು ತುಳಿಯುವ ಹೇಯ ಪ್ರಯತ್ನವನ್ನು ಮಾಡಿದ್ದಾರೆ” ಎಂದು ಖರ್ಗೆ ಟೀಕಿಸಿದ್ದಾರೆ.

“ನೀಟ್ ಪರೀಕ್ಷೆಯನ್ನು ಯಾವಾಗ ರದ್ದುಗೊಳಿಸಲಾಗುತ್ತದೆ?” ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ನೀಟ್ ಪರೀಕ್ಷೆಯಲ್ಲೂ ನಿಮ್ಮ ಸರ್ಕಾರದ ರಿಗ್ಗಿಂಗ್ ಮತ್ತು ಪೇಪರ್ ಸೋರಿಕೆಯನ್ನು ತಡೆಯುವ ಜವಾಬ್ದಾರಿಯನ್ನು ಮೋದಿಯವರು ವಹಿಸಿಕೊಳ್ಳಿ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ: NEET-UG 2024: ನೀಟ್ ಪರೀಕ್ಷೆಯಲ್ಲಿ ಅಕ್ರಮ; ಎನ್‌ಟಿಎ, ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ಶಿಕ್ಷಣ ಸಚಿವಾಲಯವು ಯುಜಿಸಿ-ನೆಟ್ ರದ್ದುಗೊಳಿಸಿ ಆದೇಶಿಸಿದ ನಂತರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಸರ್ಕಾರವನ್ನು ಗುರಿಯಾಗಿಸಿ ಟೀಕಿಸಿದ್ದಾರೆ ಮತ್ತು ಹೊಣೆಗಾರಿಕೆಯನ್ನು ಸರಿಪಡಿಸುವಂತೆ ಕೇಳಿದ್ದಾರೆ. ಬಿಜೆಪಿ ಸರ್ಕಾರದ “ಭ್ರಷ್ಟಾಚಾರ ಮತ್ತು ಸಡಿಲತೆ” ಯುವಕರಿಗೆ ಹಾನಿಕಾರಕವಾಗಿದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

“ನೀಟ್ ಪರೀಕ್ಷೆಯಲ್ಲಿ ಹಗರಣದ ಸುದ್ದಿಯ ನಂತರ, ಇದೀಗ ಜೂನ್ 18ರಂದು ನಡೆದ ನೆಟ್ ಪರೀಕ್ಷೆಯನ್ನು ಅಕ್ರಮಗಳ ಭೀತಿಯಿಂದ ರದ್ದುಗೊಳಿಸಲಾಗಿದೆ. ಈಗ ಅದನ್ನೆಲ್ಲ ಸರಿಪಡಿಸಲಾಗುತ್ತದೆಯೇ? ಶಿಕ್ಷಣ ಸಚಿವರು ಈ ಲೋಪಕ್ಕೆ ಹೊಣೆಗಾರರಾಗುತ್ತಾರೆಯೇ?” ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ