AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parakram Diwas: ಅಂಡಮಾನ್, ನಿಕೋಬಾರ್​ನ 21 ದ್ವೀಪಗಳಿಗೆ ಪರಮವೀರ ಚಕ್ರ ಪುರಸ್ಕೃತರ ಹೆಸರಿಟ್ಟ ಪ್ರಧಾನಿ ಮೋದಿ

ಅಂಡಮಾನ್ ಮತ್ತು ನಿಕೋಬಾರ್​ನ  21 ದ್ವೀಪಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ನಾಮಕರಣ ಮಾಡಿದ್ದಾರೆ. ಪರಾಕ್ರಮ್ ದಿವಸದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಮರ್ಪಿತವಾದ ದ್ವೀಪದಲ್ಲಿ ನಿರ್ಮಿಸಲಾದ ಸ್ಮಾರಕದ ಮಾದರಿಯನ್ನು ಪ್ರಧಾನಿ ಅನಾವರಣಗೊಳಿಸಿದರು.

Parakram Diwas: ಅಂಡಮಾನ್, ನಿಕೋಬಾರ್​ನ 21 ದ್ವೀಪಗಳಿಗೆ ಪರಮವೀರ ಚಕ್ರ ಪುರಸ್ಕೃತರ ಹೆಸರಿಟ್ಟ ಪ್ರಧಾನಿ ಮೋದಿ
ನರೇಂದ್ರ ಮೋದಿ
TV9 Web
| Updated By: ನಯನಾ ರಾಜೀವ್|

Updated on: Jan 23, 2023 | 12:29 PM

Share

ಅಂಡಮಾನ್ ಮತ್ತು ನಿಕೋಬಾರ್​ನ  21 ದ್ವೀಪಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ನಾಮಕರಣ ಮಾಡಿದ್ದಾರೆ. ಪರಾಕ್ರಮ್ ದಿವಸದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಮರ್ಪಿತವಾದ ದ್ವೀಪದಲ್ಲಿ ನಿರ್ಮಿಸಲಾದ ಸ್ಮಾರಕದ ಮಾದರಿಯನ್ನು ಪ್ರಧಾನಿ ಅನಾವರಣಗೊಳಿಸಿದರು. ಸ್ವಾತಂತ್ರ್ಯ ಹೋರಾಟಗಾರರ 126ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಸ್ಮಾರಕದ ಮಾದರಿಯನ್ನು ಅವರು ಉದ್ಘಾಟಿಸಿದರು.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ನೆನಪಿಗಾಗಿ ಸರ್ಕಾರವು 2021 ರಲ್ಲಿ ಜನವರಿ 23 ಅನ್ನು ಪರಾಕ್ರಮ್ ದಿವಸ್ ಎಂದು ಘೋಷಿಸಿತ್ತು. ಪರಾಕ್ರಮ್ ದಿವಸದಲ್ಲಿ, ನಾನು ನೇತಾಜಿ ಸುಭಾಸ್ ಚಂದ್ರ ಬೋಸ್ ಅವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಮತ್ತು ಭಾರತದ ಇತಿಹಾಸಕ್ಕೆ ಅವರ ಅಪ್ರತಿಮ ಕೊಡುಗೆಯನ್ನು ಸ್ಮರಿಸಿಕೊಳ್ಳುತ್ತೇನೆ.

ಮತ್ತಷ್ಟು ಓದಿ: Subhash Chandra Bose: ಪ್ರಧಾನಿ ಮೋದಿಯಿಂದ ಸಂಸತ್ತಿನಲ್ಲಿ ಸುಭಾಷ್​ ಚಂದ್ರ ಬೋಸ್ ಭಾವಚಿತ್ರಕ್ಕೆ ಗೌರವ ನಮನ; 80 ಯುವಕರು ಭಾಗಿ

ವಸಾಹತುಶಾಹಿ ಆಳ್ವಿಕೆಗೆ ಅವರ ತೀವ್ರ ಪ್ರತಿರೋಧಕ್ಕಾಗಿ ಅವರನ್ನು ಸ್ಮರಿಸಲಾಗುವುದು. ಭಾರತಕ್ಕಾಗಿ ಅವರ ದೃಷ್ಟಿಕೋನವನ್ನು ಸಾಕಾರಗೊಳಿಸಲು ನಾವು ಕೆಲಸ ಮಾಡುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪದಲ್ಲಿ ನಿರ್ಮಿಸಲಾದ ನೇತಾಜಿಗೆ ಮೀಸಲಾಗಿರುವ ರಾಷ್ಟ್ರೀಯ ಸ್ಮಾರಕದ ಮಾದರಿಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಲಿದ್ದಾರೆ.

2018 ರಲ್ಲಿ ದ್ವೀಪಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಯವರು ರಾಸ್ ದ್ವೀಪಗಳನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪ ಎಂದು ಮರುನಾಮಕರಣ ಮಾಡಿದರು.

ಇದನ್ನು ಹೊರತುಪಡಿಸಿ, ನೀಲ್ ದ್ವೀಪ ಮತ್ತು ಹ್ಯಾವ್ಲಾಕ್ ದ್ವೀಪವನ್ನು ಶಹೀದ್ ದ್ವೀಪ ಮತ್ತು ಸ್ವರಾಜ್ ದ್ವೀಪ ಎಂದು ಮರುನಾಮಕರಣ ಮಾಡಲಾಯಿತು.

21 ಪ್ರಶಸ್ತಿ ಪುರಸ್ಕೃತರು ಯಾರು? ಈ ದ್ವೀಪಗಳಿಗೆ 21 ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರಾದ ಮೇಜರ್ ಸೋಮನಾಥ ಶರ್ಮಾ, ಸುಬೇದಾರ್ ಮತ್ತು ಹೊನಿ ಕ್ಯಾಪ್ಟನ್ (ಆಗ ಲ್ಯಾನ್ಸ್ ನಾಯಕ್) ಕರಮ್ ಸಿಂಗ್, ಎಂಎಂ;, 2 ನೇ ಲೆಫ್ಟಿನೆಂಟ್, ರಾಮ ರಘೋಬಾ ರಾಣೆ,  ನಾಯಕ್ ಜಾದುನಾಥ್ ಸಿಂಗ್;  ಕಂಪನಿ ಹವಾಲ್ದಾರ್ ಮೇಜರ್ ಪೀರು ಸಿಂಗ್ ಅವರ ಹೆಸರನ್ನು ಇಡಲಾಗಿದೆ. . ಅಧಿಕಾರಿ ನಿರ್ಮಲಜಿತ್ ಸಿಂಗ್ ಸೆಖೋನ್, ಮೇಜರ್ ರಾಮಸ್ವಾಮಿ ಪರಮೇಶ್ವರನ್, ನೈಬ್ ಸುಬೇದಾರ್ ಬನಾ ಸಿಂಗ್; ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ, ಸುಬೇದಾರ್ ಮೇಜರ್ (ಆಗಿನ ರೈಫಲ್‌ಮ್ಯಾನ್) ಸಂಜಯ್ ಕುಮಾರ್; ಮತ್ತು ಸುಬೇದಾರ್ ಮೇಜರ್ ನಿವೃತ್ತ (ಗೌರವ ಕ್ಯಾಪ್ಟನ್) ಗ್ರೆನೇಡಿಯರ್ ಯೋಗೇಂದ್ರ ಸಿಂಗ್ ಯಾದವ್ ಅವರ ಹೆಸರಿಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ