AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament Monsoon Session: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ, ಆಡಳಿತ ಪಕ್ಷಕ್ಕೆ ಟಕ್ಕರ್​ ಕೊಡಲು ವಿಪಕ್ಷಗಳು ರಣತಂತ್ರ

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಡಳಿತ ಪಕ್ಷಕ್ಕೆ ಟಕ್ಕರ್​ ಕೊಡಲು ವಿಪಕ್ಷಗಳು ರಣತಂತ್ರಗಳನ್ನು ಹೆಣೆದಿವೆ.

Parliament Monsoon Session: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ, ಆಡಳಿತ ಪಕ್ಷಕ್ಕೆ ಟಕ್ಕರ್​ ಕೊಡಲು ವಿಪಕ್ಷಗಳು ರಣತಂತ್ರ
H P
| Edited By: |

Updated on:Jul 20, 2023 | 8:23 AM

Share
ನವದೆಹಲಿ, (ಜುಲೈ 20): ಇಂದಿನಿಂದ(ಜುಲೈ 20) ಪ್ರಾರಂಭವಾಗುವ ಸಂಸತ್ ಮುಂಗಾರು ಅಧಿವೇಶನದಲ್ಲಿ(Parliament Monsoon Session) ಕೇಂದ್ರ ಸರ್ಕಾರವು ಒಟ್ಟು 31 ಮಸೂದೆಗಳನ್ನು ಚರ್ಚಿಸುವ ಸಾಧ್ಯತೆಯಿದೆ. ಇವುಗಳನ್ನು ಈಗಾಗಲೇ ಕೆಳಮನೆಯಲ್ಲಿ ಮಂಡಿಸಲಾಗಿದೆ ಮತ್ತು ಜಂಟಿ ಸಮಿತಿಗಳಿಗೆ ಉಲ್ಲೇಖಿಸಲಾಗಿದೆ. ಸುದ್ದಿ ಸಂಸ್ಥೆ ಎಎನ್‌ಐ ಪ್ರಕಟಿಸಿರುವ ಪಟ್ಟಿಯ ಪ್ರಕಾರ, ಡೇಟಾ ರಕ್ಷಣೆ ಮಸೂದೆಯು ಕೇಂದ್ರದ ಕಾರ್ಯಸೂಚಿಯ ಒಂದು ಭಾಗವಾಗಿದೆ.   ಇದರ ನಡುವೆ ಸದ್ಯ ದೇಶದ ಎಲ್ಲರ ಕಣ್ಣುಗಳು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಸುಗ್ರೀವಾಜ್ಞೆ, 2023 ಮಸೂದೆಯ ಮೇಲೆ ಇದೆ. ಇದನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ತೀವ್ರವಾಗಿ ಟೀಕಿಸಿದೆ. ವಿಪಕ್ಷಗಳ ಸಭೆಯಲ್ಲಿಯೂ ಇದನ್ನು ಖಂಡಿಸಲಾಗಿದೆ. ಇಷ್ಟು ದಿನ ಈ ಬಗ್ಗೆ ಸುಮ್ಮನಿದ್ದ ಕಾಂಗ್ರೆಸ್ ಕೂಡ ಬಹಿರಂಗವಾಗಿ ಈ ಮಸೂದೆಯನ್ನು ಟೀಕಿಸಿ, ಎಎಪಿಗೆ ಬೆಂಬಲ ಸೂಚಿಸಿದೆ.

ಇದನ್ನೂ ಓದಿ: All-Party Meeting: ಜು.20ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ, ಮಣಿಪುರ ಹಿಂಸಾಚಾರ ಚರ್ಚೆಗೆ ಕೇಂದ್ರ ಒಪ್ಪಿಗೆ

 ಇತ್ತ ಸರ್ಕಾರವನ್ನ ಇಕ್ಕಟ್ಟಿಗೆ ತಳ್ಳಲು ವಿಪಕ್ಷಗಳು ಸಹ ಸಜ್ಜಾಗಿವೆ. ಮಣಿಪುರ ಗಲಭೆ, ರಾಹುಲ್ ಗಾಂಧಿ ಅನರ್ಹತೆ, ದೆಹಲಿ ಸುಗ್ರೀವಾಜ್ಞೆ, ಪ್ರವಾಹ, ಒರಿಸ್ಸಾ ರೈಲು ದುರಂತ,  ಬೆಲೆ ಏರಿಕೆ, ನಿರುದ್ಯೋಗ ಮತ್ತು ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚೆಗೆ ವಿಪಕ್ಷಗಳ ಪಟ್ಟು ಹಿಡಿಯುವ ಸಾಧ್ಯತೆಗಳಿವೆ.

ಈ ಬಾರಿಯ ಅಧಿವೇಶನದಲ್ಲಿ ಒಟ್ಟು 31 ಬಿಲ್ ಮಂಡನೆ ಸಾಧ್ಯತೆ ಇದೆ. ಈ 31 ಬಿಲ್ ಲೋಕಸಭೆಯಲ್ಲಿ ಸರಾಗವಾಗಿ ಪಾಸ್ ಆಗಲಿದ್ದು ರಾಜ್ಯಸಭೆಯಲ್ಲಿ ಬಿಲ್ ಪಾಸ್ ಮಾಡಲು ವಿಪಕ್ಷಗಳು ಅಡ್ಡಿಗೆ ಯತ್ನಿಸಬಹುದು. ಸದ್ಯ ರಾಜ್ಯಸಭೆಯ ಒಟ್ಟು 238 ಸಂಸದರಿದ್ದು, ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಗಳು ಒಟ್ಟಾಗಿ 111 ಸದಸ್ಯರನ್ನು ಹೊಂದಿವೆ (ನಾಮನಿರ್ದೇಶಿತ ಸಂಸದರು ಸೇರಿದಂತೆ) ಬಿಜೆಡಿ, ವೈಎಸ್‌ಆರ್‌ಸಿಪಿ, ಬಿಎಸ್‌ಪಿ, ಟಿಡಿಪಿ ಮತ್ತು ಜೆಡಿಎಸ್ ಹೊರತುಪಡಿಸಿ ಪ್ರತಿಪಕ್ಷಗಳು 106 ಸದಸ್ಯರನ್ನ ಹೊಂದಿದೆ.

ಮುಂಗಾರು ಅಧಿವೇಶನವನ್ನು ಸುಗಮವಾಗಿ ನಡೆಸಲು ನಿನ್ನೆ  ಸರ್ವಪಕ್ಷಗಳ ಸಭೆ ನಡೆಸಲಾಗಿದ್ದು, 34 ಪಕ್ಷಗಳು ಮತ್ತು 44 ನಾಯಕರು ಹಾಜರಾಗಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಿಂದ ಪ್ರಾರಂಭವಾಗಿ ಆಗಸ್ಟ್ 11 ರಂದು ಮುಕ್ತಾಯವಾಗಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:22 am, Thu, 20 July 23

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?