Parliament Monsoon Session: ಲೋಕಸಭಾ ಅಧಿವೇಶನವನ್ನು ಆಪೋಶನ ತೆಗೆದುಕೊಳ್ಳುತ್ತಿರುವ ಮಣಿಪುರ ಹಿಂಸಾಚಾರ
ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಉಭಯ ಸದನಗಳಲ್ಲಿ ಹೇಳಿಕೆ ನೀಡಬೇಕೆಂಬ ತಮ್ಮ ಬೇಡಿಕೆಯನ್ನು ಮುಂದುವರಿಸಲು ವಿರೋಧ ಪಕ್ಷಗಳು ಮಂಗಳವಾರ ನಿರ್ಧರಿಸಿವೆ.
ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ(Narendra Modi)ಅವರು ಸಂಸತ್ತಿನ ಉಭಯ ಸದನಗಳಲ್ಲಿ ಹೇಳಿಕೆ ನೀಡಬೇಕೆಂಬ ತಮ್ಮ ಬೇಡಿಕೆಯನ್ನು ಮುಂದುವರಿಸಲು ವಿರೋಧ ಪಕ್ಷಗಳು ಮಂಗಳವಾರ ನಿರ್ಧರಿಸಿವೆ. ಲೋಕಸಭೆಯಲ್ಲಿ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಶೀಘ್ರದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ, ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಮಣಿಪುರದಲ್ಲಿ ಎರಡು ತಿಂಗಳಿನಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿಯವರ ಹೇಳಿಕೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಮೈತ್ರಿಕೂಟ ಐಎನ್ಡಿಎಐ(ಇಂಡಿಯಾ) ಮುಂಗಾರು ಅಧಿವೇಶನದ ಮೂರನೇ ದಿನ ಸಂಸತ್ ಭವನದ ಎದುರು ಗಾಂಧಿ ಪ್ರತಿಮೆ ಬಳಿ ಮೌನ ಪ್ರತಿಭಟನೆ ನಡೆಸಿದರು.
ಮತ್ತಷ್ಟು ಓದಿ: Parliament Monsoon Session: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ, ಆಡಳಿತ ಪಕ್ಷಕ್ಕೆ ಟಕ್ಕರ್ ಕೊಡಲು ವಿಪಕ್ಷಗಳು ರಣತಂತ್ರ
ಮಣಿಪುರ ಹಿಂಸಾಚಾರ ಪ್ರಕರಣದ ವಿಚಾರವಾಗಿ ಪ್ರಧಾನಿ ಮೋದಿ ಅವರು ಸಂಸತ್ನಲ್ಲಿ ಹೇಳಿಕೆ ನೀಡಬೇಕು ಎಂದು ಆಗ್ರಹಿಸಿ ಸೋಮವಾರ ಸಂಸತ್ತಿನಲ್ಲಿ ಗದ್ದಲ ನಡೆದಿತ್ತು. ಈ ವೇಳೆ ಅಶಿಸ್ತಿನ ವರ್ತನೆ ತೋರಿದ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರನ್ನು ಸಭಾಧ್ಯಕ್ಷರು ಅಮಾನತುಗೊಳಿಸಿದ್ದರು.
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಚರ್ಚಿಸಲು ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಸಂಸತ್ತಿನ ಹೊರಗೆ ಹಾಗೂ ಒಳಗೆ ಚರ್ಚೆ ನಡೆಯುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:38 am, Tue, 25 July 23