Parliament Monsoon Session: ಅಧಿವೇಶನ ನಡೆಸಲು ವಿಪಕ್ಷಗಳಿಂದ ಅಡ್ಡಿ; ಜನರಿಗೆ ಮಾಡುತ್ತಿರುವ ಅವಮಾನ ಎಂದು ಪ್ರಧಾನಿ ಮೋದಿ ಆಕ್ರೋಶ

| Updated By: ಸುಷ್ಮಾ ಚಕ್ರೆ

Updated on: Aug 03, 2021 | 1:58 PM

ಇಂದು ಬಿಜೆಪಿ ಸಂಸದೀಯ ಸಭೆಯಲ್ಲಿ ಈ ಕುರಿತು ಸಂಸದರ ಜೊತೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಉಭಯ ಸದನಗಳಲ್ಲಿ ವಿರೋಧ ಪಕ್ಷಗಳು ಸೃಷ್ಟಿಸಿದ ಗದ್ದಲದ ಕುರಿತು ಪ್ರಧಾನಿ ಮೋದಿಯವರು ತೀವ್ರವಾಗಿ ಕಿಡಿಕಾರಿದ್ದಾರೆ.

Parliament Monsoon Session: ಅಧಿವೇಶನ ನಡೆಸಲು ವಿಪಕ್ಷಗಳಿಂದ ಅಡ್ಡಿ; ಜನರಿಗೆ ಮಾಡುತ್ತಿರುವ ಅವಮಾನ ಎಂದು ಪ್ರಧಾನಿ ಮೋದಿ ಆಕ್ರೋಶ
ಪ್ರಧಾನಿ ನರೇಂದ್ರ ಮೋದಿ
Follow us on

ನವದೆಹಲಿ: ಈ ಬಾರಿಯ ಮುಂಗಾರು ಅಧಿವೇಶನ ಶುರುವಾಗಿ 3 ವಾರಗಳೇ ಆದರೂ ಒಂದು ದಿನವೂ ಸರಿಯಾಗಿ ಕಲಾಪವನ್ನು ನಡೆಸಲು ಸಾಧ್ಯವಾಗಿಲ್ಲ. ಕೃಷಿ ಕಾಯ್ದೆ, ಪೆಗಾಸಸ್ ಬೇಹುಗಾರಿಕೆ ಮುಂತಾದ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿದಿನವೂ ರಾಜ್ಯಸಭೆ ಮತ್ತು ಲೋಕಸಭಾ ಸದನದಲ್ಲಿ ವಿರೋಧಪಕ್ಷಗಳು ಗಲಾಟೆ ಎಬ್ಬಿಸುತ್ತಿವೆ. ಇಂದಿನ ಅಧಿವೇಶನದಲ್ಲಿ ಕೂಡ ಮತ್ತೆ ಪೆಗಾಸಸ್ ಗೂಢಚಾರಿಕೆಯನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಗಲಾಟೆಯೆಬ್ಬಿಸಿವೆ. ಈ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ. ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ವಿಪಕ್ಷಗಳ ವರ್ತನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದ್ದು, ಸದನದೊಳಗೆ ಹೇಳಿಕೆಯ ಪ್ರತಿಯನ್ನು ಹರಿದುಹಾಕುವುದು, ಸದನದಲ್ಲಿ ಅಂಗೀಕಾರವಾದ ಮಸೂದೆಯ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ. ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪವನ್ನು ಮುಂದೂಡುವಂತೆ ಮಾಡಿದ ವಿರೋಧಪಕ್ಷಗಳ ನಡವಳಿಕೆ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಕಿಡಿ ಕಾರಿದ್ದಾರೆ.

ಇಂದು ಬಿಜೆಪಿ ಸಂಸದೀಯ ಸಭೆಯಲ್ಲಿ ಈ ಕುರಿತು ಸಂಸದರ ಜೊತೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಉಭಯ ಸದನಗಳಲ್ಲಿ ವಿರೋಧ ಪಕ್ಷಗಳು ಸೃಷ್ಟಿಸಿದ ಗದ್ದಲದ ಕುರಿತು ಪ್ರಧಾನಿ ಮೋದಿಯವರು ತೀವ್ರವಾಗಿ ಕಿಡಿಕಾರಿದ್ದಾರೆ. ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದ್ದರೆ ವಿಪಕ್ಷಗಳ ನಾಯಕರು ಕಲಾಪಕ್ಕೆ ಭಂಗ ತರುವ ಮೂಲಕ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ತಮ್ಮನ್ನು ಆಯ್ಕೆ ಮಾಡುವ ದ್ರೋಹ ಬಗೆಯುತ್ತಿದ್ದಾರೆ. ರಾಜ್ಯಸಭಾ ಅಧಿವೇಶನದಲ್ಲಿ ಸಚಿವರ ಕೈಯಿಂದ ಹೇಳಿಕೆಯ ಪ್ರತಿಯನ್ನು ಕಸಿದುಕೊಂಡು ಅದನ್ನು ಹರಿದು ಹಾಕಿರುವುದನ್ನು ನೋಡಿದರೆ ವಿಪಕ್ಷ ನಾಯಕರಿಗೆ ಸಂಸದೀಯ ನಡುವಳಿಕೆ ಬಗ್ಗೆ ಅದೆಷ್ಟು ಗೌರವವಿದೆ ಎಂಬುದು ತಿಳಿಯುತ್ತದೆ ಎಂದು ಪ್ರಧಾನಿ ಮೋದಿ ಅಸಮಾಧಾನ ಹೊರಹಾಕಿದ್ದಾರೆ.

ಸಭೆಯಲ್ಲಿ ಲೋಕಸಭೆಯಲ್ಲಿ ಐಟಿ ಸಚಿವ ಅಶ್ವಿನಿ ವೈಷ್ಣವ್ ಪೆಗಾಸಸ್ ಕುರಿತು ಸ್ಪಷ್ಟನೆ ನೀಡುವ ಸಂದರ್ಭದಲ್ಲಿ, ಟಿಎಂಸಿ ಸಂಸದ ಶಂತನು ಸೇನ್ ಕಾಗದವನ್ನು ಹರಿದು ಹಾಕಿದ ಘಟನೆಯನ್ನುೂ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ. ಈ ಹಿಂದೆ ಪೆಗಾಸಸ್ ವಿವಾದದ ಬಗ್ಗೆ ಹೇಳಿಕೆ ನೀಡಲು ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಎದ್ದು ನಿಂತಾಗ ಅವರ ಕೈಯಿಂದ ಟಿಎಂಸಿ ಸಂಸದ ಶಂತನು ಸೇನ್ ಹೇಳಿಕೆಯ ಪ್ರತಿಯನ್ನು ಕಿತ್ತುಕೊಂಡು ಹರಿದುಹಾಕಿದ್ದರು. ಅದಾದ ಬಳಿಕ ಶಂತನು ಸೇನ್ ಅವರನ್ನು ಅಧಿವೇಶನದಿಂದ ಅಮಾನತು ಮಾಡಲಾಗಿತ್ತು.

ಕೋವಿಡ್ ಹಾವಳಿ ಹಾಗೂ ಅದರಿಂದ ಜನರಿಗೆ ಎದುರಾಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಸರ್ಕಾರ ಪ್ರಯತ್ನಿಸುತ್ತಿದ್ದರೂ ವಿರೋಧ ಪಕ್ಷಗಳು ತಯಾರಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದ್ದಾರೆ.

ಜುಲೈ 19ರಂದು ಮುಂಗಾರು ಅಧಿವೇಶನ ಶುರುವಾಗಿದ್ದು, ಎರಡು ವಾರಗಳಲ್ಲಿ 107 ಗಂಟೆಗಳ ಕಾಲ ನಡೆಯಬೇಕಿದ್ದ ಅಧಿವೇಶನ 18ಗಂಟೆಗಳ ಕಾಲ ಮಾತ್ರ ನಡೆದಿದೆ. ಇದರಿಂದ ತೆರಿಗೆದಾರರ 133 ಕೋಟಿ ರೂ.ಗೂ ಅಧಿಕ ಹಣ ವೆಚ್ಚವಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Babul Supriyo: ಕೇಂದ್ರ ಸಚಿವ ಸ್ಥಾನದಿಂದ ಕೆಳಗಿಳಿದ ಬೆನ್ನಲ್ಲೇ ರಾಜಕೀಯಕ್ಕೆ ಗುಡ್​ ಬೈ ಎಂದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ

ಜಯಪ್ರದಾ ಕುಟುಂಬದಿಂದ ಅನ್ಯಾಯವಾಗಿದೆ, ದಯವಿಟ್ಟು ನ್ಯಾಯ ಕೊಡಿಸಿ: ಸಂಸದೆ ಸುಮಲತಾ ಬಳಿ ವಿಜಯಲಕ್ಷ್ಮಿ ಮನವಿ

Published On - 1:55 pm, Tue, 3 August 21