ಸಂಸತ್ತಿನಲ್ಲಿ ಭದ್ರತೆ ಉಲ್ಲಂಘನೆ ಮಾಡಿ ಕಲಾಪದ ವೇಳೆ ಸದನಕ್ಕೆ ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳ ಪೈಕಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಆರೋಪಿಗಳಾದ ಸಾಗರ್ ಶರ್ಮಾ ಮತ್ತು ಮನೋರಂಜನ್ ಮತ್ತು ಇತರೆ ಇಬ್ಬರನ್ನು ಗುಪ್ತಚರ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸಿದೆ. ಸಂಸತ್ತಿನಲ್ಲಿ ಶೂನ್ಯ ವೇಳೆಯಲ್ಲಿ ಪ್ರೇಕ್ಷಕರ ಗ್ಯಾಲರಿಯಿಂದ ಮಹಡಿಗೆ ಹಾರಿ ಕಲಾಪಕ್ಕೆ ಅಡ್ಡಿಪಡಿಸಲಾಗಿತ್ತು.
ಸಂಸತ್ತಿನ ಭದ್ರತಾ ಲೋಪದ ಕುರಿತು ತನಿಖೆ ನಡೆಸಲು ಕೇಂದ್ರ ಗೃಹ ಸಚಿವಾಲಯ ಬುಧವಾರ ಸಮಿತಿಯನ್ನು ರಚಿಸಿದೆ.
ಸಂಸತ್ತಿನಲ್ಲಿ 4 ಜನರನ್ನು ಬಂಧಿಸಿದ ನಂತರ ಪೊಲೀಸರು ಐದನೇ ವ್ಯಕ್ತಿಗಾಗಿ ಹುಡುಕಾಟ ನಡೆಸಿದರು. ನೀಲಂ ಮತ್ತು ಅನ್ಮೋಲ್ ಅವರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬರು ಚಿತ್ರೀಕರಿಸುತ್ತಿರುವುದು ಕಂಡುಬಂದಿದೆ. ಪೊಲೀಸರು ಮಹಿಳೆಯನ್ನು ಕರೆದುಕೊಂಡು ಹೋಗುವುದನ್ನು ಕಂಡ ಕೂಡಲೇ ಓಡಿ ಹೋಗಿದ್ದಾನೆ.
ನಂತರ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದರು ಮತ್ತು ಅವರನ್ನು ಗುರುಗ್ರಾಮದಲ್ಲಿ ಬಂಧಿಸಲಾಯಿತು. ವ್ಯಕ್ತಿಯನ್ನು ಲಲಿತ್ ಝಾ ಎಂದು ಗುರುತಿಸಲಾಗಿದೆ.
ಪೊಲೀಸರು ಈಗಾಗಲೇ ಲೋಕಸಭೆಯ ಚೇಂಬರ್‌ನ ಸಾಗರ್ ಶರ್ಮಾ ಹಾಗೂ ಮನೋರಂಜನ್ ಎಂಬುವವರನ್ನು ಪೊಲೀಸರು ತಕ್ಷಣವೇ ವಶಕ್ಕೆ ಪಡೆದಿದ್ದರು.
ಮತ್ತಷ್ಟು ಓದಿ: ಲೋಕಸಭೆಯಲ್ಲಿ ಭದ್ರತಾ ವೈಫಲ್ಯ: CRPF ಡಿಜಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ ಗೃಹ ಇಲಾಖೆ
ಘಟನೆ ಏನು?
ಮಧ್ಯಾಹ್ನ 1 ಗಂಟೆ ಆಸುಪಾಸಿಗೆ ಪ್ರೇಕ್ಷಕರ ಗ್ಯಾಲರಿಯಿಂದ ಇಬ್ಬರು ಸ್ಪೀಕರ್ ಬಳಿ ಹಾರಿ ಬಂದು ಅಶ್ರುವಾಯು ಸಿಡಿಸಿದ್ದರು. ಬಳಿಕ ಇಬ್ಬರನ್ನು ಸಂಸದರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.
ಪ್ರತಿಪಕ್ಷಗಳ ನಾಯಕರಿಂದ ರಾಷ್ಟ್ರಪತಿ ಭೇಟಿ
ಸಂಸತ್ತಿನಲ್ಲಿ ಬುಧವಾರ ಸಂಭವಿಸಿದ ಭಾರೀ ಭದ್ರತಾ ಲೋಪಕ್ಕೆ ಸಂಬಂಧಿಸಿ ಪ್ರತಿಪಕ್ಷಗಳ ನಾಯಕರ ನಿಯೋಗವೊಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದೆ.
ಈ ಘಟನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಉಭಯ ಸದನಗಳಲ್ಲಿ ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಂಸತ್ತಿನ ಭದ್ರತೆಯ ಮರು ಪರಿಶೀಲನೆ ಕೋರಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಗೃಹ ಸಚಿವಾಲಯಕ್ಕೆ ಪತ್ರ ಬರೆಯುವ ಸಾಧ್ಯತೆ ಇದೆ.
ಓಂ ಬಿರ್ಲಾ ಹೇಳಿದ್ದೇನು?
ಶೂನ್ಯ ಸಮಯದಲ್ಲಿ ನಡೆದ ಘಟನೆಯ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ. ದೆಹಲಿ ಪೊಲೀಸರಿಗೆ ಅಗತ್ಯ ಸೂಚನೆಗಳನ್ನು ಸಹ ನೀಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಇದು ಕೇವಲ ಹೊಗೆ ಎಂದು ಕಂಡುಬಂದಿದೆ. ಹೊಗೆಯ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದರು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:05 am, Thu, 14 December 23