AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 31ರಿಂದ ಏಪ್ರಿಲ್ 4ರವರೆಗೆ ಸಂಸತ್ತಿನ ಬಜೆಟ್ ಅಧಿವೇಶನ; ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

2025ರ ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದೆ. ಬಜೆಟ್ ಅಧಿವೇಶನದ ಮೊದಲ ಭಾಗದಲ್ಲಿ ಜನವರಿ 31ರಿಂದ ಫೆಬ್ರವರಿ 13ರವರೆಗೆ 9 ಅಧಿವೇಶನಗಳನ್ನು ನಡೆಸಲಾಗುವುದು. ಜನವರಿ 31ರಂದು ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಎರಡೂ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಲಿದ್ದಾರೆ. ನಿರ್ಮಲಾ ಸೀತಾರಾಮನ್ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಲಿದ್ದಾರೆ.

ಜನವರಿ 31ರಿಂದ ಏಪ್ರಿಲ್ 4ರವರೆಗೆ ಸಂಸತ್ತಿನ ಬಜೆಟ್ ಅಧಿವೇಶನ; ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ
New Parliament
ಸುಷ್ಮಾ ಚಕ್ರೆ
|

Updated on: Jan 18, 2025 | 4:40 PM

Share

ನವದೆಹಲಿ: ಜನವರಿ 31ರಿಂದ ಏಪ್ರಿಲ್ 4ರವರೆಗೆ ಸಂಸತ್ತಿನ ಬಜೆಟ್ ಅಧಿವೇಶನ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ತಮ್ಮ 8ನೇ ಬಜೆಟ್ ಮಂಡಿಸಲಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಎಕ್ಸ್​ನಲ್ಲಿನ ಪೋಸ್ಟ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನವರಿ 31ರಿಂದ ಏಪ್ರಿಲ್ 4ರವರೆಗೆ 2025ರ ಬಜೆಟ್ ಅಧಿವೇಶನಕ್ಕಾಗಿ ಸಂಸತ್ತಿನ ಎರಡೂ ಸದನಗಳನ್ನು ಕರೆಯಲು ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಜನವರಿ 31ರಂದು ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ. 2025-26ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು ಲೋಕಸಭೆಯಲ್ಲಿ ಮಂಡಿಸಲಾಗುವುದು. ಇದರ ನಂತರ ಸಂಸತ್ತು ಬಜೆಟ್ ಪ್ರಸ್ತಾವನೆಗಳನ್ನು ಪರಿಶೀಲಿಸಲು ವಿರಾಮ ತೆಗೆದುಕೊಳ್ಳುತ್ತದೆ. ವಿವಿಧ ಸಚಿವಾಲಯಗಳ ಅನುದಾನಗಳ ಬೇಡಿಕೆಗಳನ್ನು ಚರ್ಚಿಸಲು ಮತ್ತು ಬಜೆಟ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಾರ್ಚ್ 10ರಿಂದ ಮತ್ತೆ ಸಭೆ ಸೇರುತ್ತದೆ.

ಇದನ್ನೂ ಓದಿ: ಮಹಿಳಾ ತೆರಿಗೆ ಪಾವತಿದಾರರು, ಮಹಿಳಾ ಸಂಬಂಧಿತ ಯೋಜನೆಗಳಿಗೆ ಬಜೆಟ್​ನಲ್ಲಿ ಪ್ರೋತ್ಸಾಹ ಸಿಗುವ ಸಾಧ್ಯತೆ

ಸಂಸತ್ ಅಧಿವೇಶನವು ಏಪ್ರಿಲ್ 4ರಂದು ಮುಕ್ತಾಯಗೊಳ್ಳಲಿದೆ. ಈ ಸಂಪೂರ್ಣ ಬಜೆಟ್ ಅಧಿವೇಶನವು 27 ಅಧಿವೇಶನಗಳನ್ನು ಹೊಂದಿರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ