AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಕೆಂಡ್ ಹ್ಯಾಂಡ್ ಕಾರ್ ಖರೀದಿಸಲು ನವಜಾತ ಶಿಶುವನ್ನೇ ಮಾರಿದರು!

ಮಗು ಉದ್ಯಮಿ ಬಳಿ ಇದೆ. ನಾವು ಶುಕ್ರವಾರ ಮಹಿಳೆ ಮತ್ತು ಅವಳ ಪತಿಯನ್ನು ವಿಚಾರಣೆಗಾಗಿ ಕರೆದಿದ್ದೇವೆ ಎಂದು ಪೊಲೀಸ್ ಅಧಿಕಾರಿ ಮಿಶ್ರಾ ಹೇಳಿದ್ದಾರೆ. ದಂಪತಿ ಇತ್ತೀಚೆಗೆ ಸೆಕೆಂಡ್ ಹ್ಯಾಂಡ್ ಕಾರನ್ನು ಖರೀದಿಸಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಸೆಕೆಂಡ್ ಹ್ಯಾಂಡ್ ಕಾರ್ ಖರೀದಿಸಲು ನವಜಾತ ಶಿಶುವನ್ನೇ ಮಾರಿದರು!
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Aug 23, 2021 | 12:35 PM

Share

ಕಾನ್ಪುರ: ತಮ್ಮ ನವಜಾತ ಶಿಶುವನ್ನು ದಂಪತಿ ಉದ್ಯಮಿಗಳಿಗೆ 1.5 ಲಕ್ಷ ರೂಪಾಯಿಗೆ ಮಾರಿದ ಅಮಾನುಷ ಘಟನೆ ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ನಡೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಸುದ್ದಿಸಂಸ್ಥೆಯು ವರದಿ ಮಾಡಿದೆ. ದಂಪತಿ ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಲು ತಮ್ಮ ಮಗುವನ್ನೇ ಮಾರಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಯ ಬಗ್ಗೆ ಜನರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಮಗುವಿನ ಅಜ್ಜ, ಅಜ್ಜಿಯಂದಿರು ಗುರುವಾರ ಪೊಲೀಸರನ್ನು ಸಂಪರ್ಕಿಸಿ ಪೋಷಕರ ವಿರುದ್ಧ ದೂರು ದಾಖಲಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ತಿರ್ವಾ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸತೌರ್‌ನ ದುಲಾರಿ ದೇವಿ (ಹೆಸರು ಬದಲಾಯಿಸಲಾಗಿದೆ) ಎಂಬವರಿಗೆ ಮೂರು ತಿಂಗಳ ಹಿಂದೆ ಮಗು ಜನಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ಸ್‌ಪೆಕ್ಟರ್ ಕೊತ್ವಾಲಿ ಶೈಲೇಂದ್ರ ಕುಮಾರ್ ಮಿಶ್ರಾ ಅವರು, ತಮ್ಮ ಮಗಳು ಮತ್ತು ಅಳಿಯ ಮಗುವನ್ನು, ಗುರ್ಸಹೈಗಂಜ್ ಮೂಲದ ಉದ್ಯಮಿಯೊಬ್ಬರಿಗೆ 1.5 ಲಕ್ಷ ರೂ.ಗೆ ಮಾರಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೆಕೆಂಡ್ ಹ್ಯಾಂಡ್ ಕಾರ್ ಕೊಳ್ಳಲು ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮಗು ಉದ್ಯಮಿ ಬಳಿ ಇದೆ. ನಾವು ಶುಕ್ರವಾರ ಮಹಿಳೆ ಮತ್ತು ಅವಳ ಪತಿಯನ್ನು ವಿಚಾರಣೆಗಾಗಿ ಕರೆದಿದ್ದೇವೆ ಎಂದು ಪೊಲೀಸ್ ಅಧಿಕಾರಿ ಮಿಶ್ರಾ ಹೇಳಿದ್ದಾರೆ. ದಂಪತಿ ಇತ್ತೀಚೆಗೆ ಸೆಕೆಂಡ್ ಹ್ಯಾಂಡ್ ಕಾರನ್ನು ಖರೀದಿಸಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಭೀಮಾತೀರದಲ್ಲಿ ನೆತ್ತರು; ತಲೆ ಜಜ್ಜಿ ಪೌರ ಕಾರ್ಮಿಕನ ಬರ್ಬರ ಕೊಲೆ

Newborn Baby Stolen Case: ನವಜಾತ ಶಿಶು ಕಳ್ಳತನ ಪ್ರಕರಣ: 9 ತಿಂಗಳು ಕಳೆದ್ರೂ ಸಿಕ್ಕಿಲ್ಲ ಮಕ್ಕಳ ಕಳ್ಳಿ

(Parents sell their newborn to buy a second hand car in Uttar Pradesh)

Published On - 3:04 pm, Fri, 14 May 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!