ಸಂಸತ್ತಿನಲ್ಲಿ ಭದ್ರತಾ ಲೋಪ: ಆರೋಪಿ ಸಾಗರ್ ಸಂಸತ್ತಿನೆದುರು ಬೆಂಕಿ ಹಚ್ಚಿಕೊಳ್ಳಲು ಪ್ಲ್ಯಾನ್​ ಮಾಡಿದ್ದ

ಸಂಸತ್ತಿನ ಭದ್ರತೆಯ ಲೋಪ ದೇಶವನ್ನು ಬೆಚ್ಚಿಬೀಳಿಸಿದೆ. ಈ ಪ್ರಕರಣದಲ್ಲಿ ಎಲ್ಲ ಆರೋಪಿಗಳನ್ನು ದೆಹಲಿ ಪೊಲೀಸರ ವಿಶೇಷ ದಳ ಬಂಧಿಸಿದೆ. ಪೊಲೀಸರ ವಿಚಾರಣೆ ವೇಳೆ ದಿನಕ್ಕೊಂದು ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ಬಂಧಿತ ಆರೋಪಿ ಸಾಗರ್ ಶರ್ಮಾ ತಾನು ಸಂಸತ್ತಿನ ಹೊರಗೆ ಬೆಂಕಿ ಹಚ್ಚಿಕೊಳ್ಳಲು ತೀರ್ಮಾನಿಸಿದ್ದೆ ಎಂದು ಹೇಳಿದ್ದಾರೆ. ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಇಬ್ಬರು ವ್ಯಕ್ತಿಗಳು ಸದನಕ್ಕೆ ನುಗ್ಗಿ ಹೊಗೆ ಬಾಂಬ್​ ಹಾಕಿದ್ದರು.

ಸಂಸತ್ತಿನಲ್ಲಿ ಭದ್ರತಾ ಲೋಪ: ಆರೋಪಿ ಸಾಗರ್ ಸಂಸತ್ತಿನೆದುರು ಬೆಂಕಿ ಹಚ್ಚಿಕೊಳ್ಳಲು ಪ್ಲ್ಯಾನ್​ ಮಾಡಿದ್ದ
ಸಾಗರ್ ಶರ್ಮಾ
Image Credit source: The India Daily

Updated on: Dec 16, 2023 | 10:36 AM

ಸಂಸತ್ತಿನ ಭದ್ರತೆಯ ಲೋಪ ದೇಶವನ್ನು ಬೆಚ್ಚಿಬೀಳಿಸಿದೆ. ಈ ಪ್ರಕರಣದಲ್ಲಿ ಎಲ್ಲ ಆರೋಪಿಗಳನ್ನು ದೆಹಲಿ ಪೊಲೀಸರ ವಿಶೇಷ ದಳ ಬಂಧಿಸಿದೆ. ಪೊಲೀಸರ ವಿಚಾರಣೆ ವೇಳೆ ದಿನಕ್ಕೊಂದು ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ಬಂಧಿತ ಆರೋಪಿ ಸಾಗರ್ ಶರ್ಮಾ ತಾನು ಸಂಸತ್ತಿನ ಹೊರಗೆ ಬೆಂಕಿ ಹಚ್ಚಿಕೊಳ್ಳಲು ತೀರ್ಮಾನಿಸಿದ್ದೆ ಎಂದು ಹೇಳಿದ್ದಾರೆ. ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಇಬ್ಬರು ವ್ಯಕ್ತಿಗಳು ಸದನಕ್ಕೆ ನುಗ್ಗಿ ಹೊಗೆ ಬಾಂಬ್​ ಹಾಕಿದ್ದರು.

ದೆಹಲಿ ಪೊಲೀಸರ ವಿಚಾರಣೆ ವೇಳೆ ಸಾಗರ್ ತನ್ನನ್ನು ತಾನು ಸುಟ್ಟುಕೊಳ್ಳಲು ಬಯಸಿದ್ದೆ, ಆದರೆ ನಂತರ ಈ ಯೋಜನೆಯನ್ನು ಕೈಬಿಡಲಾಗಿತ್ತು ಎಂದು ಹೇಳಿದ್ದಾನೆ. ಜೆಲ್​ ಒಂದನ್ನು ಆನ್​ಲೈನ್​ನಲ್ಲಿ ಆರ್ಡರ್ ಮಾಡಲು ಬಯಸಿದ್ದೆ ಈ ಜೆಲ್​ ಅನ್ನು ದೇಹದ ಮೇಲೆ ಹಚ್ಚಿಕೊಳ್ಳುವ ಮೂಲಕ ಬೆಂಕಿಯಿಂದ ರಕ್ಷಣೆ ಪಡೆಯಬಹುದು, ಆದರೆ ಆನ್​ಲೈನ್​ ಹಣ ಪಾವತಿ ಸಾಧ್ಯವಾಗಿರಲಿಲ್ಲ, ಹೀಗಾಗಿ ಜೆಲ್ ಖರೀದಿಸಲಾಗಲಿಲ್ಲ, ನಂತರ ಸಂಸತ್ತಿನ ಹೊರಗೆ ಬೆಂಕಿ ಹಚ್ಚಿಕೊಳ್ಳುವ ಯೋಜನೆಯನ್ನು ಕೈಬಿಡಲಾಯಿತು ಎಂದಿದ್ದಾನೆ.

ಆರೋಪಿಗಳು ಘಟನೆ ನಡೆಸಲು ಒಂದಲ್ಲ ಎರಡಲ್ಲ 7 ಹೊಗೆ ಕ್ಯಾನ್‌ಗಳೊಂದಿಗೆ ಆಗಮಿಸಿದ್ದರು. ಆರೋಪಿಗಳು ಗೂಗಲ್ ನಲ್ಲಿ ಸರ್ಚ್ ಮಾಡಿ ಸಂಸತ್ ಭವನದ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದರು. ಸಂಸತ್ ಭದ್ರತೆಯ ಹಳೆಯ ವೀಡಿಯೋಗಳನ್ನೂ ಒಳಗೊಂಡ ವಿಡಿಯೋದಿಂದ ಸುತ್ತಮುತ್ತಲಿನ ಪ್ರದೇಶಗಳ ಬಗ್ಗೆ ಸಾಕಷ್ಟು ವಿಷಯಗಳು ತಿಳಿದುಬಂದವು.

ಮತ್ತಷ್ಟು ಓದಿ: ಸಂಸತ್ತಿನೊಳಗೆ ನಡೆದ ಹೊಗೆ ದಾಳಿ ಹಿಂದಿರುವ ಮಾಸ್ಟರ್​ ಮೈಂಡ್​ ಲಲಿತ್ ಅಲ್ಲ, ಮತ್ಯಾರು? ಇಲ್ಲಿದೆ ಮಾಹಿತಿ

ಈ ಕಾರಣಕ್ಕಾಗಿಯೇ ಈ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳೆಲ್ಲರೂ ಸಿಗ್ನಲ್ ಆ್ಯಪ್‌ನಲ್ಲಿ ಪರಸ್ಪರ ಮಾತನಾಡಿಕೊಳ್ಳುತ್ತಿದ್ದು, ಯಾರನ್ನೂ ಹಿಡಿಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಮಾಧ್ಯಮಗಳಲ್ಲಿ ತಮ್ಮ ಪ್ರಭಾವವನ್ನು ಸಾಬೀತುಪಡಿಸುವುದೇ ಆರೋಪಿಗಳ ನಿಜವಾದ ಉದ್ದೇಶ ಎಂದು ಮೂಲಗಳು ತಿಳಿಸಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಸದನದ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗಲೇ ಸಂಸತ್ ಪ್ರವೇಶಿಸುವ ಯೋಜನೆ ಸಿದ್ಧಪಡಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us