ಕಾನ್ಪುರ: ತಮ್ಮ ನವಜಾತ ಶಿಶುವನ್ನು ದಂಪತಿ ಉದ್ಯಮಿಗಳಿಗೆ 1.5 ಲಕ್ಷ ರೂಪಾಯಿಗೆ ಮಾರಿದ ಅಮಾನುಷ ಘಟನೆ ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ನಡೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಸುದ್ದಿಸಂಸ್ಥೆಯು ವರದಿ ಮಾಡಿದೆ. ದಂಪತಿ ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಲು ತಮ್ಮ ಮಗುವನ್ನೇ ಮಾರಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಯ ಬಗ್ಗೆ ಜನರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಮಗುವಿನ ಅಜ್ಜ, ಅಜ್ಜಿಯಂದಿರು ಗುರುವಾರ ಪೊಲೀಸರನ್ನು ಸಂಪರ್ಕಿಸಿ ಪೋಷಕರ ವಿರುದ್ಧ ದೂರು ದಾಖಲಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ತಿರ್ವಾ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸತೌರ್‌ನ ದುಲಾರಿ ದೇವಿ (ಹೆಸರು ಬದಲಾಯಿಸಲಾಗಿದೆ) ಎಂಬವರಿಗೆ ಮೂರು ತಿಂಗಳ ಹಿಂದೆ ಮಗು ಜನಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ಸ್‌ಪೆಕ್ಟರ್ ಕೊತ್ವಾಲಿ ಶೈಲೇಂದ್ರ ಕುಮಾರ್ ಮಿಶ್ರಾ ಅವರು, ತಮ್ಮ ಮಗಳು ಮತ್ತು ಅಳಿಯ ಮಗುವನ್ನು, ಗುರ್ಸಹೈಗಂಜ್ ಮೂಲದ ಉದ್ಯಮಿಯೊಬ್ಬರಿಗೆ 1.5 ಲಕ್ಷ ರೂ.ಗೆ ಮಾರಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೆಕೆಂಡ್ ಹ್ಯಾಂಡ್ ಕಾರ್ ಕೊಳ್ಳಲು ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮಗು ಉದ್ಯಮಿ ಬಳಿ ಇದೆ. ನಾವು ಶುಕ್ರವಾರ ಮಹಿಳೆ ಮತ್ತು ಅವಳ ಪತಿಯನ್ನು ವಿಚಾರಣೆಗಾಗಿ ಕರೆದಿದ್ದೇವೆ ಎಂದು ಪೊಲೀಸ್ ಅಧಿಕಾರಿ ಮಿಶ್ರಾ ಹೇಳಿದ್ದಾರೆ. ದಂಪತಿ ಇತ್ತೀಚೆಗೆ ಸೆಕೆಂಡ್ ಹ್ಯಾಂಡ್ ಕಾರನ್ನು ಖರೀದಿಸಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಭೀಮಾತೀರದಲ್ಲಿ ನೆತ್ತರು; ತಲೆ ಜಜ್ಜಿ ಪೌರ ಕಾರ್ಮಿಕನ ಬರ್ಬರ ಕೊಲೆ
Newborn Baby Stolen Case: ನವಜಾತ ಶಿಶು ಕಳ್ಳತನ ಪ್ರಕರಣ: 9 ತಿಂಗಳು ಕಳೆದ್ರೂ ಸಿಕ್ಕಿಲ್ಲ ಮಕ್ಕಳ ಕಳ್ಳಿ
(Parents sell their newborn to buy a second hand car in Uttar Pradesh)
Published On - 3:04 pm, Fri, 14 May 21