AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಲ್ ದೇಶ್​ಮುಖ್ ವಿರುದ್ಧ ಪರಮ್​ವೀರ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಬಾಂಬೆ ಹೈಕೋರ್ಟ್​ನಲ್ಲಿ ಮಾರ್ಚ್ 31ಕ್ಕೆ ವಿಚಾರಣೆ

ಪರಮ್​ವೀರ್ ಸಿಂಗ್ ಬಾಂಬೆ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಾರ್ಚ್ 25ರಂದು ದಾಖಲಿಸಿದ್ದರು. ಪೊಲೀಸ್ ಇಲಾಖೆಯ ಪೊಲೀಸರ ವರ್ಗಾವಣೆ ವಿಚಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತಾಗಿಯೂ ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಅನಿಲ್ ದೇಶ್​ಮುಖ್ ವಿರುದ್ಧ ಪರಮ್​ವೀರ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಬಾಂಬೆ ಹೈಕೋರ್ಟ್​ನಲ್ಲಿ ಮಾರ್ಚ್ 31ಕ್ಕೆ ವಿಚಾರಣೆ
ಪರಮ್​ವೀರ್ ಸಿಂಗ್ ಹಾಗೂ ಬಾಂಬೆ ಹೈಕೋರ್ಟ್
TV9 Web
| Edited By: |

Updated on:Apr 05, 2022 | 1:02 PM

Share

ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಮಾಜಿ ಮುಂಬೈ ಪೊಲೀಸ್ ಮುಖ್ಯಸ್ಥ ಪರಮ್​ವೀರ್ ಸಿಂಗ್ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಾಳೆ (ಮಾರ್ಚ್ 31) ನಡೆಸುವುದಾಗಿ ಬಾಂಬೆ ಹೈಕೋರ್ಟ್ ಇಂದು ತಿಳಿಸಿದೆ. ಅನಿಲ್ ದೇಶ್​ಮುಖ್, ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಿ ಪ್ರತಿ ತಿಂಗಳು ಬಾರ್ ಹಾಗೂ ರೆಸ್ಟೋರೆಂಟ್​ಗಳಿಂದ ₹ 100 ಕೋಟಿ ದಂಡ ಸಂಗ್ರಹಿಸಲು ತಿಳಿಸಿದ್ದರು. ಈ ಕಾರಣಕ್ಕಾಗಿ ಅನಿಲ್ ದೇಶ್​ಮುಖ್ ವಿರುದ್ಧ ಪರಮ್​ವೀರ್ ಸಿಂಗ್ ಪಿಐಎಲ್ ದಾಖಲಿಸಿದ್ದರು.

ಪರಮ್​ವೀರ್ ಸಿಂಗ್ ಬಾಂಬೆ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಾರ್ಚ್ 25ರಂದು ದಾಖಲಿಸಿದ್ದರು. ಪೊಲೀಸ್ ಇಲಾಖೆಯ ಪೊಲೀಸರ ವರ್ಗಾವಣೆ ವಿಚಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತಾಗಿಯೂ ಅವರು ತಮ್ಮ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಮುಂಬೈನ ಹಿಂದಿನ ಪೊಲೀಸ್ ಕಮಿಷನರ್ ಪರಮ್​ವೀರ್​ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ತಿರಸ್ಕರಿಸಿತ್ತು. ಬಾಂಬೆ ಹೈಕೋರ್ಟ್​ನಲ್ಲಿಯೇ ಅರ್ಜಿ ಹಾಕಿಕೊಳ್ಳಿ ಎಂದು ಸೂಚಿಸಿತ್ತು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪರಮ್​ವೀರ್​ ಸಿಂಗ್​ ಬಾಂಬೆ ಹೈಕೋರ್ಟ್​ಗೆ ಅರ್ಜಿ ಹಾಕಿದ್ದರು. ತಮ್ಮ ಅರ್ಜಿಯಲ್ಲಿ ಮಹಾರಾಷ್ಟ್ರದ ಹಾಲಿ ಗೃಹ ಸಚಿವ ಅನಿಲ್ ದೇಶ್​ಮುಖ್​ ವಿರುದ್ಧ ಗಂಭೀರ ಆರೋಪ ಮಾಡಿದ್ದ ಪರಮ್​ವೀರ್​ಸಿಂಗ್, ಗೃಹ ಸಚಿವರಾಗಿ ದೇಶ್​ಮುಖ್​ ಅವರು ಲಂಚ ಸ್ವೀಕರಿಸಿ ಪ್ರತಿ ತಿಂಗಳು ರೂ 100 ಕೋಟಿ ಕಪ್ಪ ತಂದು ಕೊಡಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಆಣತಿ ನೀಡಿದ್ದಾರೆ. ಇದನ್ನು ತನಿಖೆಗಾಗಿ ಕೂಡಲೇ ಸಿಬಿಐಗೆ ಒಪ್ಪಿಸಬೇಕು ಎಂದು ತಮ್ಮ ಕೇಳಿದ್ದರು.

ಸುಪ್ರೀಂಕೋರ್ಟ್ ಏನು ಹೇಳಿತು? ಈ ಹಂತದಲ್ಲಿ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಯಾವ ರಾಜ್ಯಗಳಿಗೂ ಪೊಲೀಸ್ ಸುಧಾರಣೆ ತರಲು ಇಷ್ಟ ಇಲ್ಲ. ಯಾಕೆಂದರೆ, ಒಂದೊಮ್ಮೆ ಈ ರೀತಿ ಸುಧಾರಣೆ ತಂದರೆ, ಅವರ ಕೈಲಿ ಅಧಿಕಾರ ಇರುವುದೇ ಇಲ್ಲ ಎಂದು ಹೇಳಿದರು. ಮೊದಲು ಒಳ್ಳೆ ಸಂಬಂಧ ಹೊಂದಿದ್ದವರು ಈಗ ಜಗಳಕ್ಕಿಳಿದಿದ್ದಾರೆ. ಇದರಿಂದ ಎಲ್ಲ ಹೊರಬರುತ್ತಿದೆ. ಈ ಹಂತದಲ್ಲಿ ನಾವು ಈ ಪ್ರಕರಣದ ವಿಚಾರಣೆ ಆರಂಭಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಯಾವಾಗ ನ್ಯಾಯಾಲಯ ತಾನು ಈ ಹಂತದಲ್ಲಿ ಇದನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿತೋ ಆಗ ರೋಹಟ​ಗಿ, ತಮ್ಮ ಕೋರಿಕೆಯನ್ನು ಮುಂದಿಟ್ಟರು. ದೇಶ್​ಮುಖ್​ ಈಗಲೂ ಮಂತ್ರಿಯಾಗಿ ಇದ್ದಾರೆ.  ಹಾಗಾಗಿ ಸಾಕ್ಷ್ಯ ನಾಶವಾಗುವ ಸಾಧ್ಯತೆ ಇದೆ. ಆದ್ದರಿಂದ ಬಾಂಬೆ ಹೈಕೋರ್ಟ್​ ನಾಳೆಯೇ ಇದನ್ನು ವಿಚಾರಣೆಗೆ ತೆಗೆದುಕೊಳ್ಳಲು ನಿರ್ದೇಶನ ನೀಡಿ ಎಂದು ಕೋರಿಕೊಂಡರು. ಅದನ್ನು ಒಪ್ಪಿದ ನ್ಯಾಯಪೀಠ ನಾಳೆಯೇ ಇದನ್ನು ವಿಚಾರಣೆಗೆ ತೆಗೆದುಕೊಳ್ಳುವಂತೆ ಬಾಂಬೆ ಹೈಕೋರ್ಟ್​ಗೆ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸಲು ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು; ಉದ್ಧವ್ ಠಾಕ್ರೆಗೆ ಪತ್ರ ಬರೆದ ಪರಮ್​ವೀರ್ ಸಿಂಗ್

ಇದನ್ನೂ ಓದಿ: ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್​ವೀರ್ ಸಿಂಗ್​ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..

Published On - 10:46 pm, Tue, 30 March 21

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ