ಎರಡು ದಶಕದ ಹಿಂದೆ ಸಂಸತ್‌ ಮೇಲೆ ನಡೆದ ಭಯೋತ್ಪಾದನಾ ದಾಳಿ ದಿನವೇ ಮತ್ತೆ ಭದ್ರತಾ ಲೋಪ

ಎರಡು ದಶಕದ ಹಿಂದೆ ಸಂಸತ್(Parliament)ಮೇಲೆ ನಡೆದ ಭಯೋತ್ಪಾದನಾ ದಾಳಿಯನ್ನು ನೆನಪಿಸುವಂತಹ ಘಟನೆಯೊಂದು ಇಂದು ನಡೆದಿದೆ. ಮತ್ತೆ ಸಂಸತ್​ನಲ್ಲಿ ಭದ್ರತಾ ಲೋಪ ಉಂಟಾಗಿದೆ. ಇಂದು ಲೋಕಸಭೆಯ ಕಲಾಪದಲ್ಲಿ ಇದ್ದಕ್ಕಿದ್ದಂತೆ ಇಬ್ಬರು ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಅಶ್ರುವಾಯು ಸಿಡಿಸಿದ್ದಾರೆ. ಸ್ಮೋಕ್​ಗನ್​ನಿಂದ ಹಳದಿ ಹೊಗೆ ಬರುತ್ತಿದ್ದು, ಗನ್ ಪೌಡರ್ ವಾಸನೆ ಕೂಡ ಬರುತ್ತಿತ್ತು.ಈ ಘಟನೆಯಿಂದಾಗಿ ಸಂಸತ್ತಿನಲ್ಲಿ ಗದ್ದಲ ಉಂಟಾಯಿತು. ಈ ಘಟನೆಯು ಡಿಸೆಂಬರ್ 13, 2001 ರಂದು ಸಂಸತ್ತಿನ ಮೇಲಿನ ದಾಳಿಯ ನೆನಪುಗಳನ್ನು ಪುನರುಜ್ಜೀವನಗೊಳಿಸಿತು. 2001ರಲ್ಲಿ ಸಂಸತ್ತಿನ ಮೇಲಿನ ದಾಳಿಯಲ್ಲಿ 9 ಮಂದಿ ಹುತಾತ್ಮರಾಗಿದ್ದರು.

ಎರಡು ದಶಕದ ಹಿಂದೆ ಸಂಸತ್‌ ಮೇಲೆ ನಡೆದ ಭಯೋತ್ಪಾದನಾ ದಾಳಿ ದಿನವೇ ಮತ್ತೆ ಭದ್ರತಾ ಲೋಪ
ಸಂಸತ್ ಭವನImage Credit source: Oneindia
Follow us
ನಯನಾ ರಾಜೀವ್
|

Updated on: Dec 13, 2023 | 2:23 PM

ಎರಡು ದಶಕದ ಹಿಂದೆ ಸಂಸತ್(Parliament)ಮೇಲೆ ನಡೆದ ಭಯೋತ್ಪಾದನಾ ದಾಳಿಯನ್ನು ನೆನಪಿಸುವಂತಹ ಘಟನೆಯೊಂದು ಇಂದು ನಡೆದಿದೆ. ಮತ್ತೆ ಸಂಸತ್​ನಲ್ಲಿ ಭದ್ರತಾ ಲೋಪ ಉಂಟಾಗಿದೆ. ಇಂದು ಲೋಕಸಭೆಯ ಕಲಾಪದಲ್ಲಿ ಇದ್ದಕ್ಕಿದ್ದಂತೆ ಇಬ್ಬರು ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಅಶ್ರುವಾಯು ಸಿಡಿಸಿದ್ದಾರೆ. ಸ್ಮೋಕ್​ಗನ್​ನಿಂದ ಹಳದಿ ಹೊಗೆ ಬರುತ್ತಿದ್ದು, ಗನ್ ಪೌಡರ್ ವಾಸನೆ ಕೂಡ ಬರುತ್ತಿತ್ತು.ಈ ಘಟನೆಯಿಂದಾಗಿ ಸಂಸತ್ತಿನಲ್ಲಿ ಗದ್ದಲ ಉಂಟಾಯಿತು. ಈ ಘಟನೆಯು ಡಿಸೆಂಬರ್ 13, 2001 ರಂದು ಸಂಸತ್ತಿನ ಮೇಲಿನ ದಾಳಿಯ ನೆನಪುಗಳನ್ನು ಪುನರುಜ್ಜೀವನಗೊಳಿಸಿತು. 2001ರಲ್ಲಿ ಸಂಸತ್ತಿನ ಮೇಲಿನ ದಾಳಿಯಲ್ಲಿ 9 ಮಂದಿ ಹುತಾತ್ಮರಾಗಿದ್ದರು.

ದೆಹಲಿ ಪೊಲೀಸರು ಹೇಳಿದ್ದೇನು? ಈ ಘಟನೆಯ ತನಿಖೆ ನಡೆಯುತ್ತಿದೆ. ಪ್ರಾಥಮಿಕ ವಿಚಾರಣೆ ನಡೆಸಲಾಗುತ್ತಿದೆ. ಒಳಗೆ ಜಿಗಿದ ಇಬ್ಬರಿಗೆ ಯಾರೊಂದಿಗಾದರೂ ವೈಯಕ್ತಿಕ ದ್ವೇಷವಿತ್ತೇ? ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಶಿವಸೇನೆ ಸಂಸದ ಅರವಿಂದ್ ಸಾವಂತ್ ಹೇಳಿದ್ದಾರೆ. ಅವರು ಕೆಳಗೆ ಹಾರಿದಾಗ, ಲೋಕಸಭೆಯಲ್ಲಿ ಹಿಂದಿನ ಬೆಂಚುಗಳು ಖಾಲಿಯಾಗಿದ್ದವು, ಆದ್ದರಿಂದ ಅವರು ಸಿಕ್ಕಿಬಿದಿದ್ದಾರೆ. ಈ ಘಟನೆ ನಡೆದಾಗ ಇಬ್ಬರು ಸಚಿವರು ಕೂಡ ಸದನದಲ್ಲಿ ಹಾಜರಿದ್ದರು. ಓರ್ವ ಪುರುಷ ಮತ್ತು ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಓದಿ: ಲೋಕಸಭೆಯಲ್ಲಿ ಭದ್ರತಾ ಲೋಪ: ಕಲಾಪ ವೇಳೆ ನುಗ್ಗಿ ಅಶ್ರುವಾಯು ಸಿಡಿಸಿದ ಇಬ್ಬರು ವ್ಯಕ್ತಿಗಳು ವಶಕ್ಕೆ

22 ವರ್ಷಗಳ ಹಿಂದೆ ಏನಾಗಿತ್ತು? ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್ ಎ ತೊಯ್ಬಾ ಹಾಗೂ ಜೈಷ್-​ಎ-ಮೊಹಮ್ಮದ್​ನ ಭಯೋತ್ಪಾದಕರು 2001ರ ಡಿಸೆಂಬರ್ 13ರಂದು ಸಂಸತ್​ ಮೇಲೆ ದಾಳಿ ನಡೆಸಿದ್ದರು. ಈ ಭಯೋತ್ಪಾದಕ ದಾಳಿಯಲ್ಲಿ ದೆಹಲಿ ಪೊಲೀಸರು ಸೇರಿದಂತೆ 9 ಮಂದಿ ಹುತಾತ್ಮರಾಗಿದ್ದರು. ಭದ್ರತಾ ಪಡೆಗಳು ಎಲ್ಲಾ ಐವರು ಉಗ್ರರನ್ನು ಹತ್ಯೆಗೈದಿತ್ತು.

ಈ ದಾಳಿಯಲ್ಲಿ ದೆಹಲಿ ಪೊಲೀಸ್‌ನ ಏಳು ಪೊಲೀಸರು, ಇಬ್ಬರು ಸಂಸತ್ ಭದ್ರತಾ ಸಿಬ್ಬಂದಿ ಹಾಗೂ ಓರ್ವ ಕಾರ್ಮಿಕರು ಹುತಾತ್ಮರಾಗಿದ್ದರು. ದೇಶದ ಶಕ್ತಿ ಕೇಂದ್ರ ಸಂಸತ್ ಭವನದ ಮೇಲೆ ಪಾಕಿಸ್ತಾನ ಬೆಂಬಲಿತ ಉಗ್ರರು ಭಯಾನಕ ದಾಳಿ ನಡೆಸಿದ ಇಂದಿಗೆ 22 ವರ್ಷಗಳು ಕಳೆದಿವೆ. ಹೀಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ದಾಳಿಯಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಸಂಸತ್ ಭವನದ ಆವರಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಇತರ ನಾಯಕರು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ 1 ನಿಮಿಷ ಮೌನಾಚರಣೆ ಮಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ