AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parkash Singh Badal: ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನ

ಪಂಜಾಬ್​ನ ಮಾಜಿ ಮುಖ್ಯಮಂತ್ರಿ, ಶಿರೋಮಣಿ ಅಕಾಲಿದಳದ ಸಂಸ್ಥಾಪಕ ಪ್ರಕಾಶ್ ಸಿಂಗ್ ಬಾದಲ್ ಮಂಗಳವಾರ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು.

Parkash Singh Badal: ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನ
ಪ್ರಕಾಶ್ ಸಿಂಗ್ ಬಾದಲ್
Ganapathi Sharma
|

Updated on:Apr 25, 2023 | 9:39 PM

Share

ನವದೆಹಲಿ: ಪಂಜಾಬ್​ನ ಮಾಜಿ ಮುಖ್ಯಮಂತ್ರಿ, ಶಿರೋಮಣಿ ಅಕಾಲಿದಳದ (Shiromani Akali Dal) ಸಂಸ್ಥಾಪಕ ಪ್ರಕಾಶ್ ಸಿಂಗ್ ಬಾದಲ್ (Parkash Singh Badal) ಮಂಗಳವಾರ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಏಪ್ರಿಲ್ 21 ರಂದು ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಐದು ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಪ್ರಕಾಶ್ ಸಿಂಗ್ ಬಾದಲ್ ಅವರು ಕಳೆದ ವರ್ಷ ನಡೆದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಹಿರಿಯ ಅಭ್ಯರ್ಥಿಯಾಗಿದ್ದರು. ಕಳೆದ ವರ್ಷ ಜೂನ್​ನಲ್ಲಿಯೂ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ವರ್ಷ ಅವರಿಗೆ ಕೋವಿಡ್-19 ಸೋಂಕು ಸಹ ತಗುಲಿತ್ತು.

ಬಾದಲ್ ನೇತೃತ್ವದ ಶಿರೋಮಣಿ ಅಕಾಲಿದಳ ಪಂಜಾಬ್​ನಲ್ಲಿ ಎನ್​ಡಿಎ ಮಿತ್ರಪಕ್ಷವಾಗಿತ್ತು. 2020ರಲ್ಲಿ ಕೇಂದ್ರ ಸರ್ಕಾರ ಮೂರು ಕೃಷಿ ಮಸೂದೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಿದ್ದಾಗ ಅದನ್ನು ಪ್ರತಿಭಟಿಸಿ ಎನ್​ಡಿಎ ಮೈತ್ರಿಕೂಟದಿಂದ ಹೊರನಡೆದಿತ್ತು.

ರಾಜಕೀಯ ಜೀವನದಲ್ಲಿ ಹಲವು ದಾಖಲೆ

ಬಾದಲ್ ಅವರು ರಾಜಕೀಯ ಇತಿಹಾಸದಲ್ಲಿ ಹಲವು ದಾಖಲೆಗಳನ್ನು ಮಾಡಿದ್ದಾರೆ. 1952ರಲ್ಲಿ ಅವರು ಕಿರಿಯ ಸರಪಂಚ್ ಆಗಿ ಆಯ್ಕೆಯಾಗಿದ್ದರು. ಆಗ ಅವರು ಬಾದಲ್ ಗ್ರಾಮದಿಂದ ಚುನಾಯಿತರಾಗಿದ್ದರು. 1970ರಲ್ಲಿ ಅವರು ರಾಜ್ಯದ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಆಗ ಅವರಿಗೆ 43 ವರ್ಷ ವಯಸ್ಸಾಗಿತ್ತು. 2012ರಲ್ಲಿ ಮುಖ್ಯಮಂತ್ರಿಯಾದಾಗ ಪಂಜಾಬ್​ನ ಅತ್ಯಂತ ಹಿರಿಯ ಮುಖ್ಯಮಂತ್ರಿ ಎಂಬ ದಾಖಲೆಯನ್ನೂ ನಿರ್ಮಿಸಿದ್ದರು. ಆಗ ಅವರ ವಯಸ್ಸು 85 ವರ್ಷ ಆಗಿತ್ತು.

ಇದನ್ನೂ ಓದಿ: ಏಪ್ರಿಲ್ 27ರಂದು ಚೀನಾ- ಭಾರತ ರಕ್ಷಣಾ ಸಚಿವರ ಭೇಟಿ; ಗಾಲ್ವಾನ್ ಸಂಘರ್ಷ ನಂತರ ಇದು ಮೊದಲನೇ ಸಭೆ

ಪಂಜಾಬ್ ಪ್ರಾಂತ್ಯದ ಅಬುಲ್ ಖುರಾನಾದಲ್ಲಿ 1927 ರ ಡಿಸೆಂಬರ್ 8 ರಂದು ಬಾದಲ್ ಅವರು ಜನಿಸಿದ್ದರು. ಅವರು 1970 ರಿಂದ 71, 1977 ರಿಂದ 80, 1997 ರಿಂದ 2002 ಹಾಗೂ 2007 ರಿಂದ 2012 ಮತ್ತು 2012 ರಿಂದ 2017 ರವರೆಗೆ 5 ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿದ್ದರು. ಒಂದು ಬಾರಿ ಲೋಕಸಭೆಯ ಸದಸ್ಯರೂ ಆಗಿದ್ದರು. 1997ರಲ್ಲಿ ಕೆಲವು ತಿಂಗಳು ಕೇಂದ್ರ ಕೃಷಿ ಸಚಿವರೂ ಆಗಿದ್ದರು.

20 ನೇ ವಯಸ್ಸಿನಲ್ಲೇ ರಾಜಕೀಯ ಜೀವನ ಆರಂಭಿಸಿದ್ದ ಅವರು 1957ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 1972, 1980 ಮತ್ತು 2002ರಲ್ಲಿ ವಿರೋಧ ಪಕ್ಷದ ನಾಯಕರೂ ಆಗಿದ್ದರು. 10 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 1995ರಿಂದ 2008ರವರೆಗೆ ಶಿರೋಮಣಿ ಅಕಾಲಿದಳದ ಅಧ್ಯಕ್ಷರೂ ಆಗಿದ್ದರು. ಇದಾದ ನಂತರ ಅವರ ಪುತ್ರ ಸುಖಬೀರ್ ಸಿಂಗ್ ಬಾದಲ್ ಪಕ್ಷದ ಮುಖ್ಯಸ್ಥರಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:19 pm, Tue, 25 April 23

ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್