ಸಂಸತ್ತಿನ ಭದ್ರತೆ ಉಲ್ಲಂಘನೆ: ಆರೋಪಿಗಳ ಮೊಬೈಲ್ನ ಬಿಡಿ ಭಾಗಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆ
ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಎಲ್ಲಾ ಆರೋಪಿಗಳ ಮೊಬೈಲ್ನ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ದೆಹಲಿ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ, ಎಲ್ಲಾ ಆರೋಪಿಗಳ ಫೋನ್‌ಗಳು ಲಲಿತ್ ಝಾ ಬಳಿ ಇತ್ತು ಎನ್ನಲಾಗಿದೆ. ಬಂಧಿತ ಆರನೇ ಆರೋಪಿ ಮಹೇಶ್ ಕುಮಾವತ್‌ನನ್ನು ಪೊಲೀಸರು ನ್ಯಾಯಾಲಯದಿಂದ ಏಳು ದಿನಗಳ ಕಸ್ಟಡಿಗೆ ಪಡೆದಿದ್ದಾರೆ.

ಆರು ಆರೋಪಿಗಳಾದ ಸಾಗರ್, ಮನೋರಂಜನ್, ನೀಲಂ ಆಜಾದ್, ಅಮೋಲ್ ಶಿಂಧೆ, ಲಲಿತ್ ಝಾ ಮತ್ತು ಮಹೇಶ್ ಅವರನ್ನು ಬಂಧಿಸಲಾಗಿದೆ. ಲಲಿತ್ ಝಾ ಕೆಲವು ದಿನಗಳ ನಂತರ ಸಿಕ್ಕಿಬೀಳುವ ಭಯದಿಂದ ಎಲ್ಲಾ ಫೋನ್‌ಗಳನ್ನು ಸುಟ್ಟು ಹಾಕಿದ್ದಾಗಿ ಒಪ್ಪಿಕೊಂಡಿದ್ದಾರೆ. 2 ವರ್ಷಗಳಿಂದ ದೇಶದ ವಿರುದ್ಧ ಷಡ್ಯಂತ್ರ ರೂಪಿಸಲಾಗಿತ್ತು.
ಡಿಸೆಂಬರ್ 13 ರಂದು ಸಂಸತ್ತಿನ ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಸಾಗರ್ ಹಾಗೂ ಮನೋರಂಜ್ ಸಂದನದ ಒಳಗೆ ನುಗ್ಗಿದ್ದರು, ಬಳಿಕ ಹೊಗೆ ಬಾಂಬ್ ಸಿಡಿಸಿದ್ದರು. ಅವರನ್ನು ತಕ್ಷಣವೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು, ಸಂಸತ್ತಿನ ಹೊರಗೆ ಘೋಷಣೆ ಕೂಗುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರು. ನಂತರ ಲಲಿತ್ ಝಾ ಪೊಲೀಸರಿಗೆ ಶರಣಾಗಿದ್ದ, ಒಂದು ದಿನದ ಬಳಿಕ ಮಹೇಶ್ನನ್ನೂ ಪೊಲೀಸರು ಬಂಧಿಸಿದ್ದಾರೆ.
ಮತ್ತಷ್ಟು ಓದಿ: ಸಂಸತ್ ಭದ್ರತಾ ಲೋಪ: ಆರೋಪಿಗಳಿಗೆ ಪೊಲೀಸರು ಕೇಳಿದ 18 ಪ್ರಶ್ನೆಗಳಿವು
ಈ ಘಟನೆ ಕುರಿತು ಸದನದಲ್ಲಿ ಪ್ರತಿಭಟನೆ ಮಾಡಿದ್ದ 13 ಸಂಸದರಲ್ಲಿ ಸ್ಪೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ. ಈ ಕುರಿತು ಸಚಿವೆ ಸ್ಮೃತಿ ಇರಾನಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸಂಸದೆ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾತನಾಡಿ, ಲೋಕಸಭೆ ಸ್ಪೀಕರ್ ಅವರು ಯಾವುದೇ ಪಕ್ಷಪಾತವಿಲ್ಲದೆ ದೇಶದ ಪ್ರತಿಯೊಂದು ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ಮಂಡಿಸಲು ಎಲ್ಲಾ ಪಕ್ಷಗಳ ನಾಯಕರಿಗೆ ಅವಕಾಶ ನೀಡಿದ್ದಾರೆ ಆದರೆ ಅಮಾನತುಗೊಂಡಿರುವ 13 ಸಂಸದರು ರಾಜಕೀಯ ಮಾಡಲು ಪ್ರಯತ್ನಿಸಿದ್ದರು ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ