Union Budget 2022: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭ; ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

Parliament Budget Session 2022: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭಗೊಳ್ಳಲಿದೆ. 2022ನೇ ಸಾಲಿನ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ.

Union Budget 2022: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭ; ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ
ಸಂಸತ್ ಭವನ

ಸಂಸತ್ತಿನ ಬಜೆಟ್ ಅಧಿವೇಶನ (Budget Session) ಜನವರಿ 31ರಿಂದ ಆರಂಭಗೊಳ್ಳಲಿದೆ. 2022ನೇ ಸಾಲಿನ ಕೇಂದ್ರ ಬಜೆಟ್ (Union Budget) ಫೆಬ್ರವರಿ 1ರಂದು ಮಂಡನೆಯಾಗಲಿದೆ. ಅಧಿವೇಶನದ ಎರಡನೇ ಭಾಗವು ಮಾರ್ಚ್ 14 ರಂದು ಪ್ರಾರಂಭವಾಗಿ ಏಪ್ರಿಲ್ 8 ರವರೆಗೆ ಇರುತ್ತದೆ. ಈ ಕುರಿತು ಸರ್ಕಾರ ಶುಕ್ರವಾರ ಮಾಹಿತಿ ನೀಡಿದ್ದು, ಸಂಸತ್ತಿನ ಬಜೆಟ್ ಅಧಿವೇಶನಕ್ಕಾಗಿ ಜನವರಿ 31 ರಂದು ಸಭೆ ನಡೆಯಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಫೆಬ್ರವರಿ 1 ರಂದು 2022-23ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಬಜೆಟ್ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ ಬಳಿಕ, ಬಜೆಟ್ ಮೇಲಿನ ಚರ್ಚೆ ಆರಂಭಗೊಳ್ಳಲಿದೆ. ಫೆಬ್ರವರಿ 11ಕ್ಕೆ ಅಧಿವೇಶನದ ಮೊದಲ ಭಾಗ ಮುಕ್ತಾಯವಾಗಲಿದೆ. ಒಂದು ತಿಂಗಳ ನಂತರ ಅಧಿವೇಶನದ ಎರಡನೇ ಭಾಗವು ಮಾರ್ಚ್ 14ರಂದು ಆರಂಭವಾಗಿ ಏಪ್ರಿಲ್ 8ರವರೆಗೆ ನಡೆಯಲಿದೆ.

ಸಂಸತ್ ಚಳಿಗಾಲದ ಅಧಿವೇಶನವು  ನವೆಂಬರ್ 29ರಂದು ಆರಂಭವಾಗಿ ಡಿಸೆಂಬರ್ 22ರಂದು ಮುಕ್ತಾಯವಾಗಿತ್ತು. ಇದೀಗ ದೇಶದಲ್ಲಿ ದೈನಂದಿನ 2 ಲಕ್ಷಕ್ಕೂ ಅಧಿಕ ಕೊವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿರಿವ ಬೆನ್ನಲ್ಲೇ ಬಜೆಟ್ ಅಧಿವೇಶನ ಘೋಷಿಸಲಾಗಿದೆ. ಇತ್ತೀಚೆಗಷ್ಟೇ ಸಂಸತ್​್ನ 400ಕ್ಕೂ ಅಧಿಕ ಸಿಬ್ಬಂದಿಗಳಿಗೆ ಕೊವಿಡ್ ಸೋಂಕು ತಗುಲಿತ್ತು.

ಇದನ್ನೂ ಓದಿ:

ಕೊವಿಡ್ ಸಂದರ್ಭದಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆ ಮಾಡಬಾರದು: ಹೈಕೋರ್ಟ್

ಇನ್ಸ್ಟಾಗ್ರಾಮ್​ನಲ್ಲಿ 300 ಮಿಲಿಯನ್​ ಫಾಲೋವರ್ಸ್​ ಪಡೆದ ಮೊದಲ ಮಹಿಳೆ ಎನಿಸಿಕೊಂಡ ಕೈಲಿ ಜೆನ್ನರ್

Published On - 12:34 pm, Fri, 14 January 22

Click on your DTH Provider to Add TV9 Kannada