Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಇಂದು ಮೋದಿ ಪರೀಕ್ಷಾ ಪೇ ಚರ್ಚಾ, ಪ್ರಧಾನಿಗೆ ಪ್ರಶ್ನೆ ಕೇಳಲು ಸ್ಟೂಡೆಂಟ್ಸ್ ಕಾತರ

ದೆಹಲಿ: ಪರೀಕ್ಷಾ ಪೇ ಚರ್ಚಾ.. ಎಕ್ಸಾಂ ಟೈಮಲ್ಲಿ ವಿದ್ಯಾರ್ಥಿಗಳ ಒತ್ತಡ, ಆತಂಕಗಳ ನಿವಾರಣೆಗೆ ಪ್ರಧಾನಿ ಮೋದಿ ಸಲಹೆ ನೀಡುವ ಕಾರ್ಯಕ್ರಮ. ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರ ಜೊತೆ ಸಂವಾದ ನಡೆಸೋ ವೇದಿಕೆ. ಇಂಥಾ ಕಾರ್ಯಕ್ರಮದ ಮೂರನೇ ಆವೃತ್ತಿ ಇಂದು ನಡೆಯಲಿದೆ. ದೆಹಲಿಯಲ್ಲಿಂದು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ: ಯೆಸ್, ಪ್ರತಿ ವರ್ಷದಂತೆ ಈ ಬಾರಿಯೂ ಪ್ರಧಾನಿ ಮೋದಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ. ದೆಹಲಿಯ ತಾಲ್​ಕಟೋರ ಇಂಡೋರ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲಿದ್ದು, ದೇಶದ ವಿವಿಧ ಭಾಗಗಳಿಂದ ಎರಡು […]

ದೆಹಲಿಯಲ್ಲಿ ಇಂದು ಮೋದಿ ಪರೀಕ್ಷಾ ಪೇ ಚರ್ಚಾ, ಪ್ರಧಾನಿಗೆ ಪ್ರಶ್ನೆ ಕೇಳಲು ಸ್ಟೂಡೆಂಟ್ಸ್ ಕಾತರ
Follow us
ಸಾಧು ಶ್ರೀನಾಥ್​
|

Updated on: Jan 20, 2020 | 7:26 AM

ದೆಹಲಿ: ಪರೀಕ್ಷಾ ಪೇ ಚರ್ಚಾ.. ಎಕ್ಸಾಂ ಟೈಮಲ್ಲಿ ವಿದ್ಯಾರ್ಥಿಗಳ ಒತ್ತಡ, ಆತಂಕಗಳ ನಿವಾರಣೆಗೆ ಪ್ರಧಾನಿ ಮೋದಿ ಸಲಹೆ ನೀಡುವ ಕಾರ್ಯಕ್ರಮ. ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರ ಜೊತೆ ಸಂವಾದ ನಡೆಸೋ ವೇದಿಕೆ. ಇಂಥಾ ಕಾರ್ಯಕ್ರಮದ ಮೂರನೇ ಆವೃತ್ತಿ ಇಂದು ನಡೆಯಲಿದೆ.

ದೆಹಲಿಯಲ್ಲಿಂದು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ: ಯೆಸ್, ಪ್ರತಿ ವರ್ಷದಂತೆ ಈ ಬಾರಿಯೂ ಪ್ರಧಾನಿ ಮೋದಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ. ದೆಹಲಿಯ ತಾಲ್​ಕಟೋರ ಇಂಡೋರ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲಿದ್ದು, ದೇಶದ ವಿವಿಧ ಭಾಗಗಳಿಂದ ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ನಮ್ಮ ರಾಜ್ಯದಿಂದ ಒಟ್ಟು 42 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಪರೀಕ್ಷಾ ಪೇ ಚರ್ಚಾದಲ್ಲಿ ಭಾಗವಹಿಸಲಿದ್ದಾರೆ.

ತುಮಕೂರು ಜಿಲ್ಲೆಯಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಶಿರಾ ತಾಲೂಕಿನ ಚಿಕ್ಕನಹಳ್ಳಿ ಶಾಲೆಯ ವಿದ್ಯಾರ್ಥಿ ಸಾಗರ್ ಹಾಗೂ ಚಂಗಾವರ ಹೈಸ್ಕೂಲ್​ನ ವಿದ್ಯಾರ್ಥಿನಿ ದೀಪಿಕಾ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ತುಂಬಾ ಎಕ್ಸೈಟ್ ಆಗಿರೋ ಸಾಗರ್ ಮತ್ತು ದೀಪಿಕಾ ಪ್ರಧಾನಿ ಮೋದಿಗೆ ಪ್ರಶ್ನೆ ಕೇಳಲು ಉತ್ಸುಕರಾಗಿದ್ದಾರೆ.

ಇನ್ನು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ಆರ್​ಎಂಎಸ್​ಎ ಶಾಲೆಯ ವಿದ್ಯಾರ್ಥಿನಿ ಶ್ವೇತಾ ಕೂಡ ಆಯ್ಕೆಯಾಗಿದ್ದಾಳೆ. ತಾನು ಆಯ್ಕೆಯಾಗಿರೋದಕ್ಕೆ ವಿದ್ಯಾರ್ಥಿನಿ ಸಂತಸ ವ್ಯಕ್ತಪಡಿಸಿದ್ದಾಳೆ.

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ಸರ್ಕಾರಿ ಪ್ರೌಢಶಾಲೆಯ ಗುಂಡಮ್ಮ ಹಾಗೂ ಜ್ಞಾನ ಸಂಜೀವಿನಿ ಶಾಲೆಯ ಯಶಸ್ವಿನಿ ಭಾಗವಹಿಸಲಿದ್ದು, ಅವಕಾಶ ಸಿಕ್ಕರೆ ಪ್ರವಾಹ ಪರಿಹಾರ ಹಾಗೂ ಪರೀಕ್ಷಾ ಭಯದ ಕುರಿತು ಪ್ರಶ್ನೆ ಕೇಳುವ ಆಶಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಭೈರನಾಯಕನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಶವಂತ್ ಹಾಗೂ ಹೆಬ್ಬಗೋಡಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಭಾವನಾ ಕೂಡ ಆಯ್ಕೆಯಾಗಿದ್ದಾರೆ.

ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವೇದಾ ಆಯ್ಕೆಯಾಗಿದ್ದಾಳೆ. ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಧೀರಜ್ ಗೌಡ ಕೂಡ ಆಯ್ಕೆಯಾಗಿದ್ದಾನೆ.

ಅಂದ್ಹಾಗೆ ಪರೀಕ್ಷಾ​ ಪೇ ಚರ್ಚಾ ಕಾರ್ಯಕ್ರಮಕ್ಕೆ ಆಯ್ಕೆಯಾಗಲು ಪ್ರಬಂಧ ಮಂಡಿಸುವ ಮಾನದಂಡವನ್ನ ಇಡಲಾಗಿತ್ತು. ಅದರಂತೆ ಕರ್ನಾಟಕದಿಂದ ಒಟ್ಟು 15 ಸಾವಿರ ವಿದ್ಯಾರ್ಥಿಗಳು ಪ್ರಬಂಧ ಮಂಡಸಿದ್ದರು. ಅವರಲ್ಲಿ 42 ವಿದ್ಯಾರ್ಥಿಗಳನ್ನ ಆಯ್ಕೆ ಮಾಡಲಾಗಿದೆ.

ಇಂದು ಬೆಳಗ್ಗೆ 11 ಗಂಟೆಯಿಂದ ದೆಹಲಿಯ ತಾಲ್​ಕಟೋರಾ ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲಿದ್ದು, ದೂರದರ್ಶನ, ಯೂಟ್ಯೂಬ್ ಹಾಗೂ ನಮೋ ಌಪ್​ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿರೋ ಪ್ರಧಾನಿ ಮೋದಿ ತಮ್ಮ ಅನುಭವದ ಆಧಾರದಲ್ಲಿ ಮಕ್ಕಳಿಗೆ ಟಿಪ್ಸ್​ ನೀಡಲಿದ್ದಾರೆ.