‘100 ಕೋಟಿ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂಬ ಪತ್ರ ಬರೆದದ್ದು ನಾನೇ‘; ಖಚಿತಪಡಿಸಿದ ಪರಮ್​ವೀರ್ ಸಿಂಗ್

Param Bir Singh Letter: ತಡರಾತ್ರಿ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ‘ಅದು ಪರಮ್​ವೀರ್ ಸಿಂಗ್ ಬರೆದ ಪತ್ರವಲ್ಲ. ಪತ್ರದ ಮೂಲದ ಕುರಿತು ಅಧಿಕೃತತೆಯಿಲ್ಲ’ ಎಂದು ಹೇಳಿತ್ತು. ಆದರೆ ಪರಮ್​ವೀರ್ ಸಿಂಗ್ ಸ್ವತಃ ತಾವೇ ಪತ್ರ ಬರೆದಿದ್ದಾಗಿ ಖಚಿತಪಡಿಸಿದ್ದಾರೆ.

‘100 ಕೋಟಿ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂಬ ಪತ್ರ ಬರೆದದ್ದು ನಾನೇ‘; ಖಚಿತಪಡಿಸಿದ ಪರಮ್​ವೀರ್ ಸಿಂಗ್
ಪರಮ್​ಬೀರ್ ಸಿಂಗ್
Follow us
guruganesh bhat
|

Updated on:Mar 21, 2021 | 11:08 AM

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಪತ್ರ ಬರೆದಿದ್ದಾಗಿ ಪರಮ್​ವೀರ್ ಸಿಂಗ್ ಖಚಿತಪಡಿಸಿದ್ದಾರೆ. ಅನಿಲ್ ದೇಶ್​ಮುಖ್ ಮುಂಬೈನ ಬಾರ್ ಮತ್ತು ರೆಸ್ಟೊರೆಂಟ್​ಗಳಿಂದ 100 ಕೋಟಿ ಹಣವನ್ನು ವಸೂಲು ಮಾಡಬೇಕೆಂದು ಸಸ್ಪೆಂಡ್ ಆಗಿರುವ ಪೊಲಿಸ್ ಅಧಿಕಾರಿ ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು ಎಂದು ಪರಮ್​ವೀರ್ ಸಿಂಗ್ ಪತ್ರದಲ್ಲಿ ಉಲ್ಲೇಖಿಸಿದ್ದರು. ನಂತರ ತಡರಾತ್ರಿ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ‘ಅದು ಪರಮ್​ವೀರ್ ಸಿಂಗ್ ಬರೆದ ಪತ್ರವಲ್ಲ. ಪತ್ರದ ಮೂಲದ ಕುರಿತು ಅಧಿಕೃತತೆಯಿಲ್ಲ’ ಎಂದು ಹೇಳಿತ್ತು. ಆದರೆ ಇಂದು (ಮಾರ್ಚ್ 21) ಬೆಳಗ್ಗೆ ಪರಮ್​ವೀರ್ ಸಿಂಗ್ ಸ್ವತಃ ತಾವೇ ಪತ್ರ ಬರೆದಿದ್ದಾಗಿ ಖಚಿತಪಡಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಚೇರಿಗೆ ಸಹಿ ಮಾಡಿದ ಪತ್ರವನ್ನು ಕಳಿಸಿದ್ದಾಗಿ ಅವರು ತಿಳಿಸಿದ್ದಾರೆ.  

ಶಿವಸೇನೆಯ ಉದ್ಧವ್ ಠಾಕ್ರೆ  ಮಹಾರಾಷ್ಟ್ರದ ಮುಖ್ಯಮಂತ್ರಿಯಾದರೂ ಮೈತ್ರಿಕೂಟದ ಎನ್​ಸಿಪಿ ಪಕ್ಷದ ಅನಿಲ್ ದೇಶ್​ಮುಖ್ ಗೃಹ ಸಚಿವರಾಗಿದ್ದಾರೆ.  ಸರ್ಕಾರದ ಚುಕ್ಕಾಣಿಯಲ್ಲಿ ಕುಳಿತಿರುವ ಇಬ್ಬರ ನಡುವೆ ಅಭಿಪ್ರಾಯ ಬೇಧ, ಸಣ್ಣಪುಟ್ಟ ವೈಮನಸ್ಸು ಉದ್ಭವಿಸಿದ ಉದಾಹರಣೆಗಳಿವೆ. ಗೃಹ ಸಚಿವ ಅನಿಲ್ ದೇಶ್​ಮುಖ್ ಮೇಲೆ ಪರಮ್​ವೀರ್ ಸಿಂಗ್ ಮಾಡಿರುವ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸುವ ಆರೋಪ ಮಹಾರಾಷ್ಟ್ರ ಸರ್ಕಾರಕ್ಕೆ ಕುತ್ತು ತರುವ ಶಕ್ತಿ ಹೊಂದಿದೆ. ಪರಮ್​ವೀರ್ ಸಿಂಗ್ ಗೃಹ ಸಚಿವರ ಮೇಲೇ ಆರೋಪ ಮಾಡಿರುವುದು ಶಿವಸೇನೆ-ಎನ್​ಸಿಪಿಯ ದೋಸ್ತಿ ಸರ್ಕಾರದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ.

ಪತ್ರದ ಸಂಪೂರ್ಣ ವಿವರ ಓದಲು ಇಲ್ಲಿ ಕ್ಲಿಕ್ ಮಾಡಿ: ಪರಮ್​ವೀರ್ ಸಿಂಗ್ ಉದ್ಧವ್ ಠಾಕ್ರೆಗೆ ಬರೆದ ಪತ್ರ

ಗೃಹ ಸಚಿವ ಅನಿಲ್ ದೇಶ್​ಮುಖ್ ಅವರ ಮೇಲೆ ಇನ್ನೂ ಗಂಭೀರ ಆರೋಪ ಮಾಡಿದ್ದಾರೆ. ಮುಂಬೈನ ಖಾಸಗಿ ಹೊಟೇಲ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂಸದ ಮೋಹನ್ ದೇಲ್ಕರ್ ಸಾವಿಗೂ ಅನಿಲ್ ದೇಶ್​ಮುಖ್ ಹೆಸರು ಥಳುಕುಹಾಕಿಕೊಂಡಿದೆ. ‘ಹಿರಿಯ ಅಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ’ ಎಂದು ಆತ್ಮಹತ್ಯಾ ಪತ್ರ ಬರೆದಿದ್ದ ಸಂಸದ ಮೋಹನ್ ದೇಲ್ಕರ್ ಬರೆದುಕೊಂಡಿದ್ದರಂತೆ. ಆದರೆ ಮೋಹನ್ ದೇಲ್ಕರ್ ಅವರ ಸಾವನ್ನು ಆತ್ಮಹತ್ಯೆ ಎಂದೇ ಪ್ರಕರಣ ದಾಖಲಿಸುವಂತೆ ಗೃಹ ಸಚಿವ ಅನಿಲ್ ದೇಶ್​ಮುಖ್ ಒತ್ತಡ ಹೇರಿದ್ದರು ಎಂದು ಪರಮ್​ವೀರ್  ಸಿಂಗ್ ಆರೋಪಿಸಿದ್ದಾರೆ.

ಅನಿಲ ದೇಶ್​ಮುಖ್​ಗೆ ನನ್ನ ಮೇಲೆ ಅತ್ಯಂತ ಸಿಟ್ಟಿತ್ತು. ಮೋಹನ್ ದೇಲ್ಕರ್ ಸಾವನ್ನು SIT ಗೆ ನಿಡುವುದಾಗಿ ಮಹಾರಾಷ್ಟ್ರ ವಿಧಾನಸಭೆಯಲ್ಲಿ ದೇಶ್​ಮುಖ್ ತಿಳಿಸಿದ್ದರು ಎಂದು ಪರಮ್​ವೀರ್  ಸಿಂಗ್ ಪತ್ರದಲ್ಲಿ ದೂರಿದ್ದಾರೆ.

ಗೃಹ ಸಚಿವರ ರಾಜೀನಾಮೆಗೆ ಆಗ್ರಹ ಈ ಸಂಬಂಧ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕರೂ ಆಗಿರುವ ದೇವೇಂದ್ರ ಫಡ್ನವಿಸ್, ಗೃಹ ಸಚಿವರು ರಾಜೀನಾಮೆ ನೀಡಬೇಕು. ಒಂದುವೇಳೆ ಅನಿಲ್ ದೇಶ್​ಮುಖ್ ರಾಜೀನಾಮೆ ನೀಡದಿದ್ದರೆ ಖುದ್ದು ಮುಖ್ಯಮಂತ್ರಿ ಅವರು ಗೃಹ ಸಚಿವರನ್ನು ತೆಗೆದುಹಾಕಬೇಕು. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಈ ಎಲ್ಲಾ ದುಷ್ಕೃತ್ಯಗಳ ಬಗ್ಗೆ ಮುಖ್ಯಮಂತ್ರಿಗೆ ಅರಿವಿತ್ತು ಎಂದೂ ಪತ್ರದಲ್ಲಿ ಹೇಳಲಾಗಿದೆ. ಹಾಗಾಗ್ಯೂ ಯಾಕೆ ಅವರು ಏನೂ ಕ್ರಮ ಕೈಗೊಂಡಿಲ್ಲ ಎಂದು ಕೇಳಿದ್ದಾರೆ.

ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್ ಆದರೆ, ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳನ್ನು ಗೃಹ ಸಚಿವ ಅನಿಲ್ ದೇಶ್​ಮುಖ್ ತಳ್ಳಿ ಹಾಕಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅವರು ಹೇಳಿದ್ದಾರೆ.

ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು. ಹಾಗೂ ನಾನು ಮಾನಹಾನಿ ಪ್ರಕರಣ ದಾಖಲಿಸುತ್ತಿರುವ ಕಾರಣ ಅವರು ಮಾಡಿರುವ ಆರೋಪಗಳನ್ನು ಸಾಕ್ಷೀಕರಿಸಬೇಕು ಎಂದು ಅನಿಲ್ ದೇಶ್​ಮುಖ್ ತಿಳಿಸಿದ್ದಾರೆ.

ಪತ್ರದ ಸಂಪೂರ್ಣ ವಿವರ ಓದಲು ಇಲ್ಲಿ ಕ್ಲಿಕ್ ಮಾಡಿ: ಪರಮ್​ವೀರ್ ಸಿಂಗ್ ಉದ್ಧವ್ ಠಾಕ್ರೆಗೆ ಬರೆದ ಪತ್ರ

ಇದನ್ನೂ ಓದಿ: Mukesh Ambani | ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳು​ ಪತ್ತೆ

ಮುಕೇಶ್ ಅಂಬಾನಿ ಮನೆ ಮುಂದೆ ಜಿಲೆಟಿನ್ ಪತ್ತೆ ಪ್ರಕರಣ ; ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಸಸ್ಪೆಂಡ್

ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್​ವೀರ್ ಸಿಂಗ್​ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..

Published On - 11:01 am, Sun, 21 March 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್