AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament Monsoon Session 2021: ಸಂಸತ್ ಮುಂಗಾರು ಅಧಿವೇಶನದಲ್ಲಿ ವಿಪಕ್ಷಗಳ ಗದ್ದಲ; ಉಭಯ ಸದನಗಳ ಕಲಾಪ ಮುಂದೂಡಿಕೆ

ವಿರೋಧ ಪಕ್ಷದ ಸಂಸದರ ಕೋಲಾಹಲದ ನಡುವೆ ಲೋಕಸಭೆಯನ್ನು ಮಧ್ಯಾಹ್ನ 2 ರವರೆಗೆ ಮುಂದೂಡಿದೆ. ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 12.25 ರವರೆಗೆ ಮುಂದೂಡಲಾಗಿದೆ.

Parliament Monsoon Session 2021: ಸಂಸತ್ ಮುಂಗಾರು ಅಧಿವೇಶನದಲ್ಲಿ ವಿಪಕ್ಷಗಳ ಗದ್ದಲ; ಉಭಯ ಸದನಗಳ ಕಲಾಪ ಮುಂದೂಡಿಕೆ
ರಾಜ್ಯಸಭೆ ಕಲಾಪ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 19, 2021 | 12:45 PM

Share

ದೆಹಲಿ: ಸಂಸತ್ ಮುಂಗಾರು ಅಧಿವೇಶನದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳನ್ನು ಸೋಮವಾರ ಮುಂದೂಡಲಾಯಿತು. ಪ್ರಧಾನಿ ಮೋದಿ ಹೊಸ ಮಂತ್ರಿಗಳನ್ನು ಪರಿಚಯಿಸುತ್ತಿದ್ದಾಗ ವಿಪಕ್ಷಗಳು ಗದ್ದಲವುಂಟು ಮಾಡಿವೆ. ವಿರೋಧ ಪಕ್ಷದ ಸಂಸದರ ಕೋಲಾಹಲದ ನಡುವೆ ಲೋಕಸಭೆಯನ್ನು ಮಧ್ಯಾಹ್ನ 2 ರವರೆಗೆ ಮುಂದೂಡಿದೆ. ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 12.25 ರವರೆಗೆ ಮುಂದೂಡಲಾಗಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ವಿಪಕ್ಷಗಳ ಗದ್ದಲದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು. “ಲೋಕಸಭೆಯಲ್ಲಿ ಕಾಂಗ್ರೆಸ್ ನಡವಳಿಕೆ ದುಃಖಕರ, ದುರದೃಷ್ಟಕರ, ಅನಾರೋಗ್ಯಕರ” ಎಂದು ಸಿಂಗ್ ಹೇಳಿದ್ದಾರೆ. . ಅಧಿವೇಶನ ಆರಂಭಕ್ಕೆ ಮುನ್ನ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸಂಸತ್ತಿನಲ್ಲಿ ಎಲ್ಲಾ ವಿಷಯಗಳ ಬಗ್ಗೆ ಆರೋಗ್ಯಕರ ರೀತಿಯಲ್ಲಿ ಚರ್ಚಿಸಲಾಗುವುದು ಎಂದು ಆಶಿಸಿದರು. “ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಪ್ರತಿಯೊಂದು ವಿಷಯ ಮತ್ತು ಅದರ ವಿರುದ್ಧ ನಮ್ಮ ಹೋರಾಟವನ್ನು ಚರ್ಚಿಸಲಾಗುವುದು ಎಂದು ನಾನು ಭಾವಿಸುತ್ತೇನೆ. ಸಾಂಕ್ರಾಮಿಕ ಪರಿಸ್ಥಿತಿಯ ಕುರಿತು ವಿಷಯ ಮಂಡನೆಗೆ ಎಲ್ಲ ನಾಯಕರು ನಾಳೆ ಸಂಜೆ 4 ಗಂಟೆಗೆ ಅಧಿವೇಶನಕ್ಕೆ ಹಾಜರಾಗಬೇಕೆಂದು ನಾನು ಬಯಸುತ್ತೇನೆ. ಇದನ್ನು ಸದನದಲ್ಲಿಯೂ ಚರ್ಚಿಸಬಹುದು ”ಎಂದು ಅವರು ಹೇಳಿದರು.

ಮುಂಗಾರು ಅಧಿವೇಶನದ ಅಪ್​ಡೇಟ್ಸ್ ರಾಜ್ಯಸಭೆಯಲ್ಲಿ ಸಂಸತ್ ಸದಸ್ಯರು ಈ ವರ್ಷ ನಿಧನರಾದ ಸಂಸದರು ಮತ್ತು ವ್ಯಕ್ತಿಗಳಿಗೆ ಗೌರವ ಸಲ್ಲಿಸಿದ್ದಾರೆ..

ಲೋಕಸಭೆಯಲ್ಲಿ ನೂತನ  ಸಚಿವರನ್ನು ಪರಿಚಯಿಸಿದ ಮೋದಿ ಎಷ್ಟೋ ಮಹಿಳೆಯರು, ದಲಿತರು, ಬುಡಕಟ್ಟು ಜನಾಂಗದವರು ಮಂತ್ರಿಗಳಾಗಿದ್ದರಿಂದ ಸಂಸತ್ತಿನಲ್ಲಿ ಉತ್ಸಾಹ ಇರುತ್ತದೆ ಎಂದು ನಾನು ಭಾವಿಸಿದ್ದೇನೆ. ಈ ಬಾರಿ ಕೃಷಿ ಮತ್ತು ಗ್ರಾಮೀಣ ಹಿನ್ನೆಲೆಯ ಒಬಿಸಿ ಸಮುದಾಯದ ನಮ್ಮ ಸಹೋದ್ಯೋಗಿಗಳಿಗೆ ಕೌನ್ಸಿಲ್ ಆಫ್ ಮಂತ್ರಿಗಳಲ್ಲಿ ಸ್ಥಾನ ನೀಡಲಾಗಿದೆ ಎಂದು ನೂತನ ಸಚಿವರನ್ನು ಪರಿಚಯಿಸಿದ ಮೋದಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಸಚಿವರು ಸಂಸದರಾಗಿ ಪ್ರಮಾಣ ವಚನ ಸ್ವೀಕಾರ ವೈಎಸ್‌ಆರ್‌ಸಿಪಿಯ ಮದ್ದಿಲಾ ಗುರುಮೂರ್ತಿ, ಬಿಜೆಪಿಯ ಮಂಗಲ್ ಸುರೇಶ್ ಅಂಗಡಿ, ಐಯುಎಂಎಲ್‌ನ ಅಬ್ದುಸಮದ್ ಸಮಅದನಿ ಮತ್ತು ಕಾಂಗ್ರೆಸ್ ಪಕ್ಷದ ವಿಜಯಕುಮಾರ್ (ಅಲಿಯಾಸ್) ವಿಜಯ ವಸಂತ್ ಅವರು ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿ (ಸಂಸದರು) ಪ್ರಮಾಣ ವಚನ ಸ್ವೀಕರಿಸಿದರು.

ಸೈಕಲ್​ನಲ್ಲಿ ಬಂದ ಟಿಎಂಸಿ ಸಂಸದರು

ಇಂಧನ ಬೆಲೆ ಏರಿಕೆಯನ್ನು ಪ್ರತಿಭಟಿಸಿ ಟಿಎಂಸಿ ಸಂಸದರು ಸೈಕಲ್  ತುಳಿಯುತ್ತಾ ಸಂಸತ್​​ಗೆ ಆಗಮಿಸಿದ್ದಾರೆ.

ಇದನ್ನೂ ಓದಿ:  Parliament Monsoon Session 2021 ತೀಕ್ಷ್ಣವಾದ ಪ್ರಶ್ನೆಗಳನ್ನು ಕೇಳಿ, ಸರ್ಕಾರಕ್ಕೆ ಪ್ರತಿಕ್ರಿಯಿಸಲು ಅವಕಾಶವನ್ನೂ ಕೊಡಿ: ವಿಪಕ್ಷಗಳಿಗೆ ನರೇಂದ್ರ ಮೋದಿ ವಿನಂತಿ

(Parliament Monsoon Session 2021 Rajya Sabha and Lok Sabha adjourned amid uproar by Opposition MPs)

Published On - 12:24 pm, Mon, 19 July 21

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ