Budget 2023: ಮಂಗಳವಾರ ಸಂಸತ್ತಿನ ಜಂಟಿ ಅಧಿವೇಶನ, ಫೆ 1 ರಂದು ಕೇಂದ್ರ ಬಜೆಟ್ ಮಂಡನೆ -NDA ಕಾರ್ಯತಂತ್ರ ಸಭೆ ನಂತರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ

ಸರ್ವ ಪಕ್ಷಗಳ ಸಭೆಯಲ್ಲಿ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಪಿಯೂಷ್ ಗೋಯಲ್, ಅರ್ಜುನ, ರಾಮ್ ಮೇಘವಾಲ್ ಮತ್ತು ವಿ ಮುರಳೀಧರನ್ ಸೇರಿದಂತೆ 27 ಪಕ್ಷದ 37 ನಾಯಕರು ಉಪಸ್ಥಿತರಿದ್ದರು.

Budget 2023: ಮಂಗಳವಾರ ಸಂಸತ್ತಿನ ಜಂಟಿ ಅಧಿವೇಶನ, ಫೆ 1 ರಂದು ಕೇಂದ್ರ ಬಜೆಟ್ ಮಂಡನೆ -NDA ಕಾರ್ಯತಂತ್ರ ಸಭೆ ನಂತರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ
ಫೆ 1 ರಂದು ಕೇಂದ್ರ ಬಜೆಟ್ ಮಂಡನೆ: ಸಚಿವ ಪ್ರಲ್ಹಾದ್ ಜೋಶಿ
Follow us
| Updated By: ಸಾಧು ಶ್ರೀನಾಥ್​

Updated on:Jan 30, 2023 | 7:28 PM

ನವದೆಹಲಿ: ನಾಳೆ ಮಂಗಳವಾರದಿಂದ ಸಂಸತ್ ಬಜೆಟ್ ಅಧಿವೇಶನ (Union Budget) ಆರಂಭವಾಗಲಿದ್ದು, ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಮಾಡಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಬಜೆಟ್ ಅಧಿವೇಶನಕ್ಕೂ ಮುನ್ನ ಸುಗಮ ಕಲಾಪಕ್ಕಾಗಿ ಸಂಪ್ರದಾಯದಂತೆ ಇಂದು ಸಂಸತ್ ಭವನದ ಸಂಕೀರ್ಣದಲ್ಲಿ ಸರ್ವ ಪಕ್ಷ ನಾಯಕರ ಸಭೆ ನಡೆಯಿತು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಸಂಸತ್ ಬಜೆಟ್​​  ಅಧಿವೇಶನ (Parliament Budget Session) ಆರಂಭವಾಗಲಿದೆ. ಅಧಿವೇಶನದ ಮೊದಲ ದಿನವೇ ಉಭಯ ಸದನಗಳಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು ಎಂದರು.

2023 – 24 ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿದ್ದಾರೆ. ಬಳಿಕ ರಾಜ್ಯಸಭೆಯಲ್ಲಿ ಬಜೆಟ್ ಮಂಡನೆಯಾಗಲಿದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಇನ್ನು ಗುರುವಾರದಿಂದ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಚರ್ಚೆ ಆರಂಭವಾಗಲಿದೆ. ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಉತ್ತರಿಸಲಿದ್ದಾರೆ. ವಂದನಾ ನಿರ್ಣಯ ಹಾಗೂ ಪ್ರಧಾನಿ ಅವರ ಉತ್ತರ ಸೇರಿದಂತೆ ಅಧಿವೇಶನದ ಮೊದಲ ಭಾಗದ ಕಾರ್ಯ ಕಲಾಪಗಳು ಫೆಬ್ರವರಿ 13 ರ ವರೆಗೂ ನಡೆಯಲಿವೆ.

ಮಧ್ಯ ವಿರಾಮದ ಬಳಿಕ ಬಜೆಟ್ ಅಧಿವೇಶನದ ಎರಡನೇ ಭಾಗವು ಮಾರ್ಚ್ 13 ರಂದು ಪ್ರಾರಂಭವಾಗಿ ಏಪ್ರಿಲ್ 6 ರವರೆಗೆ ನಡೆಯಲಿದೆ. ವಿವಿಧ ಸಚಿವಾಲಯಗಳಿಗೆ ಅನುದಾನಕ್ಕಾಗಿ ಬೇಡಿಕೆಯ ಕುರಿತು ಚರ್ಚೆ ನಡೆಯಲಿದ್ದು, ಕೇಂದ್ರ ಬಜೆಟ್ ಅನ್ನು ಅಂಗೀಕರಿಸುವ ಕಾರ್ಯಕಲಾಪಗಳು ನಡೆಯಲಿವೆ. ಅಲ್ಲದೇ ಇತರ ಶಾಸಕಾಂಗದ ವ್ಯವಹಾರಗಳು, ವಿಧೇಯಕಗಳ ಮೇಲಿನ ಚರ್ಚೆಯನ್ನೂ ಸಹ ಸರ್ಕಾರವು ತೆಗೆದುಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

ಸರ್ವ ಪಕ್ಷಗಳ ಸಭೆಯಲ್ಲಿ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಪಿಯೂಷ್ ಗೋಯಲ್, ಅರ್ಜುನ, ರಾಮ್ ಮೇಘವಾಲ್ ಮತ್ತು ವಿ ಮುರಳೀಧರನ್ ಸೇರಿದಂತೆ 27 ಪಕ್ಷದ 37 ನಾಯಕರು ಉಪಸ್ಥಿತರಿದ್ದರು.

ಡಿಎಂಕೆ ನಾಯಕ ಟಿ.ಆರ್. ಬಾಲು, ಟಿಎಂಸಿ ನಾಯಕರು, ಸುದೀಪ್ ಬಂಡೋಪಾಧ್ಯಾಯ, ಟಿಆರ್‌ಎಸ್ ನಿಂದ ಕೆ ಕೇಶವ ರಾವ್, ವೈಎಸ್‌ಆರ್ ಕಾಂಗ್ರೆಸ್‌ನಿಂದ ವಿಜಯಸಾಯಿ ರೆಡ್ಡಿ, ನ್ಯಾಷನಲ್ ಕಾನ್ಫರೆನ್ಸ್‌ನಿಂದ ಫಾರೂಕ್ ಅಬ್ದುಲ್ಲಾ, ಆರ್‌ಜೆಡಿಯಿಂದ ಪ್ರೊಫೆಸರ್ ಮನೋಜ್ ಝಾ, ಜೆಡಿಯುನ ರಾಮ್ ನಾಥ್ ಠಾಕೂರ್ ಹಾಗೂ ಶಿವಸೇನೆ (ಉದ್ಧವ್ ಠಾಕ್ರೆ) ಅವರ ಪರವಾಗಿ ಪ್ರಿಯಾಂಕಾ ಚತುರ್ವೇದಿ ಪ್ರತಿನಿಧಿಸಿದ್ದರು.

ಕಾಂಗ್ರೆಸ್ ನಾಯಕರು ಸಭೆಗೆ ಗೈರುಹಾಜರಾಗಿದ್ದರು. ಮೂಲಗಳ ಪ್ರಕಾರ ಮಲ್ಲಿಕಾರ್ಜುನ ಖರ್ಗೆ ಮತ್ತು ಅಧೀರ್ ರಂಜನ್ ಚೌಧರಿ ಇಬ್ಬರೂ ಶ್ರೀನಗರದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿರುವ ಕಾರಣ ಸಭೆಗೆ ಬಂದಿಲ್ಲ ಎಂದು ಹೇಳಲಾಗಿದೆ.

ಎನ್.ಡಿ.ಎ ನಾಯಕರ ಜೊತೆ ಪ್ರತ್ಯೇಕ ಸಭೆ : ಪ್ರತಿಪಕ್ಷಗಳ ಎದುರಿಸಲು ಕಾರ್ಯತಂತ್ರ

ನಾಳೆ ಬಜೆಟ್ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಎನ್‌ಡಿಎ ನಾಯಕರೊಂದಿಗೆ ಸಭೆ ನಡೆಸಿದರು. ಅಧಿವೇಶನವನ್ನು ಯಶಸ್ವಿಯಾಗಿ ನಡೆಸಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಚರ್ಚೆ ನಡೆದ ಈ ಸಭೆಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹಾಗೂ ಎನ್.ಡಿ.ಎ ನಾಯಕರು ಭಾಗಿಯಾಗಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:27 pm, Mon, 30 January 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು